ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನನ್ನ ರಕ್ತದಲ್ಲಿ ಬರೆದುಕೊಡುತ್ತೇನೆ ; ಮುಂದಿನ 15 ದಿನಗಳ ನಂತರ ಕಾಂಗ್ರೆಸ್ ಸರ್ಕಾರ ಬರುತ್ತದೆ - ಡಿಕೆಶಿ

Twitter
Facebook
LinkedIn
WhatsApp
whatsapp account in one phone 5

ಮೈಸೂರು:  ರಾಜ್ಯ ಸರ್ಕಾರ ಮೀಸಲಾತಿ ಹೆಸರಲ್ಲಿ ಲಾಲಿಪಾಪ್ ನೀಡಿದೆ. ಸುಪ್ರೀಂಕೋರ್ಟ್‌ಗೆ ಅಫಿಡೆವಿಟ್ ಸಲ್ಲಿಸಲು ಬಿಜೆಪಿ ಸರ್ಕಾರ ವಿಫಲವಾಗಿದೆ. ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಮುಸ್ಲಿಂ ಮೀಸಲಾತಿ ರದ್ದು ಮಾಡಿತ್ತು. ಮೀಸಲಾತಿ ಹೆಸರಲ್ಲಿ ಸುಳ್ಳು ಹೇಳುತ್ತಿರುವ ಬಿಜೆಪಿಗೆ ಹಿನ್ನೆಡೆ ಆಗಿದೆ. ಇದು ಡಬಲ್‌ ಇಂಜಿನ್ ದೋಖಾ. ಲಿಂಗಾಯತ, ಒಕ್ಕಲಿಗ, ಎಸ್ಸಿ, ಎಸ್ಟಿ ಸಮುದಾಯಕ್ಕೆ ಮೀಸಲಾತಿ ಹೆಸರಲ್ಲಿ ಮೋಸ ಮಾಡಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪ ಮಾಡಿದರು.

ಮೈಸೂರಿನಲ್ಲಿ, ಡಿಕೆ ಶಿವಕುಮಾರ್‌ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿಗೆ 9 ಪ್ರಶ್ನೆಗಳನ್ನು ಕೇಳಿದರು.

ರಣದೀಪ್ ಸಿಂಗ್ ಸುರ್ಜೇವಾಲಾ 9 ಪ್ರಶ್ನೆಗಳು:

  1. ಲಿಂಗಾಯತ, ಒಕ್ಕಲಿಗ, ಎಸ್ಸಿ, ಎಸ್ಟಿ ಸಮುದಾಯಕ್ಕೆ ಮೀಸಲಾತಿ ವಂಚನೆ ಮಾಡಿದ್ದು ಯಾಕೆ ?
  2. ಯಾಕೆ ಸುಪ್ರೀಂಕೋರ್ಟ್‌ನಲ್ಲಿ ಮೀಸಲಾತಿಯನ್ನು ಸಮರ್ಥಿಸಿಕೊಳ್ಳಲಿಲ್ಲ.
  3. ನರೇಂದ್ರ ಮೋದಿ, ಬಸವರಾಜ ಬೊಮ್ಮಾಯಿ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಮೀಸಲಾತಿ ಕೇಸ್‌ಗೆ ಸಂಬಂಧಪಟ್ಟಂತೆ ಯಾಕೆ ಅಫಿಡೆವಿಟ್ ಸಲ್ಲಿಸಲಿಲ್ಲ ?
  4. ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಶಿಫಾರಸ್ಸನ್ನು ಮೋದಿ ಸರ್ಕಾರ ಮಾರ್ಚ್ 14ರಂದು ತಿರಸ್ಕರಿಸಿದ್ದು ಯಾಕೆ ?
  5. ಮೀಸಲಾತಿ ಹೆಚ್ಚಳವನ್ನು ಸಂವಿಧಾನದ 9ನೇ ಪರಿಚ್ಛೇದಕ್ಕೆ ಯಾಕೆ ಸೇರಿಸಲಿಲ್ಲ ?
  6. ಎಸ್ಸಿ, ಎಸ್ಟಿ, ಒಬಿಸಿ, ಲಿಂಗಾಯತ, ಒಕ್ಕಲಿಗ ಮತ್ತು ಇತರೆ ಸಮುದಾಯದ ಮೀಸಲಾತಿ ಬೇಡಿಕೆ ಈಡೇರಿಸಲು ಶೇ.50ರಷ್ಟು ಮೀಸಲಾತಿ ಮಿತಿಯನ್ನು ಯಾಕೆ ತೆಗೆದು ಹಾಕಲಿಲ್ಲ ?
  7. ಅಲ್ಪಸಂಖ್ಯಾತರ ಮೀಸಲಾತಿಯನ್ನು ಅನ್ಯಾಯವಾಗಿ ಟಾರ್ಗೆಟ್ ಮಾಡಿದ್ದು ಯಾಕೆ ?
  8. ಬಸವರಾಜ ಬೊಮ್ಮಾಯಿ ಸರ್ಕಾರ ತಮ್ಮದೇ ಸರ್ಕಾರದ ಹೇಳಿಕೆಯನ್ನು ಸುಪ್ರೀಂಕೋರ್ಟ್‌ನಲ್ಲಿ ಸಮರ್ಥಿಸಿಕೊಳ್ಳಲಿಲ್ಲ ಯಾಕೆ ?
  9. ಮೀಸಲಾತಿ ವಿಚಾರದಲ್ಲಿ ಬಿಜೆಪಿ ಉಂಟು ಮಾಡಿದ ಗೊಂದಲಕ್ಕಾಗಿ ಮೋದಿ ಸಾರ್ವಜನಿಕವಾಗಿ ಕ್ಷಮೆ ಕೇಳುತ್ತಾರಾ ? ಎಂದು ಪ್ರಶ್ನೆಗಳನ್ನು ಕೇಳಿದರು.

ನಾನು ರಕ್ತದಲ್ಲಿ ಬರೆದುಕೊಡುತ್ತೇನೆ: ಡಿಕೆಶಿ

ಮೈಸೂರು: ಬಿಜೆಪಿ 40 ಸ್ಥಾನಕ್ಕೆ ನಿಲ್ಲುತ್ತದೆ. ಕಾಂಗ್ರೆಸ್ 150 ಸ್ಥಾನಕ್ಕೆ ಬರುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಶ್ವಾಸಪಡಿಸಿದರು.

ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾರನ್ನೋ ಸೋಲಿಸುವುದೇ ನಿಮ್ಮ ಗುರಿಯೇ ? ಬಿಜೆಪಿಯಿಂದ ಯಾರಿಗೆ ಅನುಕೂಲ ಆಗಿದೆ ?  ರೈತರು, ವರ್ತಕರು, ಯುವಕರಿಗೆ ಮೋಸ ಮಾಡಿದೆ.  ಆದ್ದರಿಂದ 15 ದಿನದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತದೆ. ಇದನ್ನು ನನ್ನ ರಕ್ತದಲ್ಲಿ ಬರೆದು ಕೊಡುತ್ತೇನೆ ಎಂದರು.

ಎಂಎಲ್‌ಸಿ ದಿನೇಶ್ ಗೂಳಿಗೌಡ, ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ, ವಕ್ತಾರ ಎಂ.ಲಕ್ಷ್ಮಣ ಸೇರಿದಂತೆ ಪ್ರಮುಖರು ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ