ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನನ್ನ ಜೊತೆ ಕಾಂಗ್ರೆಸ್ ನ 40-45 ಜನ ಸಂಪರ್ಕದಲ್ಲಿದ್ದಾರೆ ; ಒಪ್ಪಿಗೆ ಕೊಟ್ಟರೆ ಒಂದು ದಿನದ ಕೆಲಸ ಅಷ್ಟೇ - ಬಿಎಲ್ ಸಂತೋಷ್ ಸ್ಫೋಟಕ ಹೇಳಿಕೆ!

Twitter
Facebook
LinkedIn
WhatsApp
ನನ್ನ ಜೊತೆ ಕಾಂಗ್ರೆಸ್ ನ 40-45 ಜನ ಸಂಪರ್ಕದಲ್ಲಿದ್ದಾರೆ ; ಒಪ್ಪಿಗೆ ಕೊಟ್ಟರೆ ಒಂದು ದಿನದ ಕೆಲಸ ಅಷ್ಟೇ - ಬಿಎಲ್ ಸಂತೋಷ್ ಸ್ಫೋಟಕ ಹೇಳಿಕೆ!

ಬೆಂಗಳೂರು: ವಿಧಾನಸಭೆ ಚುನಾವಣೆ ಸೋಲಿನಿಂದ ಕಂಗೆಟ್ಟಿರುವ ಬಿಜೆಪಿಗೆ ಮತ್ತೆ ಚೈತನ್ಯ ನೀಡುವ ಹಾಗೂ ಮುಂಬರುವ ಲೋಕಸಭಾ ಚುನಾವಣೆಗಾಗಿ ಪಕ್ಷವನ್ನು ಪುನರ್ ಸಂಘಟಿಸುವ ನಿಟ್ಟಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ನಗರದಲ್ಲಿ ಗುರುವಾರ ಸಭೆ ನಡೆಸಿದ್ದಾರೆ.

‘ನಮ್ಮಲ್ಲಿಂದ ಯಾರೂ ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ. 10 ಜನ ಹೋದರೂ ಅದಕ್ಕೆ ಸಮನಾದ ಒಬ್ಬರನ್ನು ಕರೆತರಬಹುದು. ನನ್ನ ಜೊತೆಯೇ ಸಂಪರ್ಕದಲ್ಲಿ 40 – 45 ಜನ ಇದ್ದಾರೆ. ದೆಹಲಿಯವರು ಒಪ್ಪಿಗೆ ಕೊಟ್ಟರೆ ನಾಳೆ ಒಂದು ದಿನದ ಕೆಲಸ ಅಷ್ಟೆ. ಆದರೆ ನಮಗೆ ಈಗ ಅಗತ್ಯವಿಲ್ಲ. ನಾವು ಈಗ ಸರ್ಕಾರ ಮಾಡಬೇಕಾಗಿಲ್ಲ’ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಹೇಳಿದರು. ಬೆಂಗಳೂರಿನ ಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷದಿಂದ ಯಾರೂ ಕಾಂಗ್ರೆಸ್​​ಗೆ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಆದರೆ, ಆದರೆ, ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ ಎನ್ನಲಾದ ಶಾಸಕರಾದ ಎಸ್. ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್  ಹಾಗೂ ಮಾಜಿ ಸಚಿವರಾದ ಶಂಕರ್ ಪಾಟೀಲ್ ಮುನೇನಕೊಪ್ಪ, ವಿ. ಸೋಮಣ್ಣ ಹಾಗೂ ರೇಣುಕಾಚಾರ್ಯ ಈ ಸಭೆಯಿಂದ ದೂರ ಉಳಿದಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. 

ಈ ಸಭೆಯಲ್ಲಿ ಮಾತನಾಡಿದ ಬಿ.ಎಲ್. ಸಂತೋಷ್, ಬಿಜೆಪಿಯಿಂದ ಯಾರೂ ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ. 10 ಜನ ಹೋದರೂ ಅದಕ್ಕೆ ಸಮನಾದ ಒಬ್ಬರನ್ನು ಕರೆತರಬಹುದು. ನನ್ನ ಜೊತೆ ಕಾಂಗ್ರೆಸ್ ನ  40 – 45 ಜನ ಸಂಪರ್ಕದಲ್ಲಿದ್ದಾರೆ ವರಿಷ್ಠರು ಒಪ್ಪಿಗೆ ಕೊಟ್ಟರೆ  ಒಂದು ದಿನದ ಕೆಲಸ ಅಷ್ಟೆ. ಆದರೆ ನಮಗೆ ಈಗ ಅಗತ್ಯವಿಲ್ಲ. ನಾವು ಈಗ ಸರ್ಕಾರ ಮಾಡಬೇಕಾಗಿಲ್ಲ ಎಂದರು

ಬಾಂಬೆ ಬಾಯ್ಸ್ ಎಂದು ಕರೆಯಲಾಗುತ್ತಿರುವ, ಅಂದು ನಮ್ಮ ಜೊತೆ ಬಂದವರನ್ನು ನಾವೇ ಹಾಗೆಲ್ಲ ಹೇಳುವುದು ಬೇಡ. ಅವರು ಕಷ್ಟ ಕಾಲಕ್ಕೆ ನಮ್ಮ ಜೊತೆ ಬಂದಿದ್ದಾರೆ. ಅವರು ಹೋಗುತ್ತಾರೆ ಎಂದು ನಾವೇ ಹೇಳುವುದು ಸರಿಯಲ್ಲ. ಹಾಗೆಂದು ಬಿಟ್ಟು ಹೋಗುವವರ ಬಗ್ಗೆ ಚಿಂತೆ ಬೇಡ. ಅಷ್ಟಕ್ಕೂ ಯಾರೂ ಕೂಡಾ ಪಕ್ಷ ಬಿಟ್ಟು ಹೋಗುವುದಿಲ್ಲ ಎಂದು ಸಂತೋಷ್ ಹೇಳಿದರು.

ವಿಧಾನಸಭೆ ವಿರೋಧ ಪಕ್ಷದ ನಾಯಕ ಸ್ಥಾನ ನೇಮಕ ಆಗಿಲ್ಲ ಅನ್ನುವ ವಿಚಾರ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನನಗೆ ಅರಿವಿದೆ. ಅದನ್ನೆ ದೊಡ್ಡದು ಮಾಡಿ ಚರ್ಚಿಸುವ ಅಗತ್ಯವೇನು? ಮನೆಯಲ್ಲಿ ಮದುವೆ ಆಗದ ಮಗಳು ಇದ್ದರೆ ಹೊರಹಾಕಲು ಆಗುತ್ತಾ? ಕೆಲಸ ಸಿಗದ ಮಗ ಇದ್ದರೆ ಮನೆಯಿಂದ ಹೊರಹಾಕುತ್ತೀರಾ ಎಂದು ಪ್ರಶ್ನಿಸಿದ ಅವರು, ತಡವಾಗಿದೆ ಎಂಬುದು ಎಷ್ಟು ಸತ್ಯವೋ ನೇಮಕ ಆಗುವುದೂ ಅಷ್ಟೇ ಸತ್ಯ. ಈಗ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಚರ್ಚೆ ಬಿಟ್ಟು ಸಂಘಟನೆಯಲ್ಲಿ ತೊಡಗಿ ಎಂದು ಅವರು ಪಕ್ಷದ ನಾಯಕರಿಗೆ ಸೂಚನೆ ನೀಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ