ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ದ್ರೌಪದಿಗೆ ಕೃಷ್ಣ ಸಹಾಯ ಮಾಡಿದಂತೆ ನಮಗೆ ಸಹಾಯ ಮಾಡಿ: ಮೋದಿಗೆ ಕಂಗನಾ ಮನವಿ

Twitter
Facebook
LinkedIn
WhatsApp
Tirumala 090615 4

ಮುಂಬೈ: ನಟಿ ತುನಿಷಾ ಶರ್ಮಾ (Tunisha Sharma) ಅವರ ಸಾವಿನ ಪ್ರಕರಣದಲ್ಲಿ ಈಗಾಗಲೇ ಅನೇಕ ರೋಚಕ ಸತ್ಯಗಳು ಹೊರಬಿದ್ದಿವೆ. ತನಿಖೆ ನಡೆಯುವ ಸಂದರ್ಭದಲ್ಲಿ ತುನಿಷಾ ಗರ್ಭಿಣಿ (Pregnant Women) ಎಂದು ಹೇಳಲಾಗಿತ್ತು. ಆದರೆ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಅವರು ಗರ್ಭಿಣಿ ಆಗಿರಲಿಲ್ಲ ಎಂದು ಸಾಬೀತಾಯಿತು. ಈ ಕುರಿತು ಮತ್ತೆ ತುನಿಷಾ ಸ್ನೇಹಿತೆ ರಯ್ಯಾ ಲಬೀಬ್ ಅಚ್ಚರಿಯ ಹೇಳಿಕೆ ನೀಡಿದ್ದು, ಆಕೆ ಗರ್ಭಿಣಿಯಾಗಿದ್ದು ನಿಜ. ಅಬಾರ್ಷನ್ ಮಾಡಿಸಿಕೊಂಡಿದ್ದಳು ಎಂದು ಹೇಳಿಕೆ ನೀಡಿದ್ದ.

ನಟಿ ತುನಿಷಾ ಶರ್ಮಾ ಆತ್ಮಹತ್ಯೆ (Suicide) ಮಾಡಿಕೊಳ್ಳುವ ಹದಿನೈದು ದಿನ ಮುನ್ನ ಬಾಯ್ ಫ್ರೆಂಡ್ ಶಿಜಾನ್ ಜೊತೆ ಲವ್ ಬ್ರೇಕ್ ಅಪ್ ಮಾಡಿಕೊಂಡಿದ್ದಳು ಎಂದು ಹೇಳಲಾಗಿದ್ದು, ಈ ಲವ್ ಬ್ರೇಕ್ ಅಪ್ ಗೆ ಕಾರಣ ಲವ್ ಜಿಹಾದ್ (Love Jihad) ಭಯ ಮತ್ತು ಶ್ರದ್ಧಾ ವಾಕರ್ ಕೊಲೆಯಿಂದ ಬೇಸತ್ತು ದೂರವಾಗಿದ್ದನು ಎಂದು ಹೇಳಿಕೊಂಡಿದ್ದ. ಈ ಪ್ರಕರಣದ ಕುರಿತಾಗಿ ಅನೇಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. 

ಈ ಬೆನ್ನಲ್ಲೇ ನಟಿ ಕಂಗನಾ ರಣಾವತ್ (Kangana Ranaut) ಸಹ ಅಸಮಾಧಾನ ಹೊರಹಾಕಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ಕುರಿತು ಭಾವುಕ ಪೋಸ್ಟ್ ವೊಂದನ್ನು ಬರೆದುಕೊಂಡಿದ್ದಾರೆ. `ಮಹಿಳೆ ಎಲ್ಲವನ್ನೂ ನಿಭಾಯಿಸಬಲ್ಲಳು, ಕಳೆದುಕೊಂಡ ಪ್ರೀತಿ, ಮದುವೆ, ಸಂಬಂಧ ಹೀಗೆ ಎಲ್ಲವನ್ನೂ ನಿಭಾಯಿಸಬಹುದು. ಆದರೆ ಅವಳ ಲವ್ ಸ್ಟೋರಿ ಎಂದಿಗೂ ಪ್ರೀತಿಯನ್ನು ಹೊಂದಿಲ್ಲ ಎಂಬ ಅಂಶವನ್ನು ಅವಳು ಎಂದಿಗೂ ನಿಭಾಯಿಸಲು ಸಾಧ್ಯವಿಲ್ಲ. ನಾನು ಗೌರವಾನ್ವಿತ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರಲ್ಲಿ ವಿನಂತಿಸುತ್ತೇನೆ. ಕೃಷ್ಣ ದ್ರೌಪದಿಗೆ ಸಹಾಯ ಮಾಡಿದಂತೆ, ನಾವು ನಿಮ್ಮಲ್ಲಿ ಒಪ್ಪಿಗೆ ಇಲ್ಲದ ಬಹುಪತ್ನಿತ್ವ ವಿರುದ್ಧ ಬಲವಾದ ಕಾನೂನು ಮಾಡುತ್ತೀರಿ ಎಂದು ನಿರೀಕ್ಷೆ ಇಟ್ಟಿದ್ದೀವಿ. ಮಹಿಳೆಯರ ಮೇಲೆ ಆ ಸಿಡ್ ದಾಳಿ, ಮಹಿಳೆಯನ್ನು ಅನೇಕ ತುಂಡು ತುಂಡುಗಳಾಗಿ ಕತ್ತರಿಸುವುದು ಇಂತವರಿಗೆ ತಕ್ಷಣ ಮರಣದಂಡನೆ ಶಿಕ್ಷೆ ವಿಧಿಸಬೇಕು’ ಎಂದು ಮನವಿ ಮಾಡಿದ್ದಾರೆ.

ಇತ್ತೀಚೆಗಷ್ಟೇ 20 ವರ್ಷದ ತುನಿಷಾ ಶರ್ಮಾ ಶೂಟಿಂಗ್ ಸೆಟ್‌ನಲ್ಲೇ ಮೇಕಪ್ ರೂಮ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿನ ಬಳಿಕ ಆಕೆಯ ಬಾಯ್‌ಫ್ರೆಂಡ್ ಶೀಜಾನ್ ಖಾನ್ ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಈ ಪ್ರಕರಣ ಈಗ ಲವ್ ಜಿಹಾದ್ ಆಯಾಮ ಪಡೆದುಕೊಳ್ಳುತ್ತಿದೆ. ಈ ನಡುವೆ ಕಂಗನಾ ಟ್ವೀಟ್ ವೈರಲ್ ಆಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist