ಮಂಗಳವಾರ, ಮೇ 7, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೇವೇಗೌಡರ ಬಗ್ಗೆ ಹಗುರ ಮಾತು: ಕ್ಷಮೆ ಕೋರುವಂತೆ ಕೆ.ಎನ್. ರಾಜಣ್ಣಗೆ ಡಿ.ಕೆ. ಸಹೋದರರ ಅಗ್ರಹ

Twitter
Facebook
LinkedIn
WhatsApp
ದೇವೇಗೌಡರ ಬಗ್ಗೆ ಹಗುರ ಮಾತು: ಕ್ಷಮೆ ಕೋರುವಂತೆ ಕೆ.ಎನ್. ರಾಜಣ್ಣಗೆ ಡಿ.ಕೆ. ಸಹೋದರರ ಅಗ್ರಹ

ನವದೆಹಲಿ: ದೇಶ ಹಾಗೂ ರಾಜ್ಯಕ್ಕೆ ಸೇವೆ ಸಲ್ಲಿಸಿರುವ ಹಿರಿಯ ನಾಯಕ, ಪೂಜ್ಯ ಸಮಾನರಾದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಆರೋಗ್ಯದ ಬಗ್ಗೆ ಕಾಂಗ್ರೆಸ್ ಮುಖಂಡ, ಮಾಜಿ ಶಾಸಕ ಕೆ.ಎನ್. ರಾಜಣ್ಣ ನೀಡಿರುವ ಹೇಳಿಕೆ ಖಂಡನೀಯ ಮತ್ತು ಅಮಾನವೀಯ. ಕೂಡಲೇ ಅವರು ದೇವೇಗೌಡರ ಕ್ಷಮೆ ಕೇಳುವಂತೆ ಸೂಚನೆ ನೀಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ.

ದೆಹಲಿಯಲ್ಲಿರುವ ಡಿ ಕೆ ಶಿವಕುಮಾರ್ ಅವರು ವಿಡಿಯೋ ಸಂದೇಶದ ಮೂಲಕ ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.

ನಮ್ಮ ಪಕ್ಷದ ನಾಯಕರಾದ ರಾಜಣ್ಣ ಅವರು ಹಿರಿಯ ನಾಯಕ ದೇವೇಗೌಡರ ಆರೋಗ್ಯ ಪರಿಸ್ಥಿತಿ ಬಗ್ಗೆ ಆಡಿರುವ ಮಾತನ್ನು ಇಡೀ ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ಪಕ್ಷದ ನಾಯಕನಾಗಿ, ವ್ಯಯಕ್ತಿಕವಾಗಿಯೂ ಇದನ್ನು ಖಂಡಿಸುತ್ತೇನೆ. ಯಾರೇ ನಾಯಕರು ಮಾನವೀಯತೆಯನ್ನು ಮೆರೆಯಬೇಕು. ಸಮಾಜ ಹಾಗೂ ದೇಶಕ್ಕೆ ಸೇವೆ ಮಾಡಿರುವ ಹಿರಿಯ ನಾಯಕರಾದ ದೇವೇಗೌಡರ ಬಗ್ಗೆ ಇಂತಹ ಹೇಳಿಕೆ ನೀಡಿದ್ದು ಸರಿಯಲ್ಲ.

ದೇವೇಗೌಡರು ಪ್ರಧಾನಿಯಾಗಲು ಹಿಂದೆ ಕಾಂಗ್ರೆಸ್ ಪಕ್ಷವೇ ಬೆಂಬಲ ನೀಡಿತ್ತು. ನಾವು ದೇವೇಗೌಡರನ್ನು ಬಹಳ ಗೌರವಯುತವಾಗಿ ಕಾಣುತ್ತಿದ್ದೇವೆ. ಅಂತಹ ಹಿರಿಯ ನಾಯಕರ ಆರೋಗ್ಯದ ಬಗ್ಗೆ ಈ ರೀತಿ ಮಾತನಾಡುವುದು ಸರಿಯಲ್ಲ. ನಾನು ಕೂಡಲೇ ರಾಜಣ್ಣ ಅವರಿಗೆ ದೂರವಾಣಿ ಕರೆ ಮಾಡಿ ಕ್ಷಮೆ ಕೋರುವಂತೆ ಸೂಚನೆ ನೀಡುತ್ತೇನೆ. ಇಂತಹ ಹೇಳಿಕೆಗಳಿಗೆ ನಾವು ಅವಕಾಶ ನೀಡುವುದಿಲ್ಲ. ಪೂಜ್ಯ ಸಮಾನರಾದ ದೇವೇಗೌಡರಿಗೆ ಉತ್ತಮ ಆರೋಗ್ಯ ಮತ್ತು ಇನ್ನಷ್ಟು ಸೇವೆ ಮಾಡುವ ಅವಕಾಶವನ್ನು ದೇವರು ಕರುಣಿಸಲಿ ಎಂದು ನಾವು ಪ್ರಾರ್ಥನೆ ಮಾಡುತ್ತೇವೆ’ ಎಂದು ಶಿವಕುಮಾರ್ ಹೇಳಿದ್ದಾರೆ.

ಮಾಜಿ ಪ್ರಧಾನಿಗಳಾದ ದೇವೇಗೌಡರ ಕುರಿತು ಕೆ.ಎನ್.ರಾಜಣ್ಣ ಅವರು ನೀಡಿರುವ ಹೇಳಿಕೆ ಖಂಡನೀಯ ಎಂದು ಸಂಸದ ಡಿ.ಕೆ. ಸುರೇಶ್ ಅವರು ಹೇಳಿದ್ದಾರೆ.

ದೇವೇಗೌಡರ ಹಿರಿತನಕ್ಕೆ ನಾವೆಲ್ಲರೂ ತಲೆಬಾಗಬೇಕು. ಸಮಾಜದ ಹಿರಿಯರ ಬಗ್ಗೆ ಇಂತಹ ಹಗುರ ಹೇಳಿಕೆ ನೀಡಿರುವುದು ರಾಜಣ್ಣ ಅವರ ಘನತೆಗೆ ಸೂಕ್ತವಲ್ಲ. ರಾಜಣ್ಣ ಅವರು ಕೂಡಲೇ ಕ್ಷಮೆ ಕೋರಬೇಕು. ಇದು ಅವರ ವೈಯಕ್ತಿಕ ಹೇಳಿಕೆಯಾದರೂ, ಅವರು ಕ್ಷಮೆ ಕೋರಬೇಕು. ಇಲ್ಲದಿದ್ದರೆ ಸಮಾಜ ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಸುರೇಶ್ ಅವರು ಎಚ್ಚರಿಸಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ