ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನಮ್ಮ ಮೆಟ್ರೋ ನಿಲ್ದಾಣಕ್ಕೆ ಪುನೀತ್‌ ರಾಜ್‌ ಕುಮಾರ್‌ ಹೆಸರು.

Twitter
Facebook
LinkedIn
WhatsApp
ನಮ್ಮ ಮೆಟ್ರೋ ನಿಲ್ದಾಣಕ್ಕೆ ಪುನೀತ್‌ ರಾಜ್‌ ಕುಮಾರ್‌ ಹೆಸರು.

ಕನ್ನಡದ ಪವರ್ ಸ್ಟಾರ್, ಕರುನಾಡಿನ ಮನೆಮಗ, ದೊಡ್ಮನೆ ಹುಡುಗ ಪುನೀತ್ ರಾಜ್ ಕುಮಾರ್ ದೈಹಿಕವಾಗಿ ಅಗಲಿ ಹೋಗಿದ್ದರೂ ಮಾನಸಿಕವಾಗಿ ಮನೆಮಗನಂತೆ ಲಕ್ಷಾಂತರ ಅಭಿಮಾನಿಗಳ ಎದೆಯಲ್ಲಿದ್ದಾರೆ. ಪುನೀತ್ (Puneet Raj Kumar)ಅಗಲಿದ ದಿನದಿಂದ ರಾಜ್ಯದಾದ್ಯಂತ ,ದೇಶದ ಹಲವೆಡೆ,ವಿದೇಶದ ಕೆಲವೆಡೆಯೂ ಪುನೀತ್ ಹೆಸರನ್ನು ವಿಭಿನ್ನವಾಗಿ ಸ್ಮರಿಸಿಕೊಳ್ಳುವ ಕೆಲಸ ಅವ್ಯಾಹತವಾಗಿ ನಡೆದಿದೆ. ಈ ಮಧ್ಯೆ ಪುನೀತ್ ಹೆಸರನ್ನು ಅಜರಾಮರವಾಗಿಸುವ ನಿಟ್ಟಿನಲ್ಲಿ ಮೆಟ್ರೋ ನಿಲ್ದಾಣಕ್ಕೆ (Metro Station) ಪುನೀತ್ ಹೆಸರನ್ನು (Puneeth metro) ಇಡಬೇಕೆಂಬ ಒತ್ತಡ ವ್ಯಕ್ತವಾಗಿದೆ.

ಪುನೀತ್ ಅಗಲಿದ್ರೂ ಅವರ ನೆನಪು,ಅವರ ಸಾಮಾಜಿಕ ಕಾರ್ಯಗಳಿಂದ ಪ್ರತಿನಿತ್ಯ ನೂರಾರು ಜನರು ಅವರನ್ನು ನೆನಪಿಸಿಕೊಳ್ಳುತ್ತಲೇ ಇರುತ್ತಾರೆ. ಅಷ್ಟೇ ಅಲ್ಲ ಇನ್ನಷ್ಟು ಕಾಲ ಪುನೀತ್ ನೆನಪನ್ನು ಚಿರಸ್ಥಾಯಿಯಾಗಿಸಲು ಅಭಿಮಾನಿಗಳು ಹೊಸ ಬೇಡಿಕೆ ಇಟ್ಟಿದ್ದಾರೆ. ಪುಲಿಕೇಶಿ ನಗರದಲ್ಲಿ‌ ನಿರ್ಮಾಣ ಹಂತದಲ್ಲಿರೋ ಮೆಟ್ರೋ ನಿಲ್ದಾಣಕ್ಕೆ ಪುನೀತ್ ರಾಜ್ ಕುಮಾರ್ ಹೆಸರು ಇಡಬೇಕೆಂಬ ಒತ್ತಡ ಎಲ್ಲೆಡೆಯಿಂದ ಕೇಳಿಬಂದಿದೆ. ಅದರಲ್ಲೂ ಕರ್ನಾಟಕ ಬಹುಜನ ಫೆಡರೇಷನ್ ಎಂಬ ಸಂಘಟನೆ ಈ ಕುರಿತು ಸ್ಥಳೀಯ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಗೆ ಮನವಿ ಸಲ್ಲಿಸಿದೆ.

ಪುಲಿಕೇಶಿ ನಗರದಲ್ಲಿ ನಿರ್ಮಾಣವಾಗುತ್ತಿರುವ ಮೆಟ್ರೋ ನಿಲ್ದಾಣಕ್ಕೆ ಪುನೀತ್ ರಾಜ್ ಕುಮಾರ್ ಹೆಸರಿಡಬೇಕೆಂದು ಒತ್ತಾಯಿಸಿರುವ ಸಂಘಟನೆ ಮುಂದಿನ ದಿನಗಳಲ್ಲಿ ಈ ಕುರಿತು ಮಾಜಿ ಕೇಂದ್ರ ಸಚಿವ ಡಿ.ಸಿ.ಸದಾನಂದ ಗೌಡ ಹಾಗೂ ಪ್ರಧಾನಿ ನರೇಂದ್ರ್ ಮೋದಿ ಹಾಗೂ ಬಿಎಂಆರ್ ಸಿಎಲ್ ಗೂ ಮನವಿ ಮಾಡುವುದಾಗಿ ಹೇಳಿದೆ. ಈಗಾಗಲೇ ನಗರದ ಹಲವು ರಸ್ತೆಗಳು, ಮೇಲುಸೇತುವೆ ಹಾಗೂ ಉದ್ಯಾನವನಗಳಿಗೆ ಪುನೀತ್ ರಾಜ್ ಕುಮಾರ್ ಹೆಸರನ್ನು ಇಡಲಾಗಿದೆ. ಅಲ್ಲದೇ ಹಲವು ಸಂಘಟನೆಗಳು ಪುನೀತ್ ಪುತ್ಥಳಿ ನಿರ್ಮಾಣಕ್ಕೆ ಮುಂದಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೌಕರರ ಸಂಘ ಪಾಲಿಕೆ ಆವರಣದಲ್ಲಿ ಪುನೀತ್ ಪುತ್ಥಳಿ ನಿರ್ಮಾಣಕ್ಕೆ ಮುಂದಾಗಿದ್ದು ಈಗಾಗಲೇ ಪುತ್ಥಳಿಗೆ ಅಂತಿಮ ಸ್ಪರ್ಶ ನೀಡಲಾಗುತ್ತಿದೆ. ಈ‌ಮಧ್ಯೆ ನಗರದ ಜನರ ಪ್ರಮುಖ ಸಾರಿಗೆಯಾಗಿ ಬಳಕೆಯಾಗುತ್ತಿರುವ ಮೆಟ್ರೋದಲ್ಲೂ ಪುನೀತ್ ಹೆಸರು ಸ್ಮರಣೆಯಾಗಬೇಕೆಂಬ ಕಾರಣಕ್ಕೆ ಅಭಿಮಾನಿಗಳು ಮೆಟ್ರೋ ನಿಲ್ದಾಣಕ್ಕೆ ಪುನೀತ್ ಹೆಸರು ಇಡಬೇಕೆಂಬ ಮನವಿ ಸಲ್ಲಿಸಿದ್ದಾರೆ. ಈ ಹಿಂದೆ ಹೊಸಳ್ಳಿ ರೇಲ್ವೆ ನಿಲ್ದಾಣಕ್ಕೆ ಆದಿಚುಂಚನಗಿರಿಯ ಶ್ರೀ ಬಾಲ ಗಾಂಧಾರ ನಾಥ ಶ್ರೀಗಳ ಹೆಸರು ಇಡಲಾಗಿತ್ತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು