ದಾವಣಗೆರೆ: ಕಾಡಾನೆ ದಾಳಿಗೆ 18 ವರ್ಷದ ಯುವತಿ ಸಾವು; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Twitter
Facebook
LinkedIn
WhatsApp

ದಾವಣಗೆರೆ: ಜಿಲ್ಲೆಯಲ್ಲಿ ಮತ್ತೆ ಕಾಡಾನೆಗಳ ಹಾವಳಿ ಶುರುವಾಗಿದ್ದು, ಕವನಾ ಎಂಬ 18 ವರ್ಷದ ಯುವತಿ ಕಾಡಾನೆ ದಾಳಿಗೆ ಸಾವನ್ನಪ್ಪಿರುವ ಘಟನೆ ಚನ್ನಗಿರಿ ತಾಲೂಕಿನ ಸೋಮಲಾಪು ಗ್ರಾಮದಲ್ಲಿ ನಡೆದಿದೆ.
ಹೌದು ಅವರೆ ಕಾಯಿ ಹರಿಯಲು ಜಮೀನಿಗೆ ಹೋದ ವೇಳೆ ಮೂರು ಕಾಡಾನೆಗಳು ಏಕಕಾಲಕ್ಕೆ ದಾಳಿ ನಡೆಸಿದ್ದು ಆನೆಗಳ ಕಾಲ್ತುಳಿತದಿಂದ ತೀವ್ರಗಾಯಗೊಂಡ ಬಾಲಕಿಯನ್ನ ಜಿಲ್ಲಾಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.
ಇನ್ನು ಕಳೆದ ಎರಡು ವರ್ಷಗಳಿಂದ ಸೋಮಲಾಪುರ ಹಾಗೂ ಸೂಳೆಕೆರೆ ಅರಣ್ಯ ಪ್ರದೇಶದಲ್ಲಿ ಕಾಡಾನೆಗಳ ಹಿಂಡು ಸುತ್ತಾಡುತ್ತಿದ್ದು, ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಆನೆಗಳನ್ನ ಅರಣ್ಯಕ್ಕೆ ಅಟ್ಟಲು ಗ್ರಾಮಸ್ಥರು ವಿನಂತಿಸಿದ್ದಾರೆ. ಇತ್ತ ಮಗಳನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.