ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೆಹಲಿ ಮದ್ಯನೀತಿ ಹಗರಣ – KCR ಪುತ್ರಿ ಕವಿತಾಗೆ ED ಸಮನ್ಸ್

Twitter
Facebook
LinkedIn
WhatsApp
kavitha reddy1669898843

ನವದೆಹಲಿ: ತೆಲಂಗಾಣ ಮುಖ್ಯಮಂತ್ರಿ (Telangana CM) ಕೆ ಚಂದ್ರಶೇಖರ್ ರಾವ್ (K Chandrashekar Rao) ಅವರ ಪುತ್ರಿ ಹಾಗೂ ಭಾರತ್ ರಾಷ್ಟ್ರ ಸಮಿತಿ (BRS) ನಾಯಕಿ ಕೆ ಕವಿತಾ (K Kavitha) ಅವರಿಗೆ ದೆಹಲಿಯ ಅಬಕಾರಿ ಹಗರಣಕ್ಕೆ (Delhi Liquor Scam) ಸಂಬಂಧಿಸಿದಂತೆ ವಿಚಾರಣೆ ನಡೆಸಲು ಜಾರಿ ನಿರ್ದೇಶನಾಲಯ (ED) ಗುರುವಾರ ಹಾಜರಾಗುವಂತೆ ಸಮನ್ಸ್ ನೀಡಿದೆ.

ಇದೀಗ ರದ್ದಾಗಿರುವ ದೆಹಲಿಯ ಮದ್ಯನೀತಿಯಲ್ಲಿ ಅಕ್ರಮ ಹಾಗೂ ಭ್ರಷ್ಟಾಚಾರ ನಡೆದಿರುವುದಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಮೂಲದ ಉದ್ಯಮಿ ಅರುಣ್ ರಾಮಚಂದ್ರನ್ ಪಿಳ್ಳೈ ಅವರನ್ನು ಇಡಿ ಸೋಮವಾರ ವಿಚಾರಣೆ ನಡೆಸಿ, ಮಂಗಳವಾರ ಬಂಧಿಸಿತ್ತು. ಪಿಳ್ಳೈ ಮದ್ಯನೀತಿ ಪ್ರಕರಣದಲ್ಲಿ ಆರೋಪಿಯಾಗಿದ್ದು, ಕವಿತಾಗೆ ಕಂಪನಿಯೊಂದರಲ್ಲಿ ಸಹಾಯ ಮಾಡುತ್ತಿದ್ದರು ಎನ್ನಲಾಗಿದೆ. 

May be an image of 2 people, people sitting, people standing and indoor

ಇಡಿ ಪ್ರಕರಣದ ಚಾರ್ಜ್‌ಶೀಟ್‌ನಲ್ಲಿ ಕೆ ಕವಿತಾ ಅವರನ್ನು ಹೆಸರಿಸಿದೆ. ಅವರು ಮದ್ಯದ ಕಂಪನಿಯಾದ ಇಂಡೋಸ್ಪಿರಿಟ್ಸ್‌ನಲ್ಲಿ ಶೇ.65 ರಷ್ಟು ಪಾಲನ್ನು ಹೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಕಳೆದ ವರ್ಷ ಡಿಸೆಂಬರ್ 11ರಂದು ಇಡಿ ಕವಿತಾ ಅವರನ್ನು ಪ್ರಶ್ನಿಸಿತ್ತು.

ಮಾರ್ಚ್ 10ರಂದು ಮಹಿಳಾ ಮೀಸಲಾತಿ ಮಸೂದೆಗೆ ಒತ್ತಾಯಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಕವಿತಾ ಕರೆ ನೀಡಿದ್ದಾರೆ ಹಾಗೂ ಪ್ರತಿಪಕ್ಷದ ಪಾಳೆಯದ ಎಲ್ಲಾ ನಾಯಕರು ಭಾಗವಹಿಸಲು ವಿನಂತಿಸಿದ್ದಾರೆ. ಆದರೆ ಈ ನಡುವೆ ಇಡಿ ಕವಿತಾ ಅವರಿಗೆ ಸಮನ್ಸ್ ನೀಡಿದ್ದು, ಮಾರ್ಚ್ 9ರಂದು ಇಡಿ ಕಚೇರಿಗೆ ಅವರು ಹಾಜರಾಗಬೇಕಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ