ಬೆಳ್ತಂಗಡಿ: ಧರ್ಮಸ್ಥಳದಿಂದ ನೇತ್ರಾವತಿ ಸ್ನಾನಘಟ್ಟ ಬರುವ ಹಾದಿಯಲ್ಲಿ ರಸ್ತೆಗೆ ಬಿದ್ದಿದ್ದ ಮರಕ್ಕೆ ಢಿಕ್ಕಿ ಹೊಡೆದ ಬೈಕ್ ಸವಾರರೊಬ್ಬರು ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ಮುಂಜಾನೆ 5 ರ ಸುಮಾರಿಗೆ ನಡೆದಿದೆ. ಘಟನೆಯಲ್ಲಿ 42 ವರ್ಷದ ಓಡಿಲ್ನಾಲ ಮುಗುಳಿಚತ್ರ ನಿವಾಸಿ ವಸಂತ್ ಕುಮಾರ್ ಜೈನ್ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.
ಇವರು ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ ಸಮೀಪ ಹೋಟೆಲ್ ನಡೆಸುತ್ತಿದ್ದು ಧರ್ಮಸ್ಥಳದಲ್ಲಿ ವಾಸವಾಗಿದ್ದರು. ಮುಂಜಾನೆ ಧರ್ಮಸ್ಥಳ ಕಡೆಯಿಂದ ಸ್ನಾನಘಟ್ಟಕ್ಕೆ ಬರುವ ಮಾರ್ಗ ಮಧ್ಯ ರಸ್ತೆಗೆ ಬಿದ್ದಿದ್ದ ಮರವನ್ನು ಗಮನಿಸಿದೆ ಬೈಕ್ ಢಿಕ್ಕಿಯಾಗಿದೆ.
ತಕ್ಷಣ ರಸ್ತೆಗೆ ಎಸೆಯಲ್ಪಟ್ಟ ಅವರು, ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಹೆಲ್ಮೆಟ್ ಧರಿಸದೇ ಇರುವುದರಿಂದ ಅಪಘಾತ ತೀವ್ರತೆ ಹೆಚ್ಚಾಗಿದೆ. ತಕ್ಷಣ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ಉಪನಿರೀಕ್ಷಕ ಓಡಿಯಪ್ಪ ಗೌಡ ಸಹಿತ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist