ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ - ಇಲ್ಲಿದೆ ಅಪ್ಡೇಟ್ಸ್

Twitter
Facebook
LinkedIn
WhatsApp
whatsapp account in one phone 6

ಮಾರ್ಚ್- 2023ರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ಮೂಲಕ ಪರೀಕ್ಷೆ ಬರೆದು ಉತ್ತೀರ್ಣವಾಗಲು ಅವಕಾಶ ನೀಡಲಾಗಿದೆ. ಅದರಂತೆ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಬಿಡುಗಡೆ ಮಾಡಿರುವ ವೇಳಾಪಟ್ಟಿಯ ಪ್ರಕರಾ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ದಿನಾಂಕ 21-04-2023 ರಿಂದ 26-04-2023ರ ವರೆಗೆ ಅವಕಾಶ ನೀಡಲಾಗಿದೆ. ಇಲ್ಲಿಯವರೆಗೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸದ ಅನುತ್ತೀರ್ಣರಾದ ವಿದ್ಯಾರ್ಥಿಗಳು ಇಂದೇ ಅರ್ಜಿ ಸಲ್ಲಿಸಿ.

ಮಾರ್ಚ್‌ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಅನುತ್ತೀರ್ಣ ಅಂಕಪಟ್ಟಿ ಅರ್ಜಿ ಎಂ ಸಿ ಎ ಗಳನ್ನು ಮಂಡಲಿಯಿಂದ ನೀಡಲಾಗುವುದಿಲ್ಲ, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮಂಡಲಿಯಿಂದ ನೀಡಲಾಗುವ ಫಲಿತಾಂಶ ಪಟ್ಟಿಯ ಆಧಾರದ ಮೇಲೆ ಪೂರಕ ಪರೀಕ್ಷೆ ನೋಂದಾಯಿಸಿಕೊಂಡು ಪರೀಕ್ಷಾ ಶುಲ್ಕ ಸ್ವೀಕರಿಸಿ ಮಂಡಲಿಯ PU EXAM ಲಾಗಿನ್‌ನಲ್ಲಿ ವಿದ್ಯಾರ್ಥಿಯ ಮಾಹಿತಿಯನ್ನು ಭರ್ತಿ ಮಾಡುವಂತೆ ಕಾಲೇಜು ಪ್ರಾಂಶುಪಾಲರುಗಳಿಗೆ ತಿಳಿಸಿದೆ.

2023ನೇ ಸಾಲಿಗಿಂತ ಹಿಂದಿನ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಂದ ಮೂಲ ಅನುತ್ತೀರ್ಣ ಅಂಕಪಟ್ಟಿ/ ಅರ್ಜಿ ಅಥವಾ ಹಿಂದಿನ ಎಂ ಸಿ ಎ ಗಳ ಆಧಾರದ ಮೇಲೆ ಪರೀಕ್ಷೆ ಶುಲ್ಕಗಳನ್ನು ಸ್ವೀಕರಿಸಿ ಮಂಡಲಿಯ PU EXAM ಲಾಗಿನ್‌ನಲ್ಲಿ ವಿದ್ಯಾರ್ಥಿಯ ಮಾಹಿತಿಯನ್ನು ಭರ್ತಿ ಮಾಡುವುದು.


ಆಗಸ್ಟ್ 2022ರಲ್ಲಿ ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಹಾಗೂ 2023ನೇ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಫಲಿತಾಂಶ ತಿರಸ್ಕರಿಸಿ 2023ರ ದ್ವಿತೀಯ ಪಿಯುಸಿಯ ಪೂರಕ ಪರೀಕ್ಷೆ ಬರೆಯಲು ಇಚ್ಛಿಸಿದಲ್ಲಿ, ಅಂತಹ ವಿದ್ಯಾರ್ಥಿಗಳು ಮೂಲ ಅಂಕಪಟ್ಟಿ/ಫಲಿತಾಂಶ ಪಟ್ಟಿಗಳ ಆಧಾರದ ಮೇಲೆ ನಿಯಮಾನುಸಾರ ಫಲಿತಾಂಶ ತಿರಸ್ಕರಣೆಗೆ ಅರ್ಜಿಯನ್ನು ಇಲಾಖೆಗೆ ಸಲ್ಲಿಸಬೇಕು. ಇಲಾಖೆಯು ಅನುಮತಿ ನೀಡಿದ ನಂತರ PU EXAM ಲಾಗಿನ್‌ನಲ್ಲಿ ವಿದ್ಯಾರ್ಥಿಗಳು ಫಲಿತಾಂಶ ತಿರಸ್ಕರಿಸಿದ ಮಾಹಿತಿಯನ್ನ ದಾಖಲಿಸುವಂತೆ ಪ್ರಾಂಶುಪಾಲರಿಗೆ ಸೂತ್ತೋಲೆಯಲ್ಲಿ ತಿಳಿಸಲಾಗಿದೆ.

2023ರಲ್ಲಿ ನಡೆಸಲಾಗುವ ಪೂರಕ ಪರೀಕ್ಷೆಗೆ ಪುನರಾವರ್ತಿತ ಹಾಗೂ ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳು ಪಾವತಿಸಬೇಕಾದ ಶುಲ್ಕಗಳ ವಿವರ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ವಿದ್ಯಾರ್ಥಿಗಳನ್ನು ಹೊರತು ಪಡಿಸಿ ಉಳಿದ ವಿದ್ಯಾರ್ಥಿಗಳು ಪಾವತಿಸಬೇಕಾದ ಪರೀಕ್ಷಾ ಶುಲ್ಕ,

  • ಒಂದು ವಿಷಯಕ್ಕೆ-140 ರೂಪಾಯಿ.
  • ಎರಡು ವಿಷಯಕ್ಕೆ- 270 ರೂಪಾಯಿ.
  • ಮೂರು ಅಥವಾ ಹೆಚ್ಚಿನ ವಿಷಯಗಳು- 400 ರೂಪಾಯಿ.
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ವಿದ್ಯಾರ್ಥಿಗಳಿಂದ ಕಡ್ಡಾಯವಾಗಿ ಪಡೆಯಬೇಕಾದ ಅಂಕಪಟ್ಟಿ ಶುಲ್ಕ- 50 ರೂಪಾಯಿ.
  • ಪರೀಕ್ಷಾ ತಿರಸ್ಕರಣಾ ಶುಲ್ಕ
  • ಪ್ರಥಮ ಬಾರಿಗೆ ಒಂದು ವಿಷಯಕ್ಕೆ- 175 ರೂಪಾಯಿ.
  • ದ್ವಿತೀಯ ಅಂದರೆ ಅಂತಿಮ ಬಾರಿಗೆ ಒಂದು ವಿಷಯಕ್ಕೆ- 350 ರೂಪಾಯಿ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ