ಮಂಗಳವಾರ, ಏಪ್ರಿಲ್ 30, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಟಿ ಕಂಗನಾರನ್ನು ಬಂಧಿಸಿ, ದೇಶದ್ರೋಹದ ಕೇಸ್ ದಾಖಲಿಸಲು ವಿಪಕ್ಷಗಳ ಆಗ್ರಹ

Twitter
Facebook
LinkedIn
WhatsApp
ನಟಿ ಕಂಗನಾರನ್ನು ಬಂಧಿಸಿ, ದೇಶದ್ರೋಹದ ಕೇಸ್ ದಾಖಲಿಸಲು ವಿಪಕ್ಷಗಳ ಆಗ್ರಹ

ದೇಶಕ್ಕೆ ನಿಜವಾಗಿ ಸ್ವಾತಂತ್ರ್ಯ ದೊರಕಿದ್ದು 2014ರಲ್ಲಿ ಎಂದಿರುವ ಬಾಲಿವುಡ್ ನಟಿ ಕಂಗನಾ ರನೌತ್‌ಗೆ ಇತ್ತೀಚೆಗೆ ನೀಡಿರುವ ಪದ್ಮಶ್ರೀ ಹಿಂಪಡೆದು ಅವರನ್ನು ಸೆರೆಮನೆಗೆ ತಳ್ಳಬೇಕು ಎಂದು ವಿರೋಧ ಪಕ್ಷಗಳು ಆಗ್ರಹಿಸಿವೆ.

ವಿವಾದಾತ್ಮಕ ಹೇಳಿಕೆಯಿಂದ ಸದಾ ಸುದ್ದಿಯಲ್ಲಿರುವ ಬಾಲಿವುಡ್ ಬೆಡಗಿ ಕಂಗನಾ ರನೌತ್‌ ಈಗ ಮತ್ತೊಂದು ವಿವಾದದಲ್ಲಿ ಸಿಲುಕಿದ್ದಾರೆ. ಅವರ ವಿರುದ್ಧ ಪ್ರತಿಪಕ್ಷಗಳು ಹರಿಹಾಯ್ದಿವೆ. ಖಾಸಗಿ ಟಿವಿ ವಾಹಿನಿಯ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅವರು, “2014ರಲ್ಲಿ ನರೇಂದ್ರ ಮೋದಿ ಪ್ರಧಾನಿಯಾದ ನಂತರ ದೇಶಕ್ಕೆ ನಿಜವಾಗಿ ಸ್ವಾತಂತ್ರ್ಯ ದೊರಕಿತು. 1947ರ ದೊರಕಿದ್ದು ಭಿಕ್ಷೆ’ ಎಂದಿದ್ದರು.

ಇದನ್ನು ಖಂಡಿಸಿರುವ ವಿರೋಧ ಪಕ್ಷಗಳ ಮುಖಂಡರು, ನಟಿಯನ್ನು ಬಂಧಿಸಿ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ. ಸೋಮವಾರ ಅವರಿಗೆ ಪ್ರದಾನ ಮಾಡಲಾದ ಪದ್ಮಶ್ರೀ ಪ್ರಶಸ್ತಿಯನ್ನೂ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
“ಪದ್ಮಶ್ರೀಯಂತಹ ಪ್ರತಿಷ್ಠಿತ ಪ್ರಶಸ್ತಿ ನೀಡುವುದಕ್ಕೂ ಮುನ್ನ ಅದಕ್ಕೆ ಆಯ್ಕೆ ಆದವರ ಮಾನಸಿಕ ಆರೋಗ್ಯವನ್ನು ತಪಾಸಣೆ ಮಾಡಿಸಬೇಕು’ ಎಂದು ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಟ್ವೀಟ್ ಮಾಡಿದ್ದಾರೆ. ಇದನ್ನು ರಾಷ್ಟ್ರಪತಿ ರಾಮನಾಥ ಕೋವಿಂದ ಅವರಿಗೆ ಟ್ಯಾಗ್ ಮಾಡಿದ್ದಾರೆ.

‘ನಟಿ ಕಂಗನಾ ಅವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ, ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್, ಕೆಚ್ಚೆದೆಯ ಹೋರಾಟಗಾರರಾದ ಭಗತ್ ಸಿಂಗ್, ಚಂದ್ರಶೇಖರ್ ಆಜಾದ್ ಇನ್ನಿತರ ಸ್ವಾತಂತ್ರ್ಯ ಹೋರಾಟಗಾರರನ್ನು ಅಪಮಾನಿಸಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಂಗನಾ ರನೌತ್‌ ಹೈಡೋಸೇಜ್ ಮಲಾನಾ ಕ್ರೀಮ್ (ಒಂದು ವಿಧದ ಹಶೀಶ್) ಡ್ರಗ್ಸ್ ಸೇವಿಸಿ ಅಮಲಿನಿಂದ ಈ ರೀತಿ ಬಡಬಡಾಯಿಸಿರಬೇಕು ಎಂದು ಮಹಾರಾಷ್ಟ್ರದ ಸಚಿವ ಎನ್ಸಿಪಿ ಮುಖಂಡ ನವಾಬ್ ಮಲಿಕ್ ವ್ಯಂಗ್ಯವಾಡಿದ್ದಾರೆ.
ಮುಂಬೈ ಪೊಲೀಸರು ನಟಿ ಕಂಗನಾ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.”ಒಂದು ಸಾರಿ ಮಹಾತ್ಮ ಗಾಂಧಿ ಅವರ ತ್ಯಾಗವನ್ನು ಹೀಯಾಳಿಸಿದರೆ, ಮಗದೊಮ್ಮೆ ಗಾಂಧೀಜಿ ಹಂತಕ ನಾಥುರಾಂ ಗೋಡ್ಸೆಯನ್ನು ಹೊಗಳುತ್ತಾರೆ. ಈಗ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಡಿದ ಎಲ್ಲರನ್ನೂ ಕಂಗನಾ ಅವಮಾನಿಸುವ ಹೇಳಿಕೆ ನೀಡಿದ್ದಾರೆ ಎಂದು
ಅವರು ಆರೋಪಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು