ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣ; ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ.!

Twitter
Facebook
LinkedIn
WhatsApp
ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣ; ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ.!

ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್​ ಸಿಸೋಡಿಯಾ(Manish Sisodia) ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಮೇ 31ರವರೆಗೆ ವಿಸ್ತರಿಸಲಾಗಿದೆ. ಕೊರೊನಾ ಅವಧಿಯಲ್ಲಿ ದೆಹಲಿಯ ಆಮ್ ಆದ್ಮಿ ಪಕ್ಷದ ಸರ್ಕಾರವು ದೆಹಲಿ ಅಬಕಾರಿ ನೀತಿ 2021-22 ಅನ್ನು ಜಾರಿಗೊಳಿಸಿತ್ತು. ಲೆಫ್ಟಿನೆಂಟ್ ಗವರ್ನರ್ ಅವರು ಸಿಬಿಐ ತನಿಖೆಗೆ ಶಿಫಾರಸು ಮಾಡಿದ ನಂತರ ಈ ಮದ್ಯ ನೀತಿಯ ಅನುಷ್ಠಾನದಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಲಾಗಿದೆ.

ಇದರೊಂದಿಗೆ, ದೆಹಲಿ ಅಬಕಾರಿ ನೀತಿ 2021-22 ಪ್ರಶ್ನಾರ್ಹವಾಗಿದೆ. ಆದರೆ, ಅದರ ರಚನೆ ಮತ್ತು ಅನುಷ್ಠಾನದಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಹೊಸ ಮದ್ಯ ನೀತಿಯನ್ನು ನಂತರ ರದ್ದುಗೊಳಿಸಲಾಯಿತು.

ಹೊಸ ಮದ್ಯ ನೀತಿಯಲ್ಲಿ ನಿಯಮಗಳ ಉಲ್ಲಂಘನೆ ಮತ್ತು ಕಾರ್ಯವಿಧಾನದ ಅಕ್ರಮಗಳ ಆರೋಪದ ಮೇಲೆ 15 ಆರೋಪಿಗಳ ವಿರುದ್ಧ ಸಿಬಿಐ ಆಗಸ್ಟ್ 2022 ರಲ್ಲಿ ಈ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿದೆ. ಸಿಬಿಐ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ನಂತರ PMLA ಅಡಿಯಲ್ಲಿ ಮನಿ ಲಾಂಡರಿಂಗ್ ಪ್ರಕರಣದ ತನಿಖೆಯನ್ನು ಪ್ರಾರಂಭಿಸಿತು.

ದೆಹಲಿ ಸರ್ಕಾರದ ಹೊಸ ಮದ್ಯ ನೀತಿಯಲ್ಲಿನ ಹಗರಣದ ಬಗ್ಗೆ ಇಡಿ ಮತ್ತು ಸಿಬಿಐ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿವೆ. ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ಅಕ್ರಮ ಹಣ ವರ್ಗಾವಣೆಯ ಆರೋಪಗಳನ್ನು ಇಡಿ ತನಿಖೆ ನಡೆಸುತ್ತಿದೆ.

ದೆಹಲಿ ಮದ್ಯ ನೀತಿ ಅಕ್ರಮಗಳ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಮತ್ತು ಇಡಿ ಎರಡೂ ಸಂಸ್ಥೆಗಳು ಇದುವರೆಗೆ 15 ಕ್ಕೂ ಹೆಚ್ಚು ಜನರನ್ನು ಬಂಧಿಸಿವೆ. ಆರು ಆರೋಪಪಟ್ಟಿಗಳನ್ನು ಸಿದ್ಧಪಡಿಸಿದೆ.

 

ಬಂಧಿತರಲ್ಲಿ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ, ಸಂಜಯ್ ಸಿಂಗ್, ವಿಜಯ್ ನಾಯರ್, ಕೆ. ಕವಿತಾ, ಮಾಗುಂಟ ಶ್ರೀನಿವಾಸ್ ರೆಡ್ಡಿ, ರಾಘವ್ ಮಂಗುಟ, ಸಮೀರ್ ಮಹೇಂದ್ರು, ಅರುಣ್ ರಾಮಚಂದ್ರನ್, ರಾಜೇಶ್ ಜೋಶಿ, ಗೋರಂಟ್ಲ ಬುಚ್ಚಿಬಾಬು, ಅಮಿತ್ ಅರೋರಾ, ಗೌತಮ್ ಮಲ್ಹೋತ್ರಾ, ಅರುಣ್ ಪಿಳ್ಳೈ, ಬೆನೋಯ್ ಬಾಬು (ಫ್ರೆಂಚ್ ಲಿಕ್ಕರ್ ಕಂಪನಿ ಪೆರ್ನೋಡ್ ರಿಕಾರ್ಡ್‌ನ ಜನರಲ್ ಮ್ಯಾನೇಜರ್), ಪಿ.ಶರತ್ ಚಂದ್ರ ರೆಡ್ಡಿ, ಅರಬಿಂದೋ ಫಾರ್ಮಾ ಕಂಪನಿಯ ನಿರ್ದೇಶಕ   ಅಮನ್‌ದೀಪ್ ಧಾಲ್ ಮತ್ತು ಉದ್ಯಮಿ ಅಭಿಷೇಕ್ ಬೋಯಿನ್‌ಪಲ್ಲಿ. ಸಂಜಯ್ ಸಿಂಗ್ ಈ ಪೈಕಿ ಹಲವು ಆರೋಪಿಗಳು ಜಾಮೀನು ಪಡೆದಿದ್ದರೆ ಕೆಲವರು ಸರ್ಕಾರಿ ಸಾಕ್ಷಿಗಳೂ ಆಗಿದ್ದಾರೆ. ಮೇ 10 ರಂದು ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ಪಡೆದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist