ಶುಕ್ರವಾರ, ಏಪ್ರಿಲ್ 26, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬಿದ್ದು ದೈವನರ್ತಕ ಮೃತ್ಯು

Twitter
Facebook
LinkedIn
WhatsApp
All about coconut tree 27

ಕಡಬ, ಮಾ 30 (DaijiworldNews/HR)ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಇಹಲೋಕ ತ್ಯಜಿಸಿದ ಘಟನೆ ಮಾ.30ರ ಮುಂಜಾನೆ ಎಡಮಂಗಲ ಗ್ರಾಮದಲ್ಲಿ ನಡೆದಿದೆ.

ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರುವಾಸಿಯಾಗಿದ್ದ ಕಾಂತು ಅಜಿಲ ಮೂಲಂಗೀರಿಯವರು ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಮಾ.30 ರಂದು ಎಡಮಂಗಲ ಗ್ರಾಮದ ಇಡ್ಯಡ್ಕದಲ್ಲಿ ಗ್ರಾಮಕ್ಕೆ ಸಂಬಂಧಿಸಿದ ನೇಮೊತ್ಸವ ನಡೆಯುತ್ತಿತ್ತು. ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬೀಳುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ದರೂ ಫಲ ನೀಡಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಕಾಂತು ಅಜಿಲ ಮೂಲಂಗೀರಿಯವರು ಎಡಮಂಗಲ ಪರಿಸರದಲ್ಲಿ ಮತ್ತು ಇತರ ಕಡೆಗಳಲ್ಲಿಯೂ ದೊಡ್ಡ ದೊಡ್ಡ ದೈವಗಳ ನರ್ತನ ಸೇವೆಯನ್ನು ಮಾಡುತ್ತಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ