ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೇವೇಗೌಡರ ಕುಟುಂಬಕ್ಕೆ ಹೊಸ ಸದಸ್ಯನ ಆಗಮನ.

Twitter
Facebook
LinkedIn
WhatsApp
ದೇವೇಗೌಡರ ಕುಟುಂಬಕ್ಕೆ ಹೊಸ ಸದಸ್ಯನ ಆಗಮನ.

ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ನಟ ನಿಖಿಲ್​ ಕುಮಾರಸ್ವಾಮಿ ಹಾಗೂ ರೇವತಿ ದಂಪತಿಗೆ ಗಂಡು ಮಗು ಜನನವಾಗಿದೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರೇವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ, ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.

ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರು, ‘ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಪ್ರಾರ್ಥನೆ ಮಾಡುತ್ತೇನೆ’ ಎಂದು ಹೇಳಿದ್ದಾರೆ.
2020ರ ಏಪ್ರಿಲ್​ನಲ್ಲಿ ರೇವತಿ ಜೊತೆ ನಿಖಿಲ್​ ಕುಮಾರಸ್ವಾಮಿ ಸಪ್ತಪದಿ ತುಳಿದಿದ್ದರು. ಲಾಕ್​ಡೌನ್​ ನಿಯಮಗಳ ಅನುಸಾರ ಈ ಹೈಪ್ರೊಫೈಲ್​ ಕುಟುಂಬದಲ್ಲಿ ವಿವಾಹ ಸಮಾರಂಭ ನೆರವೇರಿತ್ತು. ಬಿಡದಿ ಬಳಿ ಇರುವ ಫಾರ್ಮ್​ಹೌಸ್​ನಲ್ಲಿ ರೇವತಿ ಮತ್ತು ನಿಖಿಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ರೇವತಿ ಪ್ರೆಗ್ನೆಂಟ್​ ಎಂಬ ಸುದ್ದಿ ಇತ್ತೀಚಿನ ಕೆಲವು ತಿಂಗಳುಗಳಿಂದ ಕೇಳಿಬರುತ್ತಿತ್ತು. ಈ ವರ್ಷ ಜೂನ್​ನಲ್ಲಿ ಆ ಬಗ್ಗೆ ಸ್ವತಃ ನಿಖಿಲ್​ ಪ್ರತಿಕ್ರಿಯೆ ನೀಡಿದ್ದರು. ‘ಕೇಳಿಬರುತ್ತಿರುವ ಸುದ್ದಿ ನಿಜ. ನಾವು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ. ಶೀಘ್ರದಲ್ಲಿ ನಮ್ಮ ಕುಟುಂಬಕ್ಕೆ ಹೊಸ ಅತಿಥಿ ಬರಲಿದ್ದಾರೆ’ ಎಂದು ನಿಖಿಲ್​ ಹೇಳಿದ್ದರು. ಈಗ ಅವರಿಗೆ ಗಂಡು ಮಗು ಜನನವಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು