ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದಿ ಕಾಶ್ಮೀರ್‌‌ ಫೈಲ್‌‌’ ಚಿತ್ರ ವೀಕ್ಷಣೆಗೆ ಆಕ್ಷೇಪ ವ್ಯಕ್ತಪಡಿಸಿದ ಬಿಕೆ ಹರಿಪ್ರಸಾದ್

Twitter
Facebook
LinkedIn
WhatsApp
ದಿ ಕಾಶ್ಮೀರ್‌‌ ಫೈಲ್‌‌’ ಚಿತ್ರ ವೀಕ್ಷಣೆಗೆ ಆಕ್ಷೇಪ ವ್ಯಕ್ತಪಡಿಸಿದ ಬಿಕೆ ಹರಿಪ್ರಸಾದ್

ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿಯವರು ‘ದಿ ಕಾಶ್ಮೀರ್‌‌ ಫೈಲ್‌‌’ ಸಿನಿಮಾ ವೀಕ್ಷಣೆಗೆ ಪ್ರಕಟಣೆ ಹೊರಡಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಪರಿಷತ್‌ನ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ವೀಕ್ಷಿಸಲು ಸರ್ಕಾರವೇ ಉತ್ಸಾಹ ತೋರಿಸುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಸಿನಿಮಾಗೆ ತೆರಿಗೆ ವಿನಾಯಿತಿ ಘೋಷಿಸಿದ್ದು, ವಿಧಾನಸಭೆಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಚಿತ್ರವನ್ನು ವೀಕ್ಷಿಸಲು ಸಚಿವರು ಹಾಗೂ ಶಾಸಕರಿಗೆ ವ್ಯವಸ್ಥೆ ಮಾಡಿರುವುದಾಗಿ ಘೋಷಿಸಿದ್ದಾರೆ.

ಇದೀಗ ವಿಧಾನ ಪರಿಷತ್​ನಲ್ಲಿ ಇದೇ ಘೋಷಣೆಯನ್ನು ಸಭಾಪತಿ ಬಸವರಾಜ ಹೊರಟ್ಟಿ ಮಾಡಿದ್ದು, ಪ್ರತಿಪಕ್ಷಗಳಿಂದ ಭಾರಿ ವಿರೋಧ ವ್ಯಕ್ತವಾಗಿದೆ. ಈ ಪ್ರಕಟಣೆಯನ್ನು ವಾಪಾಸು ಪಡೆಯುವಂತೆ ಕಾಂಗ್ರೆಸ್ ಸದಸ್ಯರು ಒತ್ತಾಯಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಗುಜರಾತ್ ಹತ್ಯಾಕಾಂಡದ ಕುರಿತು ‘ಫರ್ಜಾನಿಯಾ’ ಮತ್ತು ವಾರಣಾಸಿ ದಲಿತ ಮಹಿಳೆಯ ಅತ್ಯಾಚಾರದ ಕುರಿತು ‘ವಾಟರ್’ ಎಂಬ ಎರಡು ಸಿನಿಮಾಗಳು ಇವೆ ಅವನ್ನೂ ತೋರಿಸಿ ಎಂದು ಹೇಳಿದ್ದಾರೆ.
‘‘ನಾವು ಯಾವ ಸಿನಿಮಾ ನೋಡಬೇಕು ಎಂದು ಸದನದಲ್ಲಿ ಹೇಳುವ ಹಾಗಿಲ್ಲ. ಕೆಲವರು ಸದನದಲ್ಲಿ ಅಶ್ಲೀಲ ಚಿತ್ರ ನೋಡಿದ್ದಾರೆ. ನಾವೂ ಹಾಗಾದ್ರೆ ಅದನ್ನು ನೋಡಬೇಕಾ? ಸರ್ಕಾರ ಪಿಚ್ಚರ್ ತೋರಿಸೋದಕ್ಕೆ ಇದೆಯಾ? ಸಭಾಪತಿ ನಿಷ್ಪಕ್ಷಪಾತಿ ಆಗಿರಬೇಕು. ಪೀಠದಿಂದ ಯಾಕೆ ಇದನ್ನು ಹೇಳಿಸ್ತೀರಾ?’’ ಎಂದು ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಜೆಟ್ ಚರ್ಚೆ ಬಿಟ್ಟು ಸಿನಿಮಾ ಯಾಕೆ ನೋಡಬೇಕು ಎಂದು ಪ್ರಶ್ನಿಸಿದ ಅವರು ಸದನದಲ್ಲಿ ಮಾಡಿದ ಘೋಷಣೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ