ಮಂಗಳವಾರ, ಮೇ 7, 2024
ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ ಬೆಳ್ಳಿಯ ದರದ ವಿವರ-ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೇಶದಲ್ಲಿ ಶಾಂತಿ ನೆಲಸಲು ಭಾರತ್‌ ಜೋಡೋ ಯಾತ್ರೆ: ಸಿದ್ದರಾಮಯ್ಯ

Twitter
Facebook
LinkedIn
WhatsApp
ದೇಶದಲ್ಲಿ ಶಾಂತಿ ನೆಲಸಲು ಭಾರತ್‌ ಜೋಡೋ ಯಾತ್ರೆ: ಸಿದ್ದರಾಮಯ್ಯ

ಗುಂಡ್ಲುಪೇಟೆ: ದೇಶದಲ್ಲಿ ಶಾಂತಿ ನೆಲಸಬೇಕು ಎಂದು ಭಾರತ್‌ ಜೋಡೋ ಯಾತ್ರೆ ಕಾಂಗ್ರೆಸ್‌ ಆರಂಭಿಸಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ಸಾಮರಸ್ಯ, ಐಕ್ಯತೆ ಜನರಲ್ಲಿ ಜಾಗೃತಿ ಮೂಡಿಸಲು ದೇಶದಲ್ಲಿ 3570 ಕೀಮಿ ಪಾದಯಾತ್ರೆ ನಡೆಯಲಿದ್ದು, ರಾಜ್ಯದಲ್ಲಿ 21 ದಿನ 511 ಕೀ.ಮಿ ಪಾದಯಾತ್ರೆ ಸೆ.30 ಆಗಮಿಸಲಿದ್ದು, ರಾಜ್ಯದಲ್ಲಿ 8 ಜಿಲ್ಲೆಗಳಲ್ಲಿ ಭಾರತ್‌ ಜೋಡೋ ಯಾತ್ರೆ ಸಾಗಲಿದೆ ಎಂದರು.

ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ಭಾರತ್‌ ಜೋಡೋ ಯಾತ್ರೆಯ 150 ದಿನಗಳು 3570 ಕಿಮಿ ನಡೆಯಲಿದ್ದು, ಈ ಪಾದಯಾತ್ರೆಯಲ್ಲಿ ಸಹಸ್ರಾರು ಕಾಂಗ್ರೆಸ್ಸಿಗರು ಸೇರಿದಂತೆ ಜನ ಸಾಮಾನ್ಯರು ಭಾಗವಹಿಸಲಿದ್ದಾರೆ ಎಂದರು. ಸೆ.30 ರಂದು ಗುಂಡ್ಲುಪೇಟೆಯಿಂದ ಆರಂಭವಾಗಲಿರುವ ಪಾದಯಾತ್ರೆಯಲ್ಲಿ, ಮೈಸೂರು-ಚಾಮರಾಜನಗರ ಜಿಲ್ಲೆಗಳ 20 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ ಎಂದರು. ಬಳಿಕ ಪಾದಯಾತ್ರೆ ಆರಂಭಗೊಂಡು ಬೇಗೂರು ಬಳಿ ಕಾರ್ನರ್‌ ಮೀಟಿಂಗ್‌ ನಡೆಯಲಿದೆ.

ಬಳಿಕ ಕಿತ್ತೂರು ಚನ್ನಮ್ಮ ವಸತಿ ನಿಲಯದ ಸಮೀಪ ವಾಸ್ತವ್ಯ ಹೂಡಲಿದ್ದಾರೆ. ಮರುದಿನ ಎಂದಿನಂತೆ ಪಾದಯಾತ್ರೆ ಆರಂಭವಾಗಲಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌.ಧ್ರುವನಾರಾಯಣ, ಶಾಸಕ ಯತೀಂದ್ರ ಸಿದ್ದರಾಮಯ್ಯ, ಕಾಂಗ್ರೆಸ್‌ ಮುಖಂಡ ಎಚ್‌.ಎಂ.ಗಣೇಶಪ್ರಸಾದ್‌, ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಪಿ.ಮರಿಸ್ವಾಮಿ, ಮೈಸೂರು ಅಧ್ಯಕ್ಷ ಬಿ.ಜೆ.ವಿಜಯಕುಮಾರ್‌, ಆರ್‌.ಮೂರ್ತಿ, ಕಾಡಾ ಮಾಜಿ ಅಧ್ಯಕ್ಷ ಎಚ್‌.ಎಸ್‌.ನಂಜಪ್ಪ ಇದ್ದರು.

ಐತಿಹಾಸಿಕ ನಡಿಗೆಯಾಗಬೇಕು: ಕಾಂಗ್ರೆಸ್‌ ಪಕ್ಷದ ವರಿಷ್ಠ ರಾಹುಲ್‌ ಗಾಂಧಿ ಅವರು ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಯಲ್ಲಿ ನಡೆಸುವ ಭಾರತ್‌ ಜೋಡೋ ಪಾದಯಾತ್ರೆ ಐತಿಹಾಸಿಕ ನಡಿಗೆಯಾಗಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದಲ್ಲಿ ಭಾರತ್‌ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ರಾಹುಲ್‌ ಗಾಂಧಿಯವರ ಭಾರತ್‌ ಜೋಡೋ ಪಾದಯಾತ್ರೆ ಸೆ.7 ರಂದು ಕನ್ಯಾಕುಮಾರಿಯಲ್ಲಿ ಆರಂಭವಾಗಲಿದೆ. ಉದ್ಘಾಟನಾ ಸಮಾರಂಭದಲ್ಲಿ ನಾನು ಭಾಗವಹಿಸಲಿದ್ದೇನೆ. ದೇಶಾದ್ಯಂತ 3570 ಕಿ.ಮೀ. ಪಾದಯಾತ್ರೆ ನಡೆಯಲಿದೆ. ರಾಜ್ಯದಲ್ಲಿ ಒಟ್ಟು 510 ಕಿ.ಮೀ. ಯಾತ್ರೆ ಸಾಗಲಿದೆ ಎಂದು ಹೇಳಿದರು.

ಸೆ.30 ರಂದು ಗುಂಡ್ಲುಪೇಟೆ ಮೂಲಕ ಪಾದಯಾತ್ರೆ ರಾಜ್ಯ ಪ್ರವೇಶಿಸಲಿದೆ. ಈ ಸಂದರ್ಭದಲ್ಲಿ ರಾಹುಲ್‌ ಗಾಂಧಿಯವರಿಗೆ ಅದ್ಧೂರಿ ಸ್ವಾಗತ ಕೋರಲು ನಿರ್ಧರಿಸಿದೆ. ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಯಲ್ಲಿ ಪಾದಯಾತ್ರೆ ಯಶಸ್ವಿಗೊಳಿಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು. ಉಭಯ ಜಿಲ್ಲೆಯಲ್ಲಿ ನಡೆಯುವ ಪಾದಯಾತ್ರೆ ನೆನಪಿನಲ್ಲಿ ಉಳಿಯುವಂತಿರಬೇಕು. ಇದರ ಜವಾಬ್ದಾರಿಯನ್ನು ಎರಡೂ ಜಿಲ್ಲೆಯ ಮುಖಂಡರು ವಹಿಸಿಕೊಳ್ಳಬೇಕು. ಯಾವುದೇ ರಾಜಕೀಯ ಪಕ್ಷಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಇರಬೇಕು. ಮತ್ತೊಂದು ಪಕ್ಷದ ವಿನಾಶಕ್ಕೆ ಮುಂದಾಗಬಾರದು. ಬೇರೆ ಬೇರೆ ಪಕ್ಷಗಳು ಈ ವ್ಯವಸ್ಥೆಯಲ್ಲಿ ಇರಬೇಕು ಎಂಬ ಮನೋಭಾವ ಹೊಂದಿರಬೇಕು. ಆದರೆ ಬಿಜೆಪಿ ಇದಕ್ಕೆ ತದ್ವಿರುದ್ಧವಾಗಿದೆ ಎಂದು ಅವರು ಕಿಡಿಕಾರಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ