ಗುರುವಾರ, ಮೇ 9, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದಿಲ್ಲೀಲಿ ವಕೀಲರೊಂದಿಗೆ ಗಡಿ ವಿಚಾರ ಚರ್ಚೆ: ಸಿಎಂ ಬೊಮ್ಮಾಯಿ

Twitter
Facebook
LinkedIn
WhatsApp
ದಿಲ್ಲೀಲಿ ವಕೀಲರೊಂದಿಗೆ ಗಡಿ ವಿಚಾರ ಚರ್ಚೆ: ಸಿಎಂ ಬೊಮ್ಮಾಯಿ

ಮೈಸೂರು(ನ.29):  ಗಡಿ ವಿವಾದದ ಕುರಿತು ನ.30ರಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದ್ದು, ಈ ಸಂಬಂಧ ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿ ವಿವಾದದ ಬಗ್ಗೆ ದೆಹಲಿಯಲ್ಲಿ ಹಿರಿಯ ವಕೀಲ ಮುಕುಲ್‌ ರೋಹಟಗಿ ಅವರನ್ನು ಇಂದು(ಮಂಗಳವಾರ) ಭೇಟಿ ಮಾಡುತ್ತೇನೆ. ಗಡಿ ಆಯೋಗದ ಅಧ್ಯಕ್ಷ ಶಿವರಾಜ ಪಾಟೀಲ್‌ ಜೊತೆಗೂ ಮಾತುಕತೆ ನಡೆಸುತ್ತೇನೆ. ಕೋರ್ಟ್‌ನಲ್ಲಿ ನಡೆಸಬೇಕಾದ ವಾದದ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ತಿಳಿಸಿದರು.

ಮೈಸೂರು ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮಹಾರಾಷ್ಟ್ರದ ಹಲವು ಹಳ್ಳಿಗಳ ಜನ ಕರ್ನಾಟಕಕ್ಕೆ ಸೇರಲು ಉತ್ಸುಕರಾಗಿದ್ದಾರೆ. ಆದರೆ, ಗಡಿ ವಿವಾದ ವಿಚಾರಣೆಯ ಹಂತದಲ್ಲಿರುವುದರಿಂದ ನಾವು ಹೆಚ್ಚು ಮಾತನಾಡುವುದಿಲ್ಲ. ನ.30ರಂದು ಗಡಿ ವಿಚಾರದ ತೀರ್ಪು ಬರುತ್ತದೆ. ಆ ತೀರ್ಪಿನ ಸಾಧಕ-ಬಾಧಕಗಳ ಬಗ್ಗೆ ಪೂರ್ವಚರ್ಚೆ ನಡೆಸುತ್ತೇನೆ. ಗಡಿ ವಿವಾದ ಸುಪ್ರೀಂಕೋರ್ಟ್‌ನಲ್ಲೇ ತೀರ್ಮಾನವಾಗಲಿದೆ ಎಂದರು.

ಮಹಾರಾಷ್ಟ್ರ ಬಸ್‌ಗಳಿಗೆ ಕನ್ನಡ ಬಾವುಟ ಕಟ್ಟಿಕರವೇ ಗಾಂಧಿಗಿರಿ

ಅಥಣಿ: ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮೆರೆದಿದ್ದ ಶಿವಸೇನಾ ಕಾರ್ಯಕರ್ತರ ನಡೆ ಖಂಡಿಸಿ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಕರವೇ ಕಾರ್ಯಕರ್ತರು ಗಾಂಧಿಗಿರಿ ಪ್ರದರ್ಶಿಸಿದ್ದಾರೆ. ಸೋಮವಾರ ಅಥಣಿಯ ಶಿವಯೋಗಿ ವೃತ್ತದಲ್ಲಿ ಜಮಾಯಿಸಿದ ಕರವೇ (ಪ್ರವೀಣ್‌ ಶೆಟ್ಟಿಬಣ) ಕಾರ್ಯಕರ್ತರು ಮಹಾರಾಷ್ಟ್ರ ಸಾರಿಗೆ ವಾಹನ ತಡೆದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ, ಡಿಸಿಎಂ ದೇವೇಂದ್ರ ಫಡ್ನವೀಸ್‌, ಎಂಇಎಸ್‌ ಹಾಗೂ ಶಿವಸೇನೆ ಪುಂಡರ ವಿರುದ್ಧ ಧಿಕ್ಕಾರ ಕೂಗಿದರು. ಜತ್‌, ಸೊಲ್ಲಾಪುರ, ಅಕ್ಕಲಕೋಟ,ಲಾತೂರ್‌ಗಳನ್ನು ಕರ್ನಾಟಕಕ್ಕೆ ಸೇರಿಸುವಂತೆ ಆಗ್ರಹಿಸಿದರು. ಬಳಿಕ, ಚಾಲಕ ಮತ್ತು ನಿರ್ವಾಹಕರಿಗೆ ಕನ್ನಡ ಶಲ್ಯ ನೀಡಿ ಸನ್ಮಾನಿಸಿದರು. ಅಲ್ಲದೆ, ಮಹಾರಾಷ್ಟ್ರದ ವಾಹನಕ್ಕೆ ಕನ್ನಡ ಬಾವುಟ ಕಟ್ಟಿಕಳುಹಿಸುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ನಂತರ, ಅಂಬೇಡ್ಕರ್‌ ವೃತ್ತದವರೆಗೆ ಪಾದಯಾತ್ರೆ ನಡೆಸಿದ ಕರವೇ ಕಾರ್ಯಕರ್ತರು, ಏಕನಾಥ್‌ ಶಿಂಧೆ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ, ಆಕ್ರೋಶ ವ್ಯಕ್ತಪಡಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ