ಭಾನುವಾರ, ಏಪ್ರಿಲ್ 28, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ ದಲ್ಲಿ ಶಾಕಿಂಗ್ ಪಲಿತಾಂಶ ; ಕುಶ್ ನಾಯ್ಕ್ ರಾಜ್ಯಕ್ಕೆ ಪ್ರಥಮ

Twitter
Facebook
LinkedIn
WhatsApp
pexels elijah odonnell 3473569 2

ಬೆಂಗಳೂರು: ಪಿಯುಸಿ ಮರು ಮೌಲ್ಯಮಾಪನ (PUC re-evaluation) ದಲ್ಲಿ ಅಚ್ಚರಿ ಫಲಿತಾಂಶ ಹೊರಬಿದ್ದಿದ್ದು, ಮರು ಮೌಲ್ಯ ಮಾಪನದಲ್ಲಿ ಕಲಾ ವಿಭಾಗದಲ್ಲಿ ವಿದ್ಯಾರ್ಥಿ ಕುಶ್​​ ನಾಯ್ಕ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ. ಆ ಮೂಲಕ ಬೆಂಗಳೂರಿನ ಜಯನಗರ ಕಾಲೇಜಿನ ವಿದ್ಯಾರ್ಥಿನಿ ತಬಸುಮ್ ಶೇಖ್​ನನ್ನು ಹಿಂದಿಕ್ಕಿದ್ದಾನೆ. ತಬಸುಮ್ ಶೇಖ್ 593 ಅಂಕ ಪಡೆದು ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರು. ಆದರೆ ಮರು ಮೌಲ್ಯಮಾಪನದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರಿನ ವಿಶೇಷ ಚೇತನ ವಿದ್ಯಾರ್ಥಿ ಕುಶ್​ ನಾಯ್ಕ್​ ದ್ವಿತೀಯ ಪಿಯುಸಿನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಕಲಾ ವಿಭಾಗದಲ್ಲಿ ಸತತ 8 ಬಾರಿ ಪ್ರಥಮ ರ‍್ಯಾಂಕ್‌ ಪಡೆದ ಕುಟ್ಟೂರು

ಮೌಲ್ಯಮಾಪನ ಫಲಿತಾಂಶದಲ್ಲಿ ಕಲಾ ವಿಭಾಗದ ಐಚ್ಚಿಕ ಕನ್ನಡ ವಿಷಯದಲ್ಲಿ 592 ಅಂಕಗಳಿಂದ 594 ಅಂಕಗಳನ್ನು ಪಡೆದು ರಾಜ್ಯಕ್ಕೆ ಫಸ್ಟ್ ರಾಂಕ್​ ಬಂದಿದ್ದಾರೆ. ಇಂದು ಪಿಯು ಕಾಲೇಜಿನ ಇನೋರ್ವ ವಿದ್ಯಾರ್ಥಿ ಕೃಷ್ಣ ಒಟ್ಟು 593 ಅಂಕಗಳ ಮೂಲಕ ರಾಜ್ಯಕ್ಕೆ ದ್ವೀತಿಯ ಸ್ಥಾನ ಪಡೆದುಕೊಂಡಿದ್ದಾನೆ. ಈ ಮೂಲಕ ಸತತ ಎಂಟನೇ ಬಾರಿ ವಿಜಯನಗರ ಜಿಲ್ಲೆಯ ಕೊಟ್ಟೂರಿನ ಇಂದು ಕಾಲೇಜಿಗೆ ಪ್ರಥಮ ಸ್ಥಾನ ಲಭಿಸಿದೆ.

ಈ ಬಾರಿ ಶೇ.74.64ರಷ್ಟು ವಿದ್ಯಾರ್ಥಿಗಳು ತೇರ್ಗಡೆ

2022–23ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯ ಫಲಿತಾಂಶ ಏಪ್ರಿಲ್​ 21 ರಂದು ಪ್ರಕಟವಾಗಿದೆ. ಮಾ. 9ರಿಂದ 29ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿದ್ದು, ಈ ಬಾರಿ ಶೇ.74.64ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಲಾ ವಿಭಾಗದಲ್ಲಿ 61.22%, ವಿಜ್ಞಾನ ವಿಭಾಗದಲ್ಲಿ 85.71%, ವಾಣಿಜ್ಯ ವಿಭಾಗದಲ್ಲಿ 75.89% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಮರುಮೌಲ್ಯಮಾಪನಕ್ಕೆ ಅವಕಾಶ

ಈ ಹಿಂದೆ ಮರುಮೌಲ್ಯಮಾಪನದ ನಂತರ ಸುಮಾರು 6 ಅಂಕಗಳು ವ್ಯತ್ಯಾಸವಾಗಿದ್ದರೆ ಮಾತ್ರ ಅದನ್ನು ಪರಿಗಣಿಸಲಾಗುತ್ತಿತ್ತು. ಇದರಿಂದ ಅದೆಷ್ಟೋ ವಿದ್ಯಾರ್ಥಿಗಳು ಒಂದೆರಡು ಅಂಕಗಳ ವ್ಯತ್ಯಾಸದಿಂದ ಡಿಸ್ಟಿಂಕ್ಷನ್ (85% ಗಿಂತ ಮೇಲೆ) ಕಳೆದುಗೊಂಡಿದ್ದರು. ಆದರೆ ಈ ವರ್ಷದಿಂದ ಪಿಯು ವಿದ್ಯಾರ್ಥಿಗಳು 1 ಅಂಕ ಪಡೆಯಬೇಕಾದರೂ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಅವಕಾಶ ನೀಡಲಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ