ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನನಗೆ ನನ್ನದೇ ಆದ ಶಕ್ತಿ ಇದೆ: ಬಿ.ಎಸ್‌.ಯಡಿಯೂರಪ್ಪ

Twitter
Facebook
LinkedIn
WhatsApp
ನನಗೆ ನನ್ನದೇ ಆದ ಶಕ್ತಿ ಇದೆ: ಬಿ.ಎಸ್‌.ಯಡಿಯೂರಪ್ಪ

ಬೆಂಗಳೂರು (ಡಿ.16): ರಾಜ್ಯದಲ್ಲಿ ನನಗೆ ನನ್ನದೇ ಆದ ಶಕ್ತಿ ಇದೆ. ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಸಾಕಷ್ಟುಶ್ರಮ ಹಾಕಿದ್ದೇನೆ. ಯಾರೂ ಯಾರನ್ನೂ ರಾಜಕೀಯವಾಗಿ ಮುಗಿಸಲು ಸಾಧ್ಯವಿಲ್ಲ. ಎಲ್ಲರಿಗೂ ಅವರದೇ ಆದ ಶಕ್ತಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸ್ವಪಕ್ಷದವರಿಗೆ ಪರೋಕ್ಷವಾಗಿ ಎಚ್ಚರಿಕೆಯ ಸಂದೇಶ ನೀಡಿದ್ದಾರೆ. ಗುರುವಾರ ಕೊಪ್ಪಳಕ್ಕೆ ತೆರಳುವ ಮುನ್ನ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜಕಾರಣದಲ್ಲಿ ಎಲ್ಲರಿಗೂ ಅವರದೇ ಆದ ಶಕ್ತಿ ಇರುತ್ತದೆ. ಯಾರೂ ಯಾರನ್ನು ಮುಗಿಸಲು ಸಾಧ್ಯವಿಲ್ಲ. ನನಗೆ ನನ್ನದೇ ಆದ ಶಕ್ತಿ ಇದೆ. ನಾನು ಪಕ್ಷ ಕಟ್ಟಿಬೆಳೆಸಿದ್ದೇನೆ. 

ಪಕ್ಷವನ್ನು ಅಧಿಕಾರಕ್ಕೆ ತಂದವರು ಯಾರು? ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮ ಹಾಕಿದ್ದೇನೆ. ಇಡೀ ರಾಜ್ಯದ ಜನರಿಗೆ ಗೊತ್ತಿದೆ. ಪಕ್ಷದಲ್ಲಿ ನನ್ನನ್ನು ಮುಗಿಸಲು ಷಡ್ಯಂತ್ರ ನಡೆಯುತ್ತಿದೆ ಎಂಬ ಆರೋಪವು ಸತ್ಯಕ್ಕೆ ದೂರವಾದುದು ಎಂದು ತಿಳಿಸಿದರು. ಇನ್ನು, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಾಗಲಿ, ಗೊಂದಲಗಳಾಗಲಿ ಇಲ್ಲ. ಮಾಧ್ಯಮ ಸ್ನೇಹಿತರು ಯಾವುದನ್ನೂ ಸೃಷ್ಟಿಸಬಾರದು. ನಾವೆಲ್ಲಾ ಒಗ್ಗಟ್ಟಾಗಿದ್ದೇವೆ. ನಮ್ಮದು ಒಂದೇ ಅಜೆಂಡಾ ಇದ್ದು, ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವುದು. ಅದಕ್ಕೆ ಬೇಕಾದ ಎಲ್ಲಾ ಶ್ರಮ ಹಾಕುತ್ತೇನೆ. ರಾಜ್ಯದ ಉದ್ದಗಲಕ್ಕೂ ಓಡಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ