ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನವಜಾತ ಶಿಶುವನ್ನು4.5 ಲಕ್ಷಕ್ಕೆ ಮಾರಾಟ ಮಾಡಿದ ತಾಯಿ -11ಮಂದಿ ಬಂಧನ

Twitter
Facebook
LinkedIn
WhatsApp
Top 10 Highest Paying Jobs in India 03

ಜಾರ್ಖಂಡ್ , ಮಾ 24 : ಹೆರಿಗೆಯಾದ ತಕ್ಷಣ ಗಂಡು ಶಿಶುವನ್ನು ತಾಯಿಯೇ 4.5 ಲಕ್ಷಕ್ಕೆ ಮಾರಾಟ ಮಾಡಿರುವ ಘಟನೆ ಜಾರ್ಖಂಡ್‍ನ ಛತ್ರಾ ಜಿಲ್ಲೆಯಲ್ಲಿ ನಡೆದಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ನವಜಾತ ಶಿಶುವಿನ ತಾಯಿ ಆಶಾದೇವಿ ಸೇರಿದಂತೆ 11 ಜನರನ್ನು ಬಂಧಿಸಲಾಗಿದೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ ಅವಿನಾಶ್ ಕುಮಾರ್ ತಿಳಿಸಿದ್ದಾರೆ.

ಛತ್ರ ಜಿಲ್ಲೆಯ ಮಕ್ಕಳ ಕಲ್ಯಾಣ ಇಲಾಖೆಯ ಉಪ ಆಯುಕ್ತ ಅಬು ಇಮ್ರಾನ್ ಮಾಹಿತಿ ನೀಡಿದ ಕೂಡಲೇ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು 24 ಗಂಟೆಗಳಲ್ಲಿ ಬೊಕಾರೊ ಜಿಲ್ಲೆಯಿಂದ ನವಜಾತ ಶಿಶುವನ್ನು ರಕ್ಷಿಸಿದ್ದಾರೆ ಎಂದು ಅವಿನಾಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ಹಜಾರಿಬಾಗ್ ಜಿಲ್ಲೆಯ ಬಡ್ಕಗಾಂವ್ ಗ್ರಾಮದ ದಂಪತಿಗಳು ನವಜಾತ ಶಿಶುವನ್ನು 4.5 ಲಕ್ಷ ರೂ.ಗೆ ಮಾರಾಟ ಮಾಡಲು ಚಾತ್ರಾ ಮತ್ತು ಬೊಕಾರೊದ ಇಬ್ಬರು ದಲ್ಲಾಳಿಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು ಎನ್ನಲಾಗಿದೆ.

ವಿಪರ್ಯಾಸವೆಂದರೆ ಮಗುವಿನ ತಾಯಿಗೆ 1 ಲಕ್ಷ ನೀಡಿದರೆ, ಉಳಿದ 3.5 ಲಕ್ಷವನ್ನು ದಲ್ಲಾಳಿಗಳಿಗೆ ಹಂಚಿಕೊಂಡಿದ್ದಾರೆ. ಸದರ್ ಆಸ್ಪತ್ರೆಯ ಉಪ ಅೀಧಿಕ್ಷಕ ವೈದ್ಯ ಮನೀಶ್ ಲಾಲ್ ಹೇಳಿಕೆ ಮೇರೆಗೆ ಛತ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ