ಶನಿವಾರ, ಮೇ 18, 2024
ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಧಾರವಾಡದ ಬೆಣ್ಣಿಹಳ್ಳ ಹೊಳೆಯಲ್ಲಿ ಮತ್ತೊಬ್ಬ ಯುವಕ ಮುಳುಗಿ ಸಾವು

Twitter
Facebook
LinkedIn
WhatsApp
 ಧಾರವಾಡದ ಬೆಣ್ಣಿಹಳ್ಳ ಹೊಳೆಯಲ್ಲಿ ಮತ್ತೊಬ್ಬ ಯುವಕ ಮುಳುಗಿ ಸಾವು

ಹೌದು.. ಹುಬ್ಬಳ್ಳಿ ಸಮೀಪದ ಇಂಗಳಹಳ್ಳಿ ಗ್ರಾಮದ ಹೊಳೆಗೆ ಇತ್ತೀಚೆಗೆ ಕೊಚ್ಚಿಕೊಂಡು ಹೋಗಿದ್ದ ನಾಪತ್ತೆಯಾದವರ ಪತ್ತೆಗೆ ಧಾರವಾಡ ಜಿಲ್ಲಾಡಳಿತ ಹರಸಾಹಸ ಪಡುತ್ತಿರುವಂತೆಯೇ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ತಡಹಾಳ್ ಗ್ರಾಮದಲ್ಲಿ ಶುಕ್ರವಾರ ಮತ್ತೊಬ್ಬ ಯುವಕ ಅದೇ ಹೊಳೆಗೆ ಬಿದ್ದು ಕೊಚ್ಚಿ ಹೋಗಿದ್ದಾನೆ.

ಶುಕ್ರವಾರ ನವಲಗುಂದ ತಾಲೂಕಿನ ತಡಹಾಳ್ ಗ್ರಾಮದ ಬೆಣ್ಣಿಹಳ್ಳ ಹೊಳೆಯಲ್ಲಿ ಸದಾನಂದ ಪೂಜಾರ್ (22 ವರ್ಷ) ಕೊಚ್ಚಿ ಹೋಗಿದ್ದಾರೆ. ಗ್ರಾಮದ ಬಳಿಯ ಸೇತುವೆಯ ಮೇಲೆ ಯುವಕರು ಹೋಗುತ್ತಿದ್ದಾಗ ಏಕಾಏಕಿ ಹೊಳೆ ನೀರಿನ ಮಟ್ಟ ಏರಿದೆ. ಈ ವೇಳೆ ನೀರಿಗೆ ಸಿಲುಕಿದ ಯುವಕ ಕೊಚ್ಚಿಕೊಂಡು ಹೋಗಿದ್ದಾನೆ. ಕೂಡಲೇ ಅಲ್ಲಿದ್ದ ಯುವಕರು ಕೂಡಲೇ ಈಜುವ ಮೂಲಕ ಆತನನ್ನು ರಕ್ಷಿಸಲು ಹರಸಾಹಸ ಪಟ್ಟರಾದರೂ ಯುವಕ ಮುಳುಗಿ ಹೋಗಿದ್ದ ಎಂದು ನವಲಗುಂದ ಪೊಲೀಸರು ತಿಳಿಸಿದ್ದಾರೆ.

ಎನ್‌ಡಿಆರ್‌ಎಫ್ ಮತ್ತು ಅಗ್ನಿಶಾಮಕ ದಳದವರು ಮೃತದೇಹಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ. ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ.29ರಂದು ಬೆಣ್ಣೆಹಳ್ಳ ಹೊಳೆ ಪ್ರವಾಹದಲ್ಲಿ ಇಂಗಳಹಳ್ಳಿಯ ಆನಂದ್ ಹಿರೇಗೌಡರ್ (24 ವರ್ಷ) ಕೊಚ್ಚಿ ಹೋಗಿದ್ದು, ಕಳೆದ ಐದು ದಿನಗಳಿಂದ ಶೋಧ ಕಾರ್ಯ ನಡೆಯುತ್ತಿದ್ದು, ಪೊಲೀಸರು ಹಾಗೂ ಅಗ್ನಿಶಾಮಕ ದಳದವರಿಗೆ ಸುಳಿವು ಸಿಕ್ಕಿಲ್ಲ. ಗ್ರಾಮಸ್ಥರ ನೆರವಿನೊಂದಿಗೆ ಶನಿವಾರವೂ ಶೋಧ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ