ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಧಾರವಾಡ: ಮೊದಲ ದಿನವೇ ಮುಂಗಾರು ಆರ್ಭಟ, ಜನಜೀವನ ಅಸ್ತವ್ಯಸ್ತ

Twitter
Facebook
LinkedIn
WhatsApp
ಧಾರವಾಡ: ಮೊದಲ ದಿನವೇ ಮುಂಗಾರು ಆರ್ಭಟ, ಜನಜೀವನ ಅಸ್ತವ್ಯಸ್ತ
 

ಹುಬ್ಬಳ್ಳಿ(ಜೂ.03): ಹುಬ್ಬಳ್ಳಿ-ಧಾರವಾಡ ಸೇರಿದಂತೆ ಜಿಲ್ಲಾದ್ಯಂತ ಗುರುವಾರ ಅಬ್ಬರದ ಮಳೆ ಸುರಿದಿದೆ. ಈ ಮೂಲಕ ಮುಂಗಾರು ಪ್ರವೇಶವಾಗಿದ್ದು ಮೊದಲ ದಿನವೇ ತನ್ನ ಆರ್ಭಟ ಪ್ರದರ್ಶಿಸಿದೆ. 2 ಗಂಟೆಗೂ ಅಧಿಕ ಕಾಲ ಸುರಿದ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರೀ ಗಾಳಿಗೆ 70ಕ್ಕೂ ಹೆಚ್ಚು ಮರ, ಹತ್ತಾರು ವಿದ್ಯುತ್‌ ಕಂಬಗಳು ನೆಲಕ್ಕುರುಳಿದ್ದು, ಆಸ್ತಿ ಹಾನಿಯಾಗಿದೆ. ಹತ್ತಾರು ವಾಹನಗಳು ಜಖಂಗೊಂಡಿವೆ.

70ಕ್ಕೂ ಹೆಚ್ಚು ಮರ:

ಸಂಜೆ 4ರ ಸುಮಾರಿಗೆ ಸಣ್ಣದಾಗಿ ಶುರುವಾದ ಮಳೆ ಕೆಲವೇ ಹೊತ್ತಿನಲ್ಲೇ ರಭಸ ಪಡೆಯಿತು. ಜತೆಗೆ ಬಿರುಗಾಳಿ ಸಮೇತ ಮಳೆ ಸುರಿಯಲು ಆರಂಭವಾಗಿದ್ದರಿಂದ ಒಂದೇ ತಾಸಿನಲ್ಲಿ ಜನಜೀವನವನ್ನೇ ಅಸ್ತವ್ಯಸ್ತವನ್ನಾಗಿ ಮಾಡಿತು. ಗಂಟೆಗೆ 40 ಕಿಮೀಗೂ ಜೋರಾದ ಗಾಳಿ ಬೀಸಿತು. ಇದರಿಂದ ವಿದ್ಯಾನಗರ, ಶಿರೂರು ಪಾರ್ಕ್, ನೃಪತುಂಗ ಬೆಟ್ಟ, ಶಕ್ತಿಕಾಲನಿ, ಸಂಗೊಳ್ಳಿ ರಾಯಣ್ಣ ನಗರ, ರವಿನಗರ, ದೈವಜ್ಞ ಕಲ್ಯಾಣ ಮಂಟಪ ಬಳಿ, ಕಾಳಿದಾಸ ನಗರ, ವೆಂಕಟೇಶವರ ಕಾಲನಿ, ಶಿಮ್ಲಾನಗರ, ಈಶ್ವರ ನಗರ, ಅಕ್ಷಯ ಕಾಲನಿ ಸೇರಿದಂತೆ ವಿವಿಧೆಡೆ 70ಕ್ಕೂ ಹೆಚ್ಚು ಮರಗಳು ನೆಲಕ್ಕುರುಳಿದವು.

ಲಿಂಗರಾಜನಗರದ 3ನೇ ಕ್ರಾಸ್‌ ಬಳಿ ಬೃಹದಾಕಾರದ ಮರ ಧರೆಗುರುಳಿದ ಪರಿಣಾಮ ಕಾರು ಜಖಂಗೊಂಡಿದೆ. ಜತೆಗೆ ವಿದ್ಯುತ್‌ ಕಂಬಗಳು ಮುರಿದು ಬಿದ್ದಿವೆ. ಮರಗಳು ಉರುಳಿದ ಪರಿಣಾಮ 7ಕ್ಕೂ ಹೆಚ್ಚು ಕಾರು, 15ಕ್ಕೂ ಹೆಚ್ಚು ಬೈಕ್‌ ಜಖಂಗೊಂಡಿವೆ. ಮರ ಬಿದ್ದು ಎರಡು ಮನೆ ಜಖಂಗೊಂಡಿದ್ದು 2 ಮನೆಗಳು ಭಾಗಶಃ ಕುಸಿದಿವೆ.

 

ಮನೆಗಳಿಗೆ ನುಗ್ಗಿದ ನೀರು:

ಸಾಯಿನಗರದ ವಾಯುಪುತ್ರ ಬಡಾವಣೆ, ಸಿದ್ದರಾಮೇಶ್ವರ ನಗರದ ಟಿಂಬರ್‌ ಯಾರ್ಡ್‌, ರಾಮಲಿಂಗೇಶ್ವರ ನಗರ, ನೇಕಾರ ನಗರ, ಆನಂದ ನಗರ ಸೇರಿದಂತೆ ವಿವಿಧೆಡೆ ತೆಗ್ಗು ಪ್ರದೇಶಗಳಲ್ಲಿರುವ 100ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿದೆ.

ಬಿಆರ್‌ಟಿಎಸ್‌ ಬಸಲ್ಲೂ ನೀರು:

ಧಾರಾಕಾರ ಮಳೆಯಿಂದ ಉಣಕಲ್‌ ಬಳಿಯಿರುವ ಶ್ರೀನಗರದ ಬಿಆರ್‌ಟಿಎಸ್‌ ಕಾರಿಡಾರ್‌ನಲ್ಲಿ ಮೊಳಕಾಳವರೆಗೂ ನೀರು ನಿಂತ ಪರಿಣಾಮ ಎರಡು ಕಿಲೋ ಮೀಟರ್‌ ವರೆಗೆ ಟ್ರಾಫಿಕ್‌ ಜಾಮ್‌ ಆಗಿತ್ತು. ನಿಲ್ದಾಣದಲ್ಲಿ ನಿಂತಿದ್ದ ಬಿಆರ್‌ಟಿಎಸ್‌ ಬಸ್‌ನೊಳಗೂ ನೀರು ನುಗ್ಗಿತ್ತು. ಶ್ರೀನಗರ ಬಳಿ 1 ಗಂಟೆಗೂ ಹೆಚ್ಚು ಕಾಲ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿತ್ತು.

ಸಂಜೆ 6ರ ನಂತರ ಗಾಳಿಯ ಪ್ರಮಾಣ ತಗ್ಗಿತು. ಆದರೂ ರಾತ್ರಿವರೆಗೂ ಮಳೆ ಮಾತ್ರ ಅಬ್ಬರಿಸುತ್ತಲೇ ಇತ್ತು. ಮೂರ್ನಾಲ್ಕು ಗಂಟೆ ಕಾಲ ಸುರಿದ ಮಳೆಗೆ ನಗರದ ಪ್ರಮುಖ ಹಾಗೂ ಒಳರಸ್ತೆಗಳು ಜಲಾವೃತಗೊಂಡಿದ್ದವು. ಅದರಲ್ಲೂ ತಗ್ಗು ಪ್ರದೇಶದ ರಸ್ತೆಗಳೆಲ್ಲ ಪೂರ್ಣ ಪ್ರಮಾಣದಲ್ಲಿ ಜಲಾವೃತಗೊಂಡವು. ವಿದ್ಯುತ್‌ ಸರಬರಾಜುವಿನಲ್ಲಿ ವ್ಯತ್ಯಯ ಉಂಟಾಯಿತು. ಪಾಲಿಕೆ ಸಿಬ್ಬಂದಿ ಬಿದ್ದ ವಿದ್ಯುತ್‌ ಕಂಬಗಳ ತೆರವು ಕಾರ್ಯಾಚರಣೆ ಪ್ರಾರಂಭಿಸಿದರ.
ಕುಂದಗೋಳ, ನವಲಗುಂದ, ಅಣ್ಣಿಗೇರಿ ಸೇರಿದಂತೆ ಎಲ್ಲೆಡೆ ಕೆಲ ಕಾಲ ರಭಸದ ಮಳೆ ಸುರಿದ ಬಗ್ಗೆ ವರದಿಯಾಗಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ