ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಧರ್ಮಸ್ಥಳದ ಧರ್ಮಾಧಿಕಾರಿ ಡಾ . ವೀರೇಂದ್ರ ಹೆಗ್ಗಡೆ ಯವರು ರಾಜ್ಯಸಭೆಗೆ ನಾಮನಿರ್ದೇಶನ

Twitter
Facebook
LinkedIn
WhatsApp
ಧರ್ಮಸ್ಥಳದ ಧರ್ಮಾಧಿಕಾರಿ ಡಾ . ವೀರೇಂದ್ರ ಹೆಗ್ಗಡೆ ಯವರು ರಾಜ್ಯಸಭೆಗೆ ನಾಮನಿರ್ದೇಶನ

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗಡೆ ಅವರನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಕೇಂದ್ರ ಸರ್ಕಾರದ ಮೋದಿ ಸರಕಾರ ಈ ತೀರ್ಮಾನಕ್ಕೆ ಬಂದಿದ್ದು, ಈ ಮೂಲಕ ರಾಜ್ಯಸಭೆಗೆ ವೀರೇಂದ್ರ ಹೆಗ್ಗಡೆಯವರು ನಾಮನಿರ್ದೇಶನ ಆಗುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.

ಈ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿ ಶುಭ ಕೋರಿದ್ದಾರೆ. “ವೀರೇಂದ್ರ ಹೆಗ್ಗಡೆಯವರು ಅತ್ಯುತ್ತಮ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಧರ್ಮಸ್ಥಳದ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಮತ್ತು ಆರೋಗ್ಯ, ಶಿಕ್ಷಣ ಮತ್ತು ಸಂಸ್ಕೃತಿಯಲ್ಲಿ ಅವರು ಮಾಡುತ್ತಿರುವ ಮಹತ್ತರವಾದ ಕಾರ್ಯವನ್ನು ವೀಕ್ಷಿಸಲು ನನಗೆ ಅವಕಾಶವಿದೆ. ಅವರು ಖಂಡಿತವಾಗಿಯೂ ಸಂಸತ್ತಿನ ಕಲಾಪಗಳನ್ನು ಪುಷ್ಟೀಕರಿಸುತ್ತಾರೆ’ ಎಂದು ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ.

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ದೇಶ ಕಂಡ ಶ್ರೇಷ್ಠ ಅಥ್ಲೀಟ್‌ಗಳಲ್ಲಿ ಒಬ್ಬರಾದ ಪಿಟಿ ಉಷಾ, ತೆಲುವು ಚಿತ್ರರಂಗದ ಖ್ಯಾತ ನಿರ್ದೇಶಕ ರಾಜಮೌಳಿ ಅವರ ತಂದೆ, ಖ್ಯಾತ ಚಿತ್ರಕಥೆಗಾರ ವಿಜಯೇಂದ್ರ ಪ್ರಸಾದ್‌, ತಮಿಳಿನ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರನ್ನು ಕೇಂದ್ರ ಸರ್ಕಾರ ಬುಧವಾರ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ.

ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಪಿ.ಟಿ.ಉಷಾ, ವಿ.ವಿಜಯೇಂದ್ರ ಪ್ರಸಾದ್, ವೀರೇಂದ್ರ ಹೆಗ್ಗಡೆ ಮತ್ತು ಇಳಯರಾಜ ಅವರನ್ನು ಅಭಿನಂದಿಸಿ ಪ್ರಧಾನಿ ಮೋದಿ ವೈಯಕ್ತಿಕ ಟ್ವೀಟ್‌ ಅನ್ನೂ ಮಾಡಿದ್ದಾರೆ. “ಪಿಟಿ ಉಷಾ ಪ್ರತಿಯೊಬ್ಬ ಭಾರತೀಯರಿಗೂ ಸ್ಫೂರ್ತಿಯಾಗಿದ್ದಾರೆ. ಕ್ರೀಡೆಯಲ್ಲಿ ಅವರ ಸಾಧನೆಗಳ ಬಗ್ಗೆ ವ್ಯಾಪಕವಾಗಿ ಎಲ್ಲರಿಗೂ ತಿಳಿಸಿದೆ. ಕಳೆದ ಕೆಲವು ವರ್ಷಗಳಿಂದ ಉದಯೋನ್ಮುಖ ಕ್ರೀಡಾಪಟುಗಳಿಗೆ ಮಾರ್ಗದರ್ಶನ ನೀಡುವ ಅವರ ಕೆಲಸವು ಶ್ಲಾಘನೀಯವಾಗಿದೆ. ರಾಜ್ಯಸಭೆಗೆ ನಾಮ ನಿರ್ದೇಶನಗೊಂಡಿದ್ದಕ್ಕಾಗಿ ಅಭಿನಂದನೆಗಳು’ ಎಂದು ಮೋದಿ, ಪಿಟಿ ಉಷಾ ಕುರಿತಾಗಿ ಟ್ವೀಟ್‌ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ