ಸೋಮವಾರ, ಏಪ್ರಿಲ್ 29, 2024
ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಧರ್ಮಸ್ಥಳ :ಕಾಡಿನಲ್ಲಿದ್ದ ಅಣಬೆ ತಂದು ಪದಾರ್ಥ ಮಾಡಿ ಸೇವನೆ: ಒಂದೇ ಕುಟುಂಬದ ಇಬ್ಬರು ಸಾವು

Twitter
Facebook
LinkedIn
WhatsApp
ಧರ್ಮಸ್ಥಳ :ಕಾಡಿನಲ್ಲಿದ್ದ ಅಣಬೆ ತಂದು ಪದಾರ್ಥ ಮಾಡಿ ಸೇವನೆ: ಒಂದೇ ಕುಟುಂಬದ ಇಬ್ಬರು ಸಾವು

ಧರ್ಮಸ್ಥಳ ಸಮೀಪದ ಪುದುವೆಟ್ಟು ಎಂಬಲ್ಲಿ ತಂದೆ ಮಗ ನಿಗೂಢವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಗುರುವ (೭೫ ) ಹಾಗೂ ಪುತ್ರ ಓಡಿ (೪೫) ಮೃತಪಟ್ಟವರು . ಇಬ್ಬರೂ ವಿಷಕಾರಿ ಅಣಬೆ ಪದಾರ್ಥ ಸೇವಿಸಿದ ಕಾರಣ ಅಸ್ವಸ್ಥಗೊಂಡು ಸಾವನ್ನೊಪ್ಪಿರುವುದಾಗಿ ಸಂಶಯ ಪಡಲಾಗಿದೆ.

ಬಡ ಕುಟುಂಬದ ಮನೆಯಲ್ಲಿ ಮನೆ ಯಾಜಮಾನ ಗುರುವ ಸಹಿತ ಇಬ್ಬರು ಪುತ್ರರು ವಾಸವಾಗಿದ್ದರು. ಮಂಗಳವಾರ ಇವರ ಇಬ್ಬರ ಮೃತದೇಹ‌ ಮನೆ ಮುಂಭಾಗ ಬಿದ್ದಿರುವುದನ್ನು ಸ್ಥಳೀಯರು ಕಂಡು ಆತಂಕಕ್ಕೀಡಾಗಿದ್ದರು. ಪರಿಶೀಲಿಸಿದಾಗ ಸೋಮವಾರ ರಾತ್ರಿ ಕಾಡಿನ ಯಾವುದೋ ವಿಷಪೂರಿತ ಅಣಬೆಯನ್ನು ಅಡುಗೆ ಮಾಡಿ ಸೇವಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.ಹೀಗಾಗಿ ಅಣಬೆ ಸೇವನೆಯ ಪದಾರ್ಥ ಸೇವನೆಯೇ ಸಾವಿಗೆ ಕಾರಣ ಎಂದು ಶಂಕಿಸಲಾಗಿದೆ.

ಮತ್ತೋರ್ವ ಮಗ ಮನೆಯಲ್ಲಿ ಇಲ್ಲದ್ದರಿಂದ ಅವಘಡ ತಪ್ಪಿದೆ. ಘಟನೆ ವಿಚಾರ ತಿಳಿದು ಸ್ಥಳೀಯ ಜನಪ್ರತಿನಿಧಿಗಳು, ಸಾರ್ವಜನಿಕರು ಜಮಾಯಿಸಿದ್ದಾರೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಠಾಣಾಧಿಕಾರಿಗಳು ಭೇಟಿ ನೀಡಿದ್ದು. ತನಿಖೆ ಬಳಿಕ ಸ್ಪಷ್ಟ ಮಾಹಿತಿ ತಿಳಿದು ಬರಬೇಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ