ಸೋಮವಾರ, ಜನವರಿ 20, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ

Twitter
Facebook
LinkedIn
WhatsApp
ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ amulya brother deepak aras

ಬೆಂಗಳೂರು: ಕನ್ನಡ ನಟಿ ಅಮೂಲ್ಯ ಅವರ ಸಹೋದರ ಹಾಗೂ ನಿರ್ದೇಶಕ ದೀಪಕ್ ಅರಸ್ ಅವರು ಗುರುವಾರ ವಿಧಿವಶರಾಗಿದ್ದಾರೆ.

ಕಿಡ್ನಿ ವೈಫಲ್ಯದಿಂದಾಗಿ ದೀಪಕ್ ಅರಸ್‌ ಅವರು ನಿಧನರಾಗಿದ್ದಾರೆಂದು ಎಂದು ತಿಳಿದುಬಂದಿದೆ. ಸಂಜೆ 7 ಗಂಟೆ ಸುಮಾರಿಗೆ ಅವರು ಕೊನೆಯುಸಿರು ಎಳೆದಿದ್ದಾರೆಂದು ವರದಿಗಳು ತಿಳಿದುಬಂದಿದೆ.

ಅ.17 ಸಂಜೆ 7 ಗಂಟೆ ಸುಮಾರಿಗೆ ಅವರು ಕೊನೆಯುಸಿರು ಎಳೆದಿದ್ದಾರೆ. ಅವರಿಗೆ 42 ವರ್ಷ ವಯಸ್ಸಾಗಿತ್ತು. ದೀಪಕ್ ಅರಸ್ ಅವರಿಗೆ ಕಿಡ್ನಿ ವೈಫಲ್ಯ ಆಗಿತ್ತು. ಅದಕ್ಕೆ ಅವರು ಡಯಾಲಿಸಿಸ್ ಮಾಡಿಸುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಇಹಲೋಕ ತ್ಯಜಿಸಿದ್ದಾರೆ. ದೀಪಕ್ ಅರಸ್ ಅವರ ಸಾವಿನಿಂದಾಗಿ ಅಮೂಲ್ಯ ಅವರ ಕುಟುಂಬದಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ.

ದೀಪಕ್ ಅರಸ್ ಅವರಿಗೆ ಮದುವೆ ಆಗಿ ಇಬ್ಬರು ಮಕ್ಕಳು ಇದ್ದಾರೆ. ಬೆಂಗಳೂರಿನ ಆರ್​ಆರ್​ ನಗರದ ಖಾಸಗಿ ಆಸ್ಪತ್ರೆಯಲ್ಲಿ ದೀಪಕ್ ಅವರು ಸಾವನ್ನಪಿದ್ದಾರೆ. ಬಳಿಕ ವಯ್ಯಾಲಿಕಾವಲ್​ನ ನಿವಾಸಕ್ಕೆ ಮೃತ ದೇಹವನ್ನು ತರಲಾಗಿದೆ. ಶುಕ್ರವಾರ (ಅಕ್ಟೋಬರ್​ 18) ಅವರ ಸ್ವಗ್ರಾಮ‌ ನಾಗಮಂಗಲಕ್ಕೆ ಮೃತ ದೇಹ ತೆಗೆದುಕೊಂಡು ಹೋಗುವ ಸಾಧ್ಯತೆ ಇದೆ.

ಅಮೂಲ್ಯ, ರಾಕೇಶ್​ ಅಡಿಗ, ಸಾಧು ಕೋಕಿಲ ಮುಂತಾದವರು ನಟಿಸಿದ್ದ ‘ಮನಸಾಲಜಿ’ ಸಿನಿಮಾಗೆ ದೀಪಕ್ ಅರಸ್ ಅವರು ನಿರ್ದೇಶನ ಮಾಡಿದ್ದರು. ಆ ಸಿನಿಮಾ 2011ರಲ್ಲಿ ಬಿಡುಗಡೆ ಆಗಿತ್ತು. ಬಳಿಕ ದೀಪಕ್ ಅವರು ಆ್ಯಕ್ಷನ್​-ಕಟ್ ಹೇಳಿದ್ದು ‘ಶುಗರ್ ಫ್ಯಾಕ್ಟರಿ’ ಸಿನಿಮಾಗೆ. 2023ರ ನವೆಂಬರ್​ನಲ್ಲಿ ‘ಶುಗರ್ ಫ್ಯಾಕ್ಟರಿ’ ಸಿನಿಮಾ ತೆರೆಕಂಡಿತ್ತು. ಆ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ, ಸೋನಲ್ ಮಾಂತೆರೋ, ಅದ್ವಿತಿ ಶೆಟ್ಟಿ ಮುಂತಾದವರು ಅಭಿನಯಿಸಿದ್ದರು.

NAYAN BAKERY

ದೀಪಕ್ ಅರಸ್ ನಿಧನಕ್ಕೆ ಚಿತ್ರರಂಗದ ಅನೇಕರು ಕಂಬನಿ ಮಿಡಿದಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಲಾಗುತ್ತಿದೆ. ಮದುವೆ ಬಳಿಕ ಅಮೂಲ್ಯ ಅವರು ನಟನೆಯಿಂದ ಸ್ವಲ್ಪ ದೂರ ಉಳಿದಿದ್ದಾರೆ. ಕುಟುಂಬಕ್ಕೆ ಅವರು ಹೆಚ್ಚಿನ ಸಮಯ ಮೀಡಲಿಟ್ಟಿದ್ದಾರೆ. ಮಕ್ಕಳ ಪಾಲನೆಯಲ್ಲಿ ಅವರು ತೊಡಗಿಕೊಂಡಿದ್ದಾರೆ. ಸದ್ಯದಲ್ಲೇ ಅವರು ಕಮ್​ಬ್ಯಾಕ್​ ಮಾಡುತ್ತಾರೆ ಎಂಬ ನಿರೀಕ್ಷೆ ಇದೆ. ಆ ಬಗ್ಗೆ ಸುದ್ದಿ ಕೇಳಬೇಕು ಎಂಬುದು ಅಭಿಮಾನಿಗಳ ಬಯಕೆ. ಆದರೆ ಈಗ ಅವರ ಸಹೋದರನ ನಿಧನದ ಸುದ್ದಿ ಬಂದಿರುವುದು ಎಲ್ಲರಿಗೂ ದುಃಖ ಉಂಟು ಮಾಡಿದೆ.

ವಯಾಲಿ ಕಾವಲ್ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಕಂಗನಾ ನಟನೆಯ ‘ಎಮರ್ಜೆನ್ಸಿ’ ಚಿತ್ರಕ್ಕೆ ಸಿಕ್ತು ಪ್ರಮಾಣಪತ್ರ, ಶೀಘ್ರದಲ್ಲೇ ಬಿಡುಗಡೆ

ಕಂಗನಾ ರಣಾವತ್ ನಟನೆಯ ‘ಎಮರ್ಜೆನ್ಸಿ’ (Emergency Film) ಚಿತ್ರಕ್ಕೆ ಕೇಂದ್ರೀಯ ಚಲನಚಿತ್ರ ಪ್ರಮಾಣೀಕರಣ ಮಂಡಳಿ ಪ್ರಮಾಣಪತ್ರ (CBFC) ವಿತರಿಸಿದೆ. ಈ ಮೂಲಕ ಕಂಗನಾ ನಟನೆಯ ಸಿನಿಮಾಗಾಗಿ ಕಾಯುತ್ತಿದ್ದ ಫ್ಯಾನ್ಸ್ ಗುಡ್ ನ್ಯೂಸ್ ಸಿಕ್ಕಿದೆ.

‘ಎಮರ್ಜೆನ್ಸಿ’ ಚಿತ್ರಕ್ಕೆ ಪ್ರಮಾಣಪತ್ರ ನೀಡಿರುವ ಕುರಿತು ಖುದ್ದು ಕಂಗನಾ (Kangana Ranaut) ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ. 

ನಮ್ಮ ಎಮರ್ಜೆನ್ಸಿ ಚಿತ್ರಕ್ಕೆ ಸೆನ್ಸಾರ್ ಪ್ರಮಾಣಪತ್ರ ಸ್ವೀಕರಿಸಿದ್ದೇವೆ ಎಂದು ತಿಳಿಸಲು ಖುಷಿಯಾಗುತ್ತಿದೆ. ಶೀಘ್ರದಲ್ಲಿಯೇ ರಿಲೀಸ್ ದಿನಾಂಕವನ್ನು ಅನೌನ್ಸ್ ಮಾಡುತ್ತೇವೆ. ನಿಮ್ಮೆಲ್ಲರ ತಾಳ್ಮೆ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು ಎಂದಿದ್ದಾರೆ ನಟಿ.

ಅಂದಹಾಗೆ, ಎಮರ್ಜೆನ್ಸಿ ಸಿನಿಮಾ ಜೂನ್‌ನಲ್ಲಿಯೇ ರಿಲೀಸ್ ಆಗಬೇಕಿತ್ತು. ಆದರೆ ಕಾರಣಾಂತರಗಳಿಂದ ಸಾಧ್ಯವಾಗಿರಲಿಲ್ಲ. ಇದೀಗ ಸದ್ಯದಲ್ಲೇ ಹೊಸ ರಿಲೀಸ್ ಡೇಟ್ ಘೋಷಣೆ ಮಾಡುತ್ತೇವೆ ಎಂದು ನಟಿ ಗುಡ್ ನ್ಯೂಸ್ ನೀಡಿದ್ದಾರೆ. ಇನ್ನೂ ಇಂದಿರಾ ಗಾಂಧಿ (Indira Gandhi) ಜೀವನ ಆಧರಿಸಿದ ಸಿನಿಮಾ ಇದಾಗಿದೆ. ಕಂಗನಾ ಅವರು ಇಂದಿರಾ ಗಾಂಧಿ ಪಾತ್ರಕ್ಕೆ ಜೀವ ತುಂಬಿದ್ದಾರೆ. ಅವರೇ ನಟಿಸುವುದರ ಜೊತೆ ನಿರ್ದೇಶನ ಮತ್ತು ನಿರ್ಮಾಣ ಕೂಡ ಮಾಡಿದ್ದಾರೆ.

ಚಿತ್ರೀಕರಣಕ್ಕೆ ಮರಳಲಿರುವ ಸಲ್ಮಾನ್ ಖಾನ್​

ಕೆಲ ದಿನಗಳ ಹಿಂದಷ್ಟೆ ಸಲ್ಮಾನ್ ಖಾನ್​ರ ಆಪ್ತ ಬಾಬಾ ಸಿದ್ಧಿಕಿ ಅವರನ್ನು ಕೆಲ ಅಗಂತುಕರು ಕೊಂದಿದ್ದು, ಮುಂದಿನ ಟಾರ್ಗೆಟ್ ಸಲ್ಮಾನ್ ಖಾನ್ ಎಂದಿದ್ದಾರೆ. ಇದು ಸಲ್ಮಾನ್ ಖಾನ್ ಅಭಿಮಾನಿಗಳನ್ನು ಆತಂಕಕ್ಕೆ ಈಡು ಮಾಡಿದೆ. ಆದರೆ ಇದೆಲ್ಲದರ ನಡುವೆಯೂ ಸಲ್ಮಾನ್ ಖಾನ್ ಮತ್ತೆ ಚಿತ್ರೀಕರಣಕ್ಕೆ ಮರಳುತ್ತಿದ್ದಾರೆ.

ಬಾಬಾ ಸಿದ್ಧಿಕಿ ಹತ್ಯೆ ಆದ ಬಳಿಕ ನಿಗದಿಯಾಗಿದ್ದ ತಮ್ಮ ಎಲ್ಲ ಕಾರ್ಯಕ್ರಮಗಳನ್ನು ಸಲ್ಮಾನ್ ಖಾನ್ ರದ್ದು ಮಾಡಿದ್ದರು. ಆದರೆ ಕೆಲವೇ ದಿನಕ್ಕೆ ಈಗ ಮತ್ತೆ ಸಿನಿಮಾ ಚಿತ್ರೀಕರಣಕ್ಕೆ ಮರಳುವ ನಿರ್ಧಾರ ಮಾಡಿದ್ದಾರೆ. ಅಲ್ಲದೆ ಈ ವಾರದ ಬಿಗ್​ಬಾಸ್ ವೀಕೆಂಡ್ ಎಪಿಸೋಡ್​ನ ಚಿತ್ರೀಕರಣದಲ್ಲಿಯೂ ಸಹ ಸಲ್ಮಾನ್ ಖಾನ್ ಭಾಗಿಯಾಗಲಿದ್ದಾರೆ ಎನ್ನಲಾಗುತ್ತಿದೆ.

ಬಾಬಾ ಸಿದ್ಧಿಕಿ ಹತ್ಯೆ ಬಳಿಕ ಸಲ್ಮಾನ್ ಖಾನ್​ರ ಭದ್ರತೆಯನ್ನು ಹೆಚ್ಚಿಸಲಾಗಿದೆ. ಸಲ್ಮಾನ್ ಖಾನ್ ಸಹ ತಮ್ಮ ಭದ್ರತೆಗಾಗಿ ಖಾಸಗಿ ಸಂಗರಕ್ಷಕರನ್ನು ಸಹ ನೇಮಿಸಿಕೊಂಡಿದ್ದಾರೆ. ಈ ಹಿಂದೆ ಬೆದರಿಕೆ ಇದ್ದಾಗಲೂ ಸಹ ಸಲ್ಮಾನ್ ಖಾನ್ ಯಾವುದೇ ಹಿಂಜರಿಕೆ ಇಲ್ಲದೆ ಸಿನಿಮಾ ಚಿತ್ರೀಕರಣಗಳಲ್ಲಿ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಈಗಲೂ ಸಹ ಸಲ್ಮಾನ್ ಖಾನ್ ಮತ್ತೆ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ ಈ ಬಾರಿ ಭದ್ರತೆಯನ್ನು ಇನ್ನಷ್ಟು ಹೆಚ್ಚು ಮಾಡಲಾಗುವುದಂತೆ.

ಸಿಖಂಧರ್’ ಸಿನಿಮಾವನ್ನು ತಮಿಳಿನ ಮುರುಗದಾಸ್ ನಿರ್ದೇಶನ ಮಾಡುತ್ತಿದ್ದು, ಕನ್ನಡತಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾದ ಚಿತ್ರೀಕರಣ ತಿಂಗಳ ಹಿಂದೆಯೇ ಪ್ರಾರಂಭವಾಗಿದ್ದು ವಿದೇಶದಲ್ಲಿ ಕೆಲ ಭಾಗಗಳ ಚಿತ್ರೀಕರಣವನ್ನು ಚಿತ್ರತಂಡ ಮುಗಿಸಿದೆ.

ಭಾರತದಲ್ಲಿ ಚಿತ್ರೀಕರಣ ಜಾರಿಯಲ್ಲಿರುವಾಗಲೇ ಈ ದುರ್ಘಟನೆ ನಡೆದಿದೆ. ಮುಂದಿನ ಚಿತ್ರೀಕರಣಕ್ಕೆ ಸೆಟ್​ನಲ್ಲಿ ಭದ್ರತೆಯನ್ನು ಹೆಚ್ಚು ಮಾಡಲಾಗುತ್ತಿದ್ದು, ಸಲ್ಮಾನ್ ಖಾನ್ ಸೆಟ್​ಗೆ ಬರುವ ಮುನ್ನವೇ ಭದ್ರತೆಯವರು ಹಾಜರಿದ್ದು ಸೆಟ್​ ಅನ್ನು ಪರಿಶೀಲಿಸಿದ ಬಳಿಕವಷ್ಟೆ ಸಲ್ಮಾನ್ ಖಾನ್ ಬರಲಿದ್ದಾರೆ.

ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್​ನವರು ಸಲ್ಮಾನ್ ಖಾನ್ ಅನ್ನು ಕೊಲ್ಲುವ ಪ್ರಯತ್ನ ಮಾಡುತ್ತಲೇ ಬರುತ್ತಿದ್ದಾರೆ. ಈ ಹಿಂದೆ ಕೆಲವು ಬಾರಿ ಸಲ್ಮಾನ್ ಖಾನ್ ಅನ್ನು ಕೊಲ್ಲುವ ಪ್ರಯತ್ನವನ್ನು ಈ ಗ್ಯಾಂಗ್ ಮಾಡಿದೆ ಆದರೆ ಸಫಲವಾಗಿಲ್ಲ. ನಿನ್ನೆ ಸಹ ಸಲ್ಮಾನ್ ಖಾನ್​ಗೆ ಕೊಲೆ ಬೆದರಿಕೆ ಹಾಕಿದ ಹರಿಯಾಣ ಮೂಲದ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist