
ಬೆಂಗಳೂರು: ಪ್ರಸ್ತುತ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯುತ್ತಿದ್ದು, ಏಪ್ರಿಲ್ 22ರಿಂದ ಪಿಯುಸಿ ಪರೀಕ್ಷೆ ನಡೆಯಲಿದೆ. ಪಿಯುಸಿ ಪರೀಕ್ಷೆಗೆ ಇಲಾಖೆ ಸಂಪೂರ್ಣ ತಯಾರಿ ನಡೆಸುತ್ತಿದೆ. ಇದೀಗ ಇಲಾಖೆ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಿದೆ.
ಈಗಾಗಲೇ ಪರಿಸ್ಕೃತ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಬಿಡುಗಡೆಗೊಳಿಸಿದೆ. 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಬಿಡುಗಡೆಗೊಳಿಸಲಾಗಿದೆ. ಅದರಂತೆ 22-04-2022 ರಿಂದ 18-05-2022ರವರೆಗೆ ಪರೀಕ್ಷೆ ನಡೆಯಲಿದೆ.
ಜೆಇಇ ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಿರುವ ಹಿನ್ನೆಲೆ ಈ ಮೊದಲು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ವೇಳಾಪಟ್ಟಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿತ್ತು. ಇದರ ಬೆನ್ನಲ್ಲೇ ಕೆಲವು ತಾಂತ್ರಿಕ ಸಮಸ್ಯೆಗಳ ಹಿನ್ನೆಲೆ ಎರಡನೇ ಬಾರಿಗೆ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ.
ಪರಿಷ್ಕೃತ ವೇಳಾಪಟ್ಟಿ ಈ ಕೆಳಗಿನಂತಿದೆ:
22/04/2022 ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
23/04/2022 ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ
25/04/2022 ಅರ್ಥಶಾಸ್ತ್ರ
26/04/2022 ಹಿಂದೂಸ್ತಾನಿ ಸಂಗೀತ, ಮನ:ಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
27/04/2022 ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
28/04/2022 ಕನ್ನಡ, ಅರೇಬಿಕ್
04/05/2022 ಭೂಗೋಳ ಶಾಸ್ತ್ರ, ಜೀವಶಾಸ್ತ್ರ,
05/05/2022 ಮಾಹಿತಿ ತಂತ್ರಜ್ಞಾನ, ರೀಟೈಲ್, ಅಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್
06/05/2022 ಇಂಗ್ಲಿಷ್
10/05/2022 ಇತಿಹಾಸ, ಭೌತಶಾಸ್ತ್ರ
12/05/2022 ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ,
14/05/2022 ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
17/05/2022 ಐಚ್ಛಿಕ ಕನ್ನಡ, ಲೆಕ್ಕ ಶಾಸ್ತ್ರ
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist