ಬುಧವಾರ, ಮೇ 15, 2024
8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನನಸಾಗಲಿದೆ ಪುನೀತ್ ಕನಸು ಕುರಿತು ಅಶ್ವಿನಿ ಮಹತ್ವದ ಘೋಷಣೆ.

Twitter
Facebook
LinkedIn
WhatsApp
ನನಸಾಗಲಿದೆ ಪುನೀತ್ ಕನಸು ಕುರಿತು ಅಶ್ವಿನಿ ಮಹತ್ವದ ಘೋಷಣೆ.

ಪುನೀತ್ ರಾಜ್ ಕುಮಾರ್ ಸ್ಯಾಂಡಲ್ ವುಡ್ ನ ಕನಸುಗಾರ ಹೀರೋ. ತಮ್ಮ‌ ಕೆರಿಯರ್ ಜೊತೆ ಚಿತ್ರರಂಗದ ಕಿರಿಯರಿಗಾಗಿಯೂ ಹಲವು ಪ್ರಾಜೆಕ್ಟ್ ಸಿದ್ಧಪಡಿಸಿದ್ದರು. ಪ್ರೊಡಕ್ಷನ್ ಹೌಸ್ (PRK) ಮೂಲಕ ಹೊಸಬರಿಗೆ ಆಶ್ರಯತಾಣವಾಗಿದ್ದರು. ಆದರೇ ಎಲ್ಲ ಕನಸುಗಳನ್ನು ಅರ್ಧಕ್ಕೆ ಬಿಟ್ಟು ಎದ್ದು ಹೋಗಿದ್ದಾರೆ. ಈಗ ಈ ಕನಸುಗಳನ್ನು ನನಸಾಗಿಸಲು ಅಶ್ವಿನಿ ಸಿದ್ಧವಾಗಿದ್ದು ಅಭಿಮಾನಿಗಳಿಗೆ ಸಿಹಿಸುದ್ದಿ‌ನೀಡಿದ್ದಾರೆ.

ಪುನೀತ್ ನಿಧನದ ಬಳಿಕ ಅವರ ಎಲ್ಲ ವ್ಯವಹಾರಗಳನ್ನು ಅಶ್ವಿನಿ ಪುನೀತ್ ರಾಜ್ ಕುಮಾರ್ ನೋಡಿಕೊಳ್ಳುತ್ತಿದ್ದಾರೆ. ಇದಕ್ಕೆ ಪಿಆರ್ ಕೆ ಪ್ರೊಡಕ್ಷನ್ ಹೌಸ್ ಕೂಡ ಹೊರತಲ್ಲ. ಪಿಆರ್ ಕೆ ಪ್ರೊಡಕ್ಷನ್ ಹೌಸ್ ಮೂಲಕ ಪುನೀತ್ ಕಂಡಿದ್ದ ಕನಸುಗಳನ್ನು ನನಸಾಗಿಸಲು ಅಶ್ವಿನಿ ಮುಂದಾಗಿದ್ದು ಮಹತ್ವದ ಘೋಷಣೆ ಮಾಡಿದ್ದಾರೆ.

ವೈಲ್ಡ್ ಕರ್ನಾಟಕ ಡಾಕ್ಯುಮೆಂಟರಿ ಮಾಡಿದ್ದ ಅಮೋಘವರ್ಷ ಜೊತೆ ಸೇರಿ ಪುನೀತ್ ರಾಜ್ ಕುಮಾರ್ ಕರ್ನಾಟಕದ ಬಗ್ಗೆ ಸಾಕ್ಷ್ಯಚಿತ್ರವೊಂದನ್ನು ಸಿದ್ಧಪಡಿಸಲು ಮುಂದಾಗಿದ್ದರು. ಈ ಸಾಕ್ಷ್ಯಚಿತ್ರಕ್ಕೆ ಗಂಧದಗುಡಿ ಎಂದು ಹೆಸರಿಡಲಾಗಿತ್ತು. ಈ ಸಾಕ್ಷ್ಯ ಚಿತ್ರವನ್ನು ಪುನೀತ್ ಸ್ವತಃ ರಾಜ್ಯದ ಎಲ್ಲೆಡೆ ಓಡಾಡಿ ಶೂಟ್ ಮಾಡಿಸಿದ್ದರು. ಈ ಸಾಕ್ಷ್ಯ ಚಿತ್ರದಲ್ಲಿ ಪುನೀತ್ ಕೂಡ ಕಾಣಿಸಿಕೊಂಡಿದ್ದರು.

ಎಲ್ಲ ಅಂದುಕೊಂಡಂತೆ ಆಗಿದ್ದರೇ ನವೆಂಬರ್ ೧ ಕನ್ನಡ ರಾಜ್ಯೋತ್ಸವದಂದು ಗಂಧದಗುಡಿಯ ಟೀಸರ್ ಕೂಡಬಿಡುಗಡೆಯಾಗಬೇಕಿತ್ತು. ಆದರೆ ಪುನೀತ್ ಅಗಲಿಕೆ ಈ ಎಲ್ಲ ಕನಸು ಗಳನ್ನು ಅರ್ಧಕ್ಕೆ ಬಿಟ್ಟು ಹೋಗುವಂತೆ ಮಾಡಿತ್ತು. ಗಂಧದಗುಡಿ ಟೀಸರ್ ರಿಲೀಸ್ ಬಗ್ಗೆ ತುಂಬ ಎಕ್ಸೈಟ್ ಆಗಿದ್ದ ಪುನೀತ್ ನಿಧನದ ಕೆಲವು ದಿನ ಮೊದಲು ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು.ನಮ್ಮ ಜನ ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು. ನಮ್ಮ ಅಡವಿಯ ಹಸಿರನ್ನು ಜಗತ್ತಿಗೆ ಹರಡಿತ್ತು. ಪೀಳಿಗೆಗೆ ಸ್ಪೂರ್ತಿ ನೀಡಿ ಅಜರಾಮರವಾಗಿತ್ತು. ಆ ಚರಿತ್ರೆ ಮರಳುವ ಸಮಯವೀಗ ಬಂದಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದರು.

ಅಲ್ಲದೇ ಇದಕ್ಕಾಗಿ‌ ನವೆಂಬರ್ 1 ರವರೆಗೆ ಕಾಯುವಂತೆಯೂ ಹೇಳಿದ್ದರು. ಆದರೆ ನವೆಂಬರ್ 1 ಬೆಳಗಾಗುವ ಹೊತ್ತಿಗೆ ಪುನೀತ್ ನೆನಪಿನ ಬುತ್ತಿ ಸೇರಿದ್ದರು. ಈಗ‌ ಈ ಕನಸಿಗೆ ಮತ್ತೆ ಜೀವ ಬಂದಿದೆ. ಪುನೀತ್ ಪತ್ನಿ ಅಶ್ವಿನಿ, ಈ ಬಗ್ಗೆ ಪಿಆರ್ ಕೆ ಪ್ರೊಡಕ್ಷನ್ ಕಡೆಯಿಂದ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದು, ಅಪ್ಪು ಅವರ ಕನಸೊಂದು 1/11/2021 ರಂದು ಬೆಳಕು ಕಾಣಬೇಕಿತ್ತು. ಆದರೆ ಈ ಕನಸಿಗಿದು ಅಲ್ಪವಿರಾಮವಷ್ಟೇ. ಅದನ್ನು ಅವರಿಷ್ಟದಂತೆ ನನಸಾಗಿಸುವ ಜವಾಬ್ದಾರಿ ನಮ್ಮದು. ಇಲ್ಲಿಯವರೆಗೆ ನೀವು ತೋರಿದ ಸಂಯಮ ಮತ್ತು ಸಹಕಾರಕ್ಕೆ ನಾವು ಆಭಾರಿ ಎಂದು ಅಶ್ವಿನಿ ಟ್ವೀಟ್ ಮಾಡಿದ್ದಾರೆ. ಹೀಗಾಗಿ ಪುನೀತ್ ಗಂಧದಗುಡಿ ಸಾಕ್ಷ್ಯಚಿತ್ರ‌ ಸದ್ಯವೇ ತೆರೆಕಾಣಲಿದೆ ಎಂಬ ಭರವಸೆ ಮೂಡಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು