ಭಾನುವಾರ, ಏಪ್ರಿಲ್ 28, 2024
ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದ.ಕ. ಜಿಲ್ಲಾ ಕಾಂಗ್ರೆಸ್ ಮಾಸಿಕ ಸಭೆ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಸಂಭ್ರಮದ ಪಾದಯಾತ್ರೆಗೆ ಸಿದ್ಧತೆ:- ಕೆ.ಹರೀಶ್ ಕುಮಾರ್

Twitter
Facebook
LinkedIn
WhatsApp
ದ.ಕ. ಜಿಲ್ಲಾ ಕಾಂಗ್ರೆಸ್ ಮಾಸಿಕ ಸಭೆ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಸಂಭ್ರಮದ ಪಾದಯಾತ್ರೆಗೆ ಸಿದ್ಧತೆ:- ಕೆ.ಹರೀಶ್ ಕುಮಾರ್

ಮಂಗಳೂರು: ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕೆಪಿಸಿಸಿ ನಿರ್ದೇಶನದಂತೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ದಕ್ಷಿಣ ಕನ್ನಡ ವ್ಯಾಪ್ತಿಯಲ್ಲಿ ಸುಮಾರು 75 ಕಿ.ಮೀ ದೂರದಷ್ಟು ಪಾದಯಾತ್ರೆ ನಡೆಸಲಾಗುವುದು. ಆಗಸ್ಟ್ 9ನೇ ತಾರೀಕಿನಿಂದ 14 ರವರೆಗೆ ನಡೆಯಲಿರುವ ಪಾದಯಾತ್ರೆಯುದ್ದಕ್ಕೂ ಶಾಂತಿಯ, ಸೌಹಾರ್ದದ ಸಂದೇಶ ಸಾರಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಹೇಳಿದರು.
ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಜರುಗಿದ ಮಾಸಿಕ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡುತ್ತಿದ್ದರು. ಪಾದಯಾತ್ರೆಯು ಉಪ್ಪಿನಂಗಡಿ ಯಿಂದ ಆರಂಭಗೊಂಡು ಮುಲ್ಕಿಯಲ್ಲಿ ಸಮಾಪನಗೊಳ್ಳಲಿದೆ. ಈ ಸಂದರ್ಭದಲ್ಲಿ ರಾಷ್ಟ್ರೀಯ ಹಾಗೂ ರಾಜ್ಯ ಕಾಂಗ್ರೆಸ್ ನಾಯಕರುಗಳು ಪಾಲ್ಗೊಳ್ಳಲಿದ್ದು, ಕಾರ್ಯಕರ್ತರು ಸಹಸ್ರ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.

ಈ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಮಾಜಿ ಶಾಸಕ ಮೊಯ್ದೀನ್ ಬಾವ, ಕಾಂಗ್ರೆಸ್ ಮುಖಂಡರುಗಳಾದ ಬಿ.ಇಬ್ರಾಹೀಂ, ಸದಾಶಿವ್ ಉಳ್ಳಾಲ್, ಶಶಿಧರ್ ಹೆಗ್ಡೆ, ಕವಿತಾ ಸನಿಲ್, ಲುಕ್ಮಾನ್ ಬಂಟ್ವಾಳ, ನಾರಾಯಣ ನಾಯಕ್, ಶಾಹುಲ್ ಹಮೀದ್, ಮೋಹನ್ ಗೌಡ, ಜೋಕ್ಕಿಂ ಡಿಸೋಜಾ, ಸುದರ್ಶನ್ ಜೈನ್, ಸಚಿನ್ ರಾಜ್, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಜಿಲ್ಲಾ ಮುಂಚೂಣಿ ಘಟಕಾಧ್ಯಕ್ಷರುಗಳು, ಮಾಜಿ ಕೆಪಿಸಿಸಿ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳಾದ ಸಂತೋಷ್ ಕುಮಾರ್ ಶೆಟ್ಟಿ, ಸಿ.ಎಂ. ಮುಸ್ತಫಾ, ನೀರಜ್ ಪಾಲ್, ಪ್ರೇಮ್ ಬಳ್ಳಾಲ್ ಭಾಗ್, ಅಬ್ದುಲ್ ಸಲೀಂ, ಖಾಲಿದ್ ಉಜಿರೆ ಸಹಕರಿಸಿದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!

ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!

ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!

ಅಂಕಣ