ಬೆಳಗಾವಿ: ವಿಚ್ಛೇದನ ನೀಡಲು ಮುಂದಾದ ಪತ್ನಿಯನ್ನು ಪತಿ ನಡುರಸ್ತೆಯಲ್ಲೇ ಹಾಡಹಗಲೇ ಸಾರ್ವಜನಿಕವಾಗಿ ಮಾರಕಾಯುಧದಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಘಟನೆ ನಗರದ ಕೋಟೆ ಕೆರೆ ಬಳಿ ಶುಕ್ರವಾರ ನಡೆದಿದೆ.ಹೀನಾ ಕೌಸರ್ (24 ) ಎಂಬಾಕೆ ಹತ್ಯೆಗೀಡಾಗಿದ್ದು, ಪತಿ ಮಂಜೂರ್ ಇಲಾಹಿ ನಧಾಪ್ (34) ನನ್ನ ಘಟನೆ ಬಳಿಕ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಾರಕಾಸ್ತ್ರದಿಂದ ಪತ್ನಿಯನ್ನು ಕೊಂದು ಅಲ್ಲಿಯೇ ನಿಂತಿದ್ದು, ಸಾರವಜನಿಕರು ಬೆಚ್ಚಿ ಬಿದ್ದಿದ್ದಾರೆ. ಇದನ್ನು ನೋಡಿದ ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.
ಕಳೆದ ನಾಲ್ಕು ವರ್ಷಗಳ ಹಿಂದೆ ಬೈಲಹೊಂಗಲ ತಾಲೂಕಿನ ದೇವಲಾಪುರ ಗ್ರಾಮದ ಮಂಜೂರ್ ಜೊತೆ ವಿವಾಹವಾಗಿದ್ದ ಹೀನಾ ಎಂಟು ತಿಂಗಳ ಹಿಂದೆ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು ಎಂದು ತಿಳಿದು ಬಂದಿದೆ.ಮಾರಕಾಯುಧಗಳಿಂದ ದಾಳಿ ನಡೆದ ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ಹೀನಾ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲೆ ಸಾವನ್ನಪ್ಪಿದ್ದಾರೆ.
ಇಂದು ಕೋರ್ಟ್‌ಗೆ ಹಾಜರಾಗಿ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ವಿಚ್ಛೇದನ ನೀಡದಂತೆ ಕೇಳಿಕೊಂಡಿದ್ದ ಪತಿ ರೊಚ್ಚಿಗೆದ್ದು ಜನನಿಬಿಡ ಪ್ರದೇಶದಲ್ಲೇ ಕೃತ್ಯ ಎಸಗಿದ್ದಾನೆ.
ಸ್ಥಳಕ್ಕೆ ಡಿಸಿಪಿ ರವೀಂದ್ರ ಸೇರಿ ಪೊಲೀಸರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist