ಬುಧವಾರ, ಏಪ್ರಿಲ್ 24, 2024
HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!-ಶುಕ್ರವಾರ ಮತದಾನದಂದು ಮತಗಟ್ಟೆಯಲ್ಲಿ ಮೊಬೈಲ್ ಫೋನ್ ಕೊಂಡೊಯ್ಯಲು ನಿಷೇಧ..!-164.53 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!-ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!-ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ; ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ-ಬರ್ತ್ ಡೇ ಕೇಕ್ ತಿಂದು ಬಾಲಕಿ ಸಾವು ಪ್ರಕರಣ: ಅಸಲಿ ಕಾರಣ ಬಯಲು.!-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ಚುನಾವಣೆ ಮುಗಿಯುತ್ತಿದ್ದಂತೆ ಮತ್ತೆ ವಾಪಸ್ ಬಿಜೆಪಿಗೆ ಬರುತ್ತೇನೆ; ಕೆಎಸ್ ಈಶ್ವರಪ್ಪ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪೊಲೀಸ್ ಅಧಿಕಾರಿಗೆ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ

Twitter
Facebook
LinkedIn
WhatsApp
Its difficult to look away from MalaikaArora in Hanas green sheer dress in Aap Jesa Koi song from film Action Hero 5 2

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL 2023) ಭಾನುವಾರ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ಫೈನಲ್ ಪಂದ್ಯ ನಡೆಯಬೇಕಿತ್ತು. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಈ ಹೈವೋಲ್ಟೇಜ್ ಪಂದ್ಯವನ್ನು ಆಯೋಜಿಸಲಾಗಿತ್ತು. ಆದರೆ, ಎಡೆಬಿಡದೆ ಸುರಿದ ಮಳೆಗೆ ಪಂದ್ಯವನ್ನು ಮೀಸಲು ದಿನಕ್ಕೆ ಮುಂದೂಡಲಾಗಿದೆ. ಇಂದು ಸಿಎಸ್​ಕೆ- ಜಿಟಿ (CSK vs GT) ತಂಡಗಳು ಪ್ರಶಸ್ತಿಗಾಗಿ ಹೋರಾಟ ನಡೆಸಲಿದೆ. ಭಾನುವಾರ ಈ ರೋಚಕ ಕಾದಾಟ ವೀಕ್ಷಿಸಲು 1,32,000 ಪ್ರೇಕ್ಷಕರು ಬಂದಿದ್ದರು. ಆದರೆ, ಎಲ್ಲರೂ ನಿರಾಸೆ ಅನುಭವಿಸಿದರು. ಇದರ ನಡುವೆ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Stadium) ವಿಚಿತ್ರ ಘಟನೆಯೊಂದು ನಡೆದಿದೆ. ಮಹಿಳೆಯೊಬ್ಬರು ಪೊಲೀಸ್ ಅಧಿಕಾರಿಗೆ ಥಳಿಸುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಅಭಿಮಾನಿಗಳು ಐಪಿಎಲ್ 2023 ರ ಫೈನಲ್‌ ಆರಂಭ ಆಗಬಹುದು ಎಂದು ಕಾಯುತ್ತಿರುವಾಗ, ಮಹಿಳೆಯೊಬ್ಬರು ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ಮಾಡಿದ್ದಾರೆ. ಯಾವ ಕಾರಣಕ್ಕಾಗಿ ಈ ಘಟನೆ ನಡೆದಿದೆ ಎಂಬುದು ತಿಳಿದುಬಂದಿಲ್ಲ. ಆದರೆ, ಪುರುಷ ಪೊಲೀಸ್ ಅಧಿಕಾರಿಯನ್ನು ಮಹಿಳಾ ಅಭಿಮಾನಿಯೊಬ್ಬರು ಅವಮಾನಿಸಿದ್ದಾರೆ. ಮಹಿಳೆ ಎಲ್ಲಾ ಪ್ರೇಕ್ಷಕರ ಎದುರೇ ಹಲವಾರು ಬಾರಿ ಅಧಿಕಾರಿಗೆ ಥಳಿಸಿ ಕೆಳಕ್ಕೆ ತಳ್ಳಿ ಬೀಳಿಸಿದ್ದಾರೆ. ಆದರೆ ಅಧಿಕಾರಿ ಅಲ್ಲಿಂದ ಹೆಚ್ಚೇನೂ ಮಾತನಾಡದೇ ತೆರಳಿದ್ದು ಜನರೂ ಸುಮ್ಮನೇ ನೋಡುತ್ತಾ ನಿಂತಿದ್ದರು.

ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಅನೇಕರು ಕಮೆಂಟ್ ಮಾಡಿದ್ದಾರೆ. ಪೊಲೀಸ್ ಅಧಿಕಾರಿ ಮದ್ಯ ಸೇವನೆ ಮಾಡಿರಬಹುದು. ಈ ಕಾರಣಕ್ಕೆ ಮಹಿಳೆ ಥಳಿಸಿದ್ದಾರೆ ಎಂದು ಕೆಲವು ಹೇಳಿದ್ದಾರೆ. ಅಲ್ಲದೇ ಘಟನೆ ಸಂಬಂಧ ಹೆಚ್ಚಿನ ತನಿಖೆಯಾಗಬೇಕೆಂದು ಅನೇಕರು ಒತ್ತಾಯಿಸುತ್ತಿದ್ದಾರೆ.

ಇಂದು ನಡೆಯಲಿದೆ ಫೈನಲ್ ಪಂದ್ಯ:

ಭಾನುವಾರ ನಡೆಯಬೇಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಣ ಐಪಿಎಲ್ 2023 ಫೈನಲ್ ಪಂದ್ಯ ಮಳೆಗೆ ಕೊಚ್ಚಿ ಹೋಯಿತು. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸುರಿದ ರಣಭೀಕರ ಮಳೆಗೆ ಟಾಸ್ ಪ್ರಕ್ರಿಯೆ ಕೂಡ ನಡೆಸಲಾಗಿಲ್ಲ. ಹೀಗಾಗಿ ಮೀಸಲು ದಿನವಾದ ಇಂದು ಅಂತಿಮ ಕಾದಾಟ ನಡೆಯಲಿದೆ. ವಿಶೇಷ ಎಂದರೆ 16 ವರ್ಷಗಳ ಐಪಿಎಲ್ ಇತಿಹಾಸದಲ್ಲಿ ಫೈನಲ್ ಪಂದ್ಯ ಮೀಸಲು ದಿನದಂದು ನಡೆಯುತ್ತಿರುವುದು ಇದೇ ಪ್ರಥಮ ಬಾರಿ.

ಇದರ ನಡುವೆ ಬೇಸರದ ಸಂಗತಿ ಎಂದರೆ ಮೀಸಲು ದಿನವಾದ ಇಂದುಕೂಡ ಮಳೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸೋಮವಾರ ಸಂಜೆ ವೇಳೆಗೆ ಮಳೆ ಸುರಿಯಲಿದೆಯಂತೆ. ದಿನಪೂರ್ತಿ ಮೋಡ ಕವಿದ ವಾತಾವರಣ ಇರುತ್ತದೆ ಎಂದು ವರದಿ ಹೇಳಿದೆ. ದೇಶದ ಪ್ರಸ್ತುತ ಹವಾಮಾನ ವರದಿ ಗಮನಿಸಿದರೆ, ಯಾವುದೇ ಸಮಯದಲ್ಲಿ ಮಳೆಯಾಗಬಹುದು. ಒಂದು ವೇಳೆ ಇಂದಿನ ಪಂದ್ಯ ಕೂಡ ಮಳೆಯಿಂದ ಕೊಚ್ಚಿ ಹೋದರೆ ಲೀಗ್ ಹಂತದ ಪಾಯಿಂಟ್ಸ್ ಟೇಬಲ್​ ಮೂಲಕ ಚಾಂಪಿಯನ್ ತಂಡವನ್ನು ನಿರ್ಧರಿಸಲಾಗುತ್ತದೆ. ಪಾಯಿಂಟ್ಸ್​ ಟೇಬಲ್​ನಲ್ಲಿ ಅಗ್ರಸ್ಥಾನ ಅಲಂಕರಿಸಿರುವ ಗುಜರಾತ್ ತಂಡ ಚಾಂಪಿಯನ್ ಪಟ್ಟಕ್ಕೇರಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ