ದೆಹಲಿ: ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವನ್ನು ಎಲ್ಲರೂ ನೋಡಬೇಕೆಂದು ಬಿಜೆಪಿ ಬಯಸಿದರೆ, ಚಿತ್ರ ನಿರ್ಮಾಪಕ ವಿವೇಕ್ ಅಗ್ನಿಹೋತ್ರಿ ಅದನ್ನು ಯೂಟ್ಯೂಬ್‌ನಲ್ಲಿ ಬಿಡುಗಡೆ ಮಾಡಲಿ, ಹಾಗಾದರೆ ಅದು ಎಲ್ಲರಿಗೂ ಸಿಗುತ್ತದೆ ಎಂದು ಹೇಳಿದ್ದಾರೆ.
ಕಾಶ್ಮೀರ ಫೈಲ್ಸ್ ಚಲನಚಿತ್ರವನ್ನು ರಾಜ್ಯದಲ್ಲಿ ತೆರಿಗೆ ಮುಕ್ತಗೊಳಿಸಬೇಕೆಂದು ಒತ್ತಾಯಿಸಿ ದೆಹಲಿ ವಿಧಾನಸಭೆಯಲ್ಲಿ ಬಿಜೆಪಿ ಶಾಸಕರು ನಡೆಯುತ್ತಿರುವ ಬಜೆಟ್ ಅಧಿವೇಶನಕ್ಕೆ ಅಡ್ಡಿಪಡಿಸಿದ ಒಂದು ದಿನದ ನಂತರ ಮುಖ್ಯಮಂತ್ರಿ ಕೇಜ್ರಿವಾಲ್, ಚಲನಚಿತ್ರ ನಿರ್ಮಾಪಕ ವಿವೇಕ್ ಅಗ್ನಿಹೋತ್ರಿ ಪ್ರತಿಯೊಬ್ಬರೂ ಚಲನಚಿತ್ರವನ್ನು ವೀಕ್ಷಿಸಬೇಕೆಂದು ಬಯಸುತ್ತಾರೆ. ಅವರು ಅದನ್ನು ಯೂಟ್ಯೂಬ್ ಗೆ ಹಾಕಿದರೆ ಎಲ್ಲರಿಗೂ ಸಿಗುತ್ತದೆ ಎಂದಿದ್ದಾರೆ.
ಇಂದು ದೇಶಾದ್ಯಂತ ಬಿಜೆಪಿಯವರು ಬೀದಿ ಬೀದಿಗಳಲ್ಲಿ ಸಿನಿಮಾದ ಪೋಸ್ಟರ್‌ಗಳನ್ನು ಹಾಕುತ್ತಿದ್ದಾರೆ. ಇದನ್ನು ಮಾಡಲು ನೀವು ರಾಜಕೀಯಕ್ಕೆ ಬಂದಿದ್ದೀರಾ? ನೀವು ಮನೆಗೆ ಹೋದಾಗ ನಿಮ್ಮ ಮಕ್ಕಳಿಗೆ ಏನು ಹೇಳುತ್ತೀರಿ?. 8 ವರ್ಷ ಕೇಂದ್ರ ಸರ್ಕಾರದಲ್ಲಿ ಅಧಿಕಾರ ನಡೆಸಿದ ನಂತರ ದೇಶದ ಪ್ರಧಾನಿಯೊಬ್ಬರು ವಿವೇಕ್ ಅಗ್ನಿಹೋತ್ರಿಯ ಪಾದಗಳನ್ನು ಆಶ್ರಯಿಸಬೇಕು ಎಂದರೆ ಅವರು ತಮ್ಮ 8 ವರ್ಷಗಳ ಅಧಿಕಾರಾವಧಿಯಲ್ಲಿ ಏನನ್ನೂ ಮಾಡಲಿಲ್ಲ. ಕಾಶ್ಮೀರ್ ಫೈಲ್ಸ್ ತೆರಿಗೆ ಮುಕ್ತ ಮಾಡಿ ಎಂದು ಹೇಳುತ್ತಿದ್ದಾರೆ. ಅರೇ, ಯೂಟ್ಯೂಬ್‌ನಲ್ಲಿ ಹಾಕಿ ಬಿಡಿ, ಎಲ್ಲರಿಗೂ ಉಚಿತವಾಗಿ ಸಿಗುತ್ತದೆ. ತೆರಿಗೆ ಮುಕ್ತ ಯಾಕೆ ಮಾಡುತ್ತಿದ್ದೀರಿ? ನಿಮಗೆ ಅಷ್ಟೊಂದು ಆಸಕ್ತಿ ಇದ್ದರೆ ವಿವೇಕ್ ಅಗ್ನಿಹೋತ್ರಿಯಲ್ಲೇ ಹೇಳಿ, ಅವರು ಯೂಟ್ಯೂಬ್‌ನಲ್ಲಿ ಹಾಕುತ್ತಾರೆ. ಇಡೀ ಸಿನಿಮಾ ಉಚಿತ, ಎಲ್ಲರೂ ಒಂದೇ ದಿನದಲ್ಲಿ ನೋಡಿಬಿಡಬಹುದು ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist