ಗುರುವಾರ, ಏಪ್ರಿಲ್ 25, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನನ್ನನ್ನು ಶೂರ್ಪನಖಿ ಎಂದ ಮೋದಿ ವಿರುದ್ಧ ಮಾನನಷ್ಟ ಕೇಸ್‌ ಹಾಕ್ತೀನಿ: ರೇಣುಕಾ ಚೌಧರಿ

Twitter
Facebook
LinkedIn
WhatsApp
Top 10 Highest Paying Jobs in India 03 2
 

ನವದೆಹಲಿ: ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ರಾಹುಲ್‌ ಗಾಂಧಿ (Rahul Gandhi) ಜೈಲು ಶಿಕ್ಷೆಗೆ ಗುರಿಯಾದ ಬೆನ್ನಲ್ಲೇ ನಾನು ನರೇಂದ್ರ ಮೋದಿ ವಿರುದ್ಧ ನ್ಯಾಯಾಲಯದಲ್ಲಿ ಮಾನನಷ್ಟ ಕೇಸ್‌ ಹಾಕುತ್ತೇನೆ ಎಂದು ಕಾಂಗ್ರೆಸ್‌ ನಾಯಕಿ, ಮಾಜಿ ಸಚಿವೆ ರೇಣುಕಾ ಚೌಧರಿ (Renuka Chowdhury) ಹೇಳಿದ್ದಾರೆ.

ನನ್ನನ್ನು ಶೂರ್ಪನಖಿ (Surpanaka) ಎಂದು ಉಲ್ಲೇಖಿಸಿದ್ದಾರೆ. ಹೀಗಾಗಿ ನಾನು ಮೋದಿ (Narendra Modi) ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ. ನ್ಯಾಯಾಲಯಗಳು ಎಷ್ಟು ವೇಗವಾಗಿ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ನೋಡೋಣ ಎಂದು ರೇಣುಕಾ ಚೌಧರಿ ಟ್ವೀಟ್‌ ಮಾಡಿ ತಿಳಿಸಿದ್ದಾರೆ.

ಮೋದಿ ಹೇಳಿದ್ದೇನು?
2018ರ ರಾಜ್ಯಸಭಾ (Rajya Sabha) ಕಲಾಪದ ಹಳೆ ವಿಡಿಯೋದಲ್ಲಿ ಆಧಾರ್‌ ಕಾರ್ಡ್‌ಗೆ (Aadhar Card) ಸಂಬಂಧಿಸಿದಂತೆ ಪ್ರಧಾನಿ ಮೋದಿ ಹೇಳಿಕೆಗೆ ಸಂಸದೆ ರೇಣುಕಾ ಚೌಧರಿ ಜೋರಾಗಿ ನಗುತ್ತಿರುತ್ತಾರೆ. ಈ ಸಂದರ್ಭದಲ್ಲಿ ಸಭಾಧ್ಯಕ್ಷ ವೆಂಕಯ್ಯ ನಾಯ್ಡು (Venkaiah Naidu) ಅವರು, “ನಿಮ್ಮ ಸಮಸ್ಯೆ ಏನು? ನಿಮಗೇನಾದರೂ ಸಮಸ್ಯೆ ಆಗಿದ್ದರೆ ವೈದ್ಯರ ಬಳಿ ಹೋಗಿ, ದಯವಿಟ್ಟು ಸುಮ್ಮನೇ ಕುಳಿತುಕೊಳ್ಳಿ” ಎಂದು ತರಾಟೆಗೆ ತೆಗೆದುಕೊಳ್ಳುತ್ತಾರೆ.

ವೆಂಕಯ್ಯ ನಾಯ್ಡು ಸೂಚನೆಯನ್ನೂ ಧಿಕ್ಕರಿಸಿ ರೇಣುಕಾ ನಗುವುದನ್ನು ಮುಂದುವರಿಸುತ್ತಾರೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, “ಸಭಾಪತಿಜೀ ರೇಣುಕಾಜೀ ಅವರಿಗೆ ನೀವು ನಗಲು ಬಿಡಿ. ರಾಮಾಯಣ (Ramayana) ಧಾರಾವಾಹಿಯ ನಂತರ ಈ ರೀತಿಯ ನಗುವನ್ನು ಕೇಳುವ ಸೌಭಾಗ್ಯ ಇಂದು ನಮಗೆ ಒದಗಿ ಬಂದಿದೆ” ಎಂದು ವ್ಯಂಗ್ಯವಾಡುತ್ತಾರೆ.

ಮೋದಿ ರಾಮಾಯಣದ ಉದಾಹರಣೆ ನೀಡಿ ರೇಣುಕಾ ಚೌಧರಿ ಅವರ ಕಾಲೆಳೆಯುತ್ತಿದ್ದಂತೆ ಬಿಜೆಪಿ ಸಂಸದರು ಬೆಂಚನ್ನು ಕುಟ್ಟಿ ಜೋರಾಗಿ ಬಿದ್ದು ಬಿದ್ದು ನಗಲು ಶುರು ಮಾಡುತ್ತಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. 

 

ಕೇಸ್‌ ಹಾಕಲು ಸಾಧ್ಯವೇ?
ಸಾಮಾಜಿಕ ಜಾಲತಾಣದಲ್ಲಿ ಈಗ ಕಾಂಗ್ರೆಸ್‌ ನಾಯಕರು ಈ ಹೇಳಿಕೆಯ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದ್ದರೆ ಕೆಲವರು ಈ ಹೇಳಿಕೆ ವಿರುದ್ಧ ನ್ಯಾಯಾಲಯದಲ್ಲಿ ಕೇಸ್‌ ದಾಖಲಿಸಲು ಬರುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮೊದಲನೆಯದಾಗಿ ಮೋದಿ ಎಲ್ಲಿಯೂ ನೇರವಾಗಿ ರೇಣುಕಾ ಚೌಧರಿ ಅವರನ್ನು ʼಶೂರ್ಪನಖಿʼ ಎಂದು ಸಂಬೋಧನೆ ಮಾಡಿಲ್ಲ. ಎರಡನೇಯದಾಗಿ ಮೋದಿ ರಾಜ್ಯಸಭಾ ಕಲಾಪದಲ್ಲಿ ಮಾತನಾಡಿದ್ದಾರೆ. ಸಂಸತ್ತು ಅಥವಾ ರಾಜ್ಯದ ಶಾಸನ ಸಭೆಯಲ್ಲಿ ಸದಸ್ಯರ ವಿರುದ್ಧ ಏನೇ ಮಾತನಾಡಿದರೂ ಆ ಹೇಳಿಕೆಯನ್ನು ಪ್ರಶ್ನಿಸಿ ಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ. ಸದನದಲ್ಲಿ ಮಾತನಾಡಿ ಹಕ್ಕು ಚ್ಯುತಿಯಾಗಿದ್ದರೆ ಅದನ್ನು ಸದನದಲ್ಲೇ ಪ್ರಶ್ನೆ ಮಾಡಬೇಕು. ಈ ವಿಚಾರದಲ್ಲಿ ಅಂತಿಮ ನಿರ್ಧಾರ ಸ್ಪೀಕರ್‌ ತೆಗೆದುಕೊಳ್ಳಬಹುದೇ ವಿನಾ: ನ್ಯಾಯಾಧೀಶರಿಗೆ ತೆಗೆದುಕೊಳ್ಳಲು ಬರುವುದಿಲ್ಲ. ಹೀಗಾಗಿ ಈ ರೇಣುಕಾ ಚೌಧರಿ ಈ ವಿಷಯವನ್ನು ಯಾವ ಆಧಾರದಲ್ಲಿ ಕೋರ್ಟ್‌ನಲ್ಲಿ ಪ್ರಶ್ನೆ ಮಾಡುಬಹುದು ಎಂಬ ಕುತೂಹಲ ಈಗ ಹೆಚ್ಚಾಗಿದೆ.

ಮೋದಿ ಮಾತನಾಡಿದ್ದು 2018ರಲ್ಲಿ. ಅಲ್ಲಿಂದ ಇಲ್ಲಿಯವರೆಗೂ ಎಲ್ಲಿಯೂ ಕೇಸ್‌ ಹಾಕದ ನೀವು ಈಗ ದೂರು ನೀಡುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ರೇಣುಕಾ ಚೌಧರಿ ಅವರಿಗೆ ನೆಟ್ಟಿಗರು ಕ್ಲಾಸ್‌ ತೆಗೆದುಕೊಳ್ಳುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ