ಬುಧವಾರ, ಏಪ್ರಿಲ್ 24, 2024
ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!-ಶುಕ್ರವಾರ ಮತದಾನದಂದು ಮತಗಟ್ಟೆಯಲ್ಲಿ ಮೊಬೈಲ್ ಫೋನ್ ಕೊಂಡೊಯ್ಯಲು ನಿಷೇಧ..!-164.53 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!-ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!-ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ; ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ-ಬರ್ತ್ ಡೇ ಕೇಕ್ ತಿಂದು ಬಾಲಕಿ ಸಾವು ಪ್ರಕರಣ: ಅಸಲಿ ಕಾರಣ ಬಯಲು.!-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದುಷ್ಟ ಶಕ್ತಿ ಓಡಿಸುವುದಾಗಿ ಬಾಲಕನ ಮೇಲೆ ಮಾರಣಾಂತಿಕ ಹಲ್ಲೆ; ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Twitter
Facebook
LinkedIn
WhatsApp
2608788573985947636

ಮುಂಬೈ: ಅಸ್ವಸ್ಥ ಬಾಲಕನ ಮೈಯಲ್ಲಿ ದೆವ್ವ ಹೊಕ್ಕಿದೆ ಎಂದು ಕುಟುಂಬಸ್ಥರನ್ನು ನಂಬಿಸಿ ಮಂತ್ರಿವಾದಿ ಓರ್ವ ಮನ ಬಂದಂತೆ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ಕರ್ನಾಟಕದ ಬೆಳಗಾವಿ ಜಿಲ್ಲೆಯ ರಾಯಭಾಗದ ಶಿರ್​ಗೂರಿನಲ್ಲಿ ನಡೆದಿದೆ.ಆರ್ಯನ್​ ದೀಪಕ್​ ಲಂಡ್ಗೆ(14) ಮೃತ ದುರ್ದೈವಿ ಎಂದು ತಿಳಿದಿ ಬಂದಿದ್ದು ಅಪ್ಪಾ ಸಾಹೇಬ್​ ಕಾಂಬ್ಲೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. 

ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಮಿರಾಜ್​ ತಾಲ್ಲೂಕಿನ ಬಾಲಕ ಆರ್ಯನ್​ ಕಳೆದ ಕೆಲವು ದಿನಗಳಿಂದ ತೀವ್ರ ಜ್ಷರದಿಂದ ಬಳಲುತ್ತಿದ್ದ ವೈದ್ಯರು ಹಾಗೂ ಆಯುರ್ವೇದದ ಔಷಧಿಗಳಿಗೂ ಆತ ಗುಣಮುಖನಾಗಿರಲಿಲ್ಲ. ಇದೇ ವೇಳೆ ಆರ್ಯನ್​ ಕುಟುಂಬಸ್ಥರಿಗೆ ಸ್ನೇಹಿತರೊಬ್ಬರು ಶಿರಗೂರಿನಲ್ಲಿರುವ ಮಂತ್ರವಾದಿ ಅಪ್ಪಾ ಸಾಹೇಬ್ ಕುರಿತು ಹೇಳಿ ಭೇಟಿ ನೀಡುವಂತೆ ಹೇಳಿದ್ದಾರೆ. ಸ್ನೇಹಿತನ ಮಾತನ್ನು ನಂಬಿದ ಕುಟುಂಬಸ್ಥರು ಅಸ್ವಸ್ಥ ಆರ್ಯನ್​ನನ್ನು ಕರೆದುಕೊಂಡು ಶಿರಗೂರಿನಲ್ಲಿರುವ ಅಪ್ಪಾ ಸಾಹೇಬ್​ನನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಆರೋಪಿಯೂ ಬಾಲಕನ ಮೈಯಲ್ಲಿ ದೆವ್ವ ಹೊಕ್ಕಿದೆ ಎಂದು ಕುಟುಂಬಸ್ಥರನ್ನು ನಂಬಿಸಿ ಆತನ ಮೇಲೆ ಮನ ಬಂದಂತೆ ಹಲ್ಲೆ ನಡೆಸಿದ್ದಾನೆ. 

ತೀವ್ರವಾಗಿ ಗಾಯಗೊಂಡಿದ್ದ ಅಸ್ವಸ್ಥ ಬಾಲಕನನ್ನು ಕುಟುಂಬಸ್ಥರು ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಆರ್ಯನ್​ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.

 

ಈ ವಿಚಾರವನ್ನು ತಿಳಿದ ಅಂಧಶ್ರದ್ಧಾ ನಿರ್ಮೂಲನೆ ಸಮಿತಿ ಸದಸ್ಯರು ಮೃತ ಬಾಲಕಮನ ಕುಟುಂಬಸ್ಥರನ್ನು ಮನವೊಲಿಸಿ ಪೊಲೀಸರ ಬಳಿ ದೂರು ದಾಖಲಿಸಿದ್ದಾರೆ ಮತ್ತು ಮಂತ್ರವಾದಿಯ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ