ಭೋಪಾಲ್: ಲೈಂಗಿಕ ದೌರ್ಜನ್ಯಕ್ಕೆ ಪ್ರತಿರೋಧ ವ್ಯಕ್ತಪಡಿಸಿದ ಮಹಿಳೆಯ ಮೇಲೆ ಕ್ರೂರಿಗಳ ಗುಂಪೊಂದು ಪೇಪರ್ ಕಟರ್‌ನಿಂದ ಹಲ್ಲೆ ನಡೆಸಿದ ಪರಿಣಾಮ ಆಕೆಯ ಮುಖಕ್ಕೆ ಬರೋಬ್ಬರಿ 118 ಹೊಲಿಗೆಗಳನ್ನು ಹಾಕಲಾಗಿದೆ. ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಈ ಘಟನೆ ನಡೆದಿದ್ದು, ಮಹಿಳೆಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಭೋಪಾಲ್‌ನ ಟಿಟಿ ನಗರ ಪ್ರದೇಶದಲ್ಲಿ ಶುಕ್ರವಾರ ಅಮಾನುಷ ಕೃತ್ಯ ಎಸಗಲಾಗಿದೆ.
ಇಬ್ಬರು ಆರೋಪಿಗಳಾದ ಬಾದ್‌ಶಾ ಬೇಗ್ ಮತ್ತು ಅಜಯ್ ಅಲಿಯಾಸ್ ಬಿಟ್ಟಿ ಸಿಬ್ದೆ ಎಂಬುವವರನ್ನು ಬಂಧಿಸಲಾಗಿದೆ. ಮೂರನೇ ಆರೋಪಿಯನ್ನು ಸೆರೆ ಹಿಡಿಯಲು ಪ್ರಯತ್ನ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೋಟೆಲ್‌ನ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳನ್ನು ಬಂಧಿಸಲಾಗಿದೆ.
ಬೈಕ್ ಪಾರ್ಕಿಂಗ್‌ಗೆ ಸಂಬಂಧಿಸಿದಂತೆ ಮಹಿಳೆ ಮತ್ತು ಆರೋಪಿಗಳ ಮಧ್ಯೆ ಜಗಳ ಶುರುವಾಗಿತ್ತು ಎನ್ನಲಾಗಿದೆ.
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಭಾನುವಾರ ಬೆಳಿಗ್ಗೆ ದಂಪತಿಯನ್ನು ಭೇಟಿ ಮಾಡಿ, ಮಹಿಳೆಯ ವೈದ್ಯಕೀಯ ಚಿಕಿತ್ಸೆಗೆ ಸಂಪೂರ್ಣ ಸಹಾಯದ ಭರವಸೆ ನೀಡಿದ್ದಾರೆ. ಮಹಿಳೆಯ ಧೈರ್ಯವನ್ನು ಪ್ರಶಂಸಿಸಿದ ಅವರು, ಅವರಿಗೆ ಒಂದು ಲಕ್ಷ ರೂ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಅವರು ಬೇರೆಯ ಮಹಿಳೆಯರಿಗೆ ಉದಾಹರಣೆ ಸೃಷ್ಟಿಸಿದ್ದಾರೆ ಎಂದು ಸಿಎಂ ಹೇಳಿದ್ದಾರೆ.
“ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist