ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನನ್ನ ಬೆಂಬಲ ಯಾವಾಗಲೂ ಆರ್ ಸಿಬಿಗೆ - ಇಂದಲ್ಲ ನಾಳೆ ಕಪ್ ನಮ್ದೆ ಎಂದ ಸಿದ್ದರಾಮಯ್ಯ

Twitter
Facebook
LinkedIn
WhatsApp
Untitled 1

ಬೆಂಗಳೂರು: ಕ್ರಿಕೆಟ್‌ ನನ್ನ‌ ಇಷ್ಟದ ಆಟ, ಆರ್‌ಸಿಬಿ (RCB) ನನ್ನ ಹೆಮ್ಮೆಯ ತಂಡ. ಇಂದಲ್ಲ ನಾಳೆ ಕಪ್‌ ನಮ್ಮವರೂ ಗೆಲ್ಲುತ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ  (Siddaramaiah) ವಿಶ್ವಾಸವ್ಯಕ್ತಪಡಿಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Assembly Election) ದಿನಾಂಕ ಘೋಷಣೆಯಾಗಿದ್ದು, ಒಂದೆಡೆ ರಾಜಕೀಯ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಆದ್ರೆ ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯ ಒತ್ತಡದ ನಡುವೆಯೂ ಭಾನುವಾರ ಐಪಿಎಲ್‌ ಮ್ಯಾಚ್‌ ವೀಕ್ಷಿಸಿ ಕಾಲ ಕಳೆದಿದ್ದಾರೆ

6ನೇ ಆವೃತ್ತಿಯ ಐಪಿಎಲ್‌ ಆರಂಭಗೊಂಡಿದ್ದು, ಭಾನುವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (M Chinnaswamy Stadium) ಆರ್‌ಸಿಬಿ ಮತ್ತು ಮುಂಬೈ ಇಂಡಿಯನ್ಸ್‌ (Mumbai Indians) ನಡುವೆ ಕಾದಾಟ ನಡೆದಿತ್ತು. ಕ್ರೀಡಾಂಗಣದ ತುಂಬಾ ಲಕ್ಷಾಂತರ ಅಭಿಮಾನಿಗಳು ನೆರೆದಿದ್ದರು. ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯ ಆಪ್ತರೊಂದಿಗೆ ತೆರಳಿ  ಪಂದ್ಯ ವೀಕ್ಷಣೆ ಮಾಡಿದ್ದಾರೆ.

ಪಂದ್ಯ ವೀಕ್ಷಣೆಯ ನಂತರ ಟ್ವೀಟ್‌ ಮೂಲಕ ಸಂತಸ ಹಂಚಿಕೊಂಡಿರುವ ಅವರು, ಕ್ರಿಕೆಟ್ ನನ್ನ ಇಷ್ಟದ ಆಟ, ಆರ್‌ಸಿಬಿ ನನ್ನ ಹೆಮ್ಮೆಯ ತಂಡ. ನನ್ನಂತಹ ಕೋಟ್ಯಂತರ ಅಭಿಮಾನಿಗಳ ಹಾರೈಕೆ ಆರ್‌ಸಿಬಿ ಹುಡುಗರ ಜೊತೆಗಿದೆ. ಇಂದಲ್ಲ ನಾಳೆ ನಮ್ಮವರೂ ಕಪ್ ಗೆಲ್ಲುತ್ತಾರೆ ಎಂಬ ವಿಶ್ವಾಸ ನನಗಿದೆ. ಓರ್ವ ಕನ್ನಡಿಗನಾಗಿ ನನ್ನ ಬೆಂಬಲ‌ ಯಾವಾಗಲೂ ನಮ್ಮ ಆರ್‌ಸಿಬಿಗೆ ಎಂದು ಬರೆದುಕೊಂಡಿದ್ದಾರೆ

ಭಾನುವಾರ ಮುಂಬೈ ಇಂಡಿಯನ್ಸ್‌ ವಿರುದ್ಧ ನಡೆದ ಪಂದ್ಯದಲ್ಲಿ ಆರ್‌ಸಿಬಿ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 171 ರನ್‌ ಗಳಿಸಿತ್ತು. 172 ರನ್‌ಗಳ ಗುರಿ ಬೆನ್ನತ್ತಿದ್ದ ಆರ್‌ಸಿಬಿ 16.2 ಓವರ್‌ಗಳಲ್ಲೇ 2 ವಿಕೆಟ್‌ ನಷ್ಟಕ್ಕೆ ಗುರಿ ತಲುಪಿ ಭರ್ಜರಿ ಜಯ ಸಾಧಿಸಿತು.‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ