ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಟ ಅನಂತ್ ನಾಗ್ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ

Twitter
Facebook
LinkedIn
WhatsApp
Anant Nag 1

ನ್ನಡದ ಹಿರಿಯ ನಟ ಅನಂತ್ ನಾಗ್ ಇಂದು ಅಧಿಕೃತವಾಗಿ ಭಾರತೀಯ ಜನತಾ ಪಕ್ಷ ಸೇರಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ಆಡಳಿತ ಸರಕಾರದ ಕಾರ್ಯಗಳನ್ನು ಈವರೆಗೂ ಬೆಂಬಲಿಸುತ್ತಾ ಬಂದಿದ್ದ ಅನಂತ್ ನಾಗ್, ಬಿಜೆಪಿ ಸೇರ್ಪಡೆ ಆಗಲಿದ್ದಾರೆ ಎನ್ನುವ ಸುದ್ದಿ ಇತ್ತು. ಅದು ಈಗ ನಿಜವಾಗಿದೆ.

ಇಂದು ಸಂಜೆ 4.30ಕ್ಕೆ ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಸಮ್ಮುಖದಲ್ಲಿ ಅವರು ಪಕ್ಷವನ್ನು ಸೇರುತ್ತಿದ್ದಾರೆ. ಈ ಸಂದರ್ಭದಲ್ಲಿ ನಿರ್ಮಾಪಕ, ಸಚಿವ ಮುನಿರತ್ನ ಸೇರಿದಂತೆ ಹಲವು ಗಣ್ಯರು ಉಪಸ್ಥಿತಿ ಇರಲಿದ್ದಾರೆ. 

ಅನಂತ್ ನಾಗ್ ರಾಜಕಾರಣಕ್ಕೆ ಬರುತ್ತಿರುವುದು ಹೊಸದೇನೂ ಅಲ್ಲ. ಈಗಾಗಲೇ ಅವರು ಜೆ.ಎಚ್. ಪಟೇಲ್ ನೇತೃತ್ವದ ಸರಕಾರದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಕೆಲಸ ಮಾಡಿದವರು. 2004ರಲ್ಲಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿ ಸೋತಿದ್ದರು. ಅಲ್ಲದೇ, ಶಾಸಕರಾಗಿ, ಪರಿಷತ್ ಸದಸ್ಯರಾಗಿ ಕೆಲಸ ಮಾಡಿದ ಅನುಭವ ಅವರಿಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ