ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ. ದೇಶದಲ್ಲಿ ಕಾಂಗ್ರೆಸ್ ಬದುಕಿದ್ದರೆ ರಾಷ್ಟ್ರಧ್ವಜವನ್ನು ಉಚಿತವಾಗಿ ನೀಡಲಿ: ಈಶ್ವರಪ್ಪ

Twitter
Facebook
LinkedIn
WhatsApp
ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ. ದೇಶದಲ್ಲಿ ಕಾಂಗ್ರೆಸ್ ಬದುಕಿದ್ದರೆ ರಾಷ್ಟ್ರಧ್ವಜವನ್ನು ಉಚಿತವಾಗಿ ನೀಡಲಿ: ಈಶ್ವರಪ್ಪ

ಶಿವಮೊಗ್ಗ: ರಾಷ್ಟ್ರಧ್ವಜದ ವಿಚಾರದಲ್ಲೂ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ. ಈ ರೀತಿಯ ರಾಜಕಾರಣ ಮಾಡಿದರೆ, ಅವರಿಗೆ ಎಷ್ಟರ ಮಟ್ಟಿಗೆ ರಾಷ್ಟ್ರಪ್ರೇಮ ಇದೆ ಅಂತ ಅರ್ಥ ಆಗುತ್ತದೆ. ಇಡೀ ದೇಶದಲ್ಲಿ ಕಾಂಗ್ರೆಸ್ ಬದುಕಿದ್ದರೆ, ರಾಷ್ಟ್ರಧ್ವಜವನ್ನು ಉಚಿತವಾಗಿ ಕೊಡಲಿ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಸವಾಲ್ ಹಾಕಿದರು.
ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸ್ವಾತಂತ್ರೋತ್ಸವಕ್ಕೂ, ಸಿದ್ದರಾಮಯ್ಯ ಅವರಿಗೂ ಏನು ಸಂಬಂಧ? ಸ್ವಾತಂತ್ರ‍್ಯಕ್ಕಾಗಿ ರಾಷ್ಟ್ರಭಕ್ತರು ಸಾಕಷ್ಟು ಪ್ರಯತ್ನ ಮಾಡಿದ್ದರು. ಸಿದ್ದರಾಮಯ್ಯ ಆಗ ಹುಟ್ಟಿಯೇ ಇರಲಿಲ್ಲ. ಸ್ವಾತಂತ್ರ‍್ಯ ಬಂದ ನಂತರ ಸಿದ್ದರಾಮಯ್ಯ ಹುಟ್ಟಿದ್ದು. ತುರ್ತು ಪರಿಸ್ಥಿತಿ ಬರುವವರೆಗೂ ಸಿದ್ದರಾಮಯ್ಯ ಕಾಂಗ್ರೆಸ್ ವಿರೋಧ ಮಾಡಿಕೊಂಡು ಬಂದವರು. ತುರ್ತು ಪರಿಸ್ಥಿತಿ ಬಂದಾಗ ಇಂದಿರಾ ಗಾಂಧಿ ಅವರಿಗೆ ಧಿಕ್ಕಾರ ಹಾಕಿ ಜೈಲಿಗೆ ಹೋದವರು. ಜೈಲಿನಿಂದ ಹೊರ ಬಂದ ಸಂದರ್ಭದಲ್ಲೂ ಅವರಿಗೆ ರಾಷ್ಟ್ರದ ಬಗ್ಗೆ ಕಲ್ಪನೆ ಇರಲಿಲ್ಲ ಎಂದರು.ಸಿದ್ದರಾಮಯ್ಯ ಅಧಿಕಾರದ ಆಸೆಗಾಗಿ ಬೇರೆ ಬೇರೆ ಪಕ್ಷದಲ್ಲಿದ್ದರು. ಎಲ್ಲೆಲ್ಲಿ ಅಧಿಕಾರ ಸಿಗುತ್ತದೋ ಅಲ್ಲೆಲ್ಲಾ ಹರಿದಾಡಿದರು. ಸಿದ್ದರಾಮಯ್ಯ ಸಿಕ್ಕ ಸಿಕ್ಕಾಗ ಕಾಂಗ್ರೆಸ್‌ಗೆ ಬೈಯುತ್ತಿದ್ದರು. ಈಗ ಕಾಂಗ್ರೆಸ್ ಬಗ್ಗೆ, ರಾಷ್ಟ್ರಧ್ವಜದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು.ಆರ್‌ಎಸ್‌ಎಸ್ ವಿರುದ್ಧ ಮಾತನಾಡುವ ನೈತಿಕತೆ ಸಿದ್ದರಾಮಯ್ಯ ಅವರಿಗಿಲ್ಲ. ರಾಷ್ಟ್ರಧ್ವಜ ಎಲ್ಲೆಲ್ಲಿ ಹಾರಿಸಬೇಕು ಅಂತ ನಮಗೆ ಗೊತ್ತಿದೆ. ಎಲ್ಲೆಲ್ಲಿ ಹಾರಿಸಬೇಕು ಎಂಬುದನ್ನು ಅವರಲ್ಲಿ ಕೇಳಿ ಹಾರಿಸಬೇಕಾ? ಅವರ ರೀತಿ ಅಧಿಕಾರಕ್ಕಾಗಿ ರಾಷ್ಟ್ರಧ್ವಜ ಬಳಸುವುದಿಲ್ಲ ಎಂದು ಹೇಳಿದರು.

ಸಿದ್ದರಾಮಯ್ಯ, ಡಿಕೆಶಿ ಅವರಿಂದ ರಾಷ್ಟ್ರ ಧ್ವಜದ ಬಗ್ಗೆ ಕಲಿಯುವ ಅವಶ್ಯಕತೆ ಇಲ್ಲ. ಸ್ವಾತಂತ್ರ‍್ಯ ಹೋರಾಟಗಾರರ ಆತ್ಮಕ್ಕೆ ಶಾಂತಿ ಸಿಗಬೇಕು. ಆ ರೀತಿ ಆಚರಣೆ ಮಾಡುತ್ತೇವೆ. ಸಿದ್ದರಾಮಯ್ಯ, ಡಿಕೆಶಿ ಅವರಿಗೆ ಸರ್ಕಾರದ ವಿರುದ್ಧ ಟೀಕೆ ಮಾಡದಿದ್ದರೆ ತಿಂದ ಅನ್ನ ಕರಗುವುದಿಲ್ಲ. ಟೀಕೆ ಮಾಡುವುದೇ ಅವರ ಕೆಲಸ, ಒಳ್ಳೆಯ ಕೆಲಸದ ಬಗ್ಗೆ ಮಾತನಾಡಿ ಅವರಿಗೆ ಗೊತ್ತೇ ಇಲ್ಲ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist