ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನಾಟಿ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿರುವ ಸಿಎಂ ಬಸವರಾಜ್‌ ಬೊಮ್ಮಾಯಿ.

Twitter
Facebook
LinkedIn
WhatsApp
ನಾಟಿ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿರುವ ಸಿಎಂ ಬಸವರಾಜ್‌ ಬೊಮ್ಮಾಯಿ.

ಬೆಳಗಾವಿ : ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಬದಲಾವಣೆಯ ಮಾತು ಕೇಳಿಬಂದಿತ್ತು. ಇದಕ್ಕೆ ಕಾರಣವಾಗಿರೋದು ಬೊಮ್ಮಾಯಿ ಅವರನ್ನು ಕಾಡುತ್ತಿರುವ ಮಂಡಿ ನೋವು. ಸಿಎಂ ಮಂಡಿ ನೋವಿನ  ಚಿಕಿತ್ಸೆಗೆ ವಿದೇಶಕ್ಕೆ ಹಾರುತ್ತಾರೆ ಅನ್ನೋ ಸುದ್ದಿಯೂ ಹರಿದಾಡಿತ್ತು. ಆದ್ರೀಗ ಬಸವರಾಜ್‌ ಬೊಮ್ಮಾಯಿ ಅವರು ನಾಟಿ ವೈದ್ಯರಿಂದ ಮಂಡಿ ನೋವಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿ ಭಾಗಿಯಾಗಿಯಾಗಿರು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಬೆಳಗಾವಿಯಲ್ಲಿ ಪ್ರಖ್ಯಾತ ರಾಜ ವೈದ್ಯರಿಂದ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಮೈಸೂರು ಮೂಲದ ನಾಟಿ ವೈದ್ಯರಾಗಿರು ಲೋಕೇಶ್‌ ಟೆಕಲ್‌ ಎಂಬವರು ಮುಖ್ಯಮಂತ್ರಿಗಳಿಗೆ ಚಿಕಿತ್ಸೆಯನ್ನು ನೀಡುತ್ತಿದ್ದಾರೆ. ಈ ಹಿಂದೆ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಚರ್ಮ ರೋಗಕ್ಕೆ ಲೋಕೇಶ್‌ ಟೆಕಲ್‌ ಅವರೇ ಚಿಕಿತ್ಸೆಯನ್ನು ನೀಡಿದ್ದರು. ಹೀಗಾಗಿ ಸಿಎಂ ಬಸವರಾಜ್‌ ಬೊಮ್ಮಾಯಿ ಅವರನ್ನು ಸಂಪರ್ಕಿಸಿ ಚಿಕಿತ್ಸೆಯನ್ನು ಆರಂಭಿಸಿದ್ದಾರೆ.

ಕಳೆದ ಹಲವು ಸಮಯಗಳಿಂದಲೂ ಬಸವರಾಜ್‌ ಬೊಮ್ಮಾಯಿ ಅವರು ಮಂಡಿನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದೇ ಕಾರಣದಿಂದಾಗಿ ಸದ್ಯದಲ್ಲಿಯೇ ನೋವಿನ ಚಿಕಿತ್ಸೆಗಾಗಿ ಅವರು ಅಮೇರಿಕಾಕ್ಕೆ ತೆರಳಲಿದ್ದಾರೆ. ಈ ವೇಳೆಯಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದೆ ಅನ್ನೋ ಸುದ್ದಿ ಎಲ್ಲೆಡೆ ಹರಿದಾಡಿತ್ತು. ಆದ್ರೀಗ ಸಿಎಂ ರಾಜ್ಯದಲ್ಲಿಯೇ ಚಿಕಿತ್ಸೆ ಪಡೆಯುವ ಮೂಲಕ ಮಂಡಿ ನೋವಿನಿಂದ ಗುಣಮುಖರಾಗುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ.
ಮೈಸೂರು ರಾಜಮನೆತನದ ನಾಟಿ ವೈದ್ಯರಾಗಿರುವ ಲೋಕೇಶ್‌ ಟೆಕಲ್‌ ಅವರು ಈಗಾಗಲೇ ಬಹು ಪ್ರಖ್ಯಾತಿಯನ್ನು ಪಡೆದುಕೊಂಡಿದ್ದಾರೆ. ವೈದ್ಯಲೋಕಕ್ಕೆ ಸವಾಲಾಗಿದ್ದ ಬ್ಲ್ಯಾಕ್‌ ಫಂಗಸ್‌ಗೆ ಒಳಗಾಗಿದ್ದ ಆನಂದ ಕುಲಾಲಿ ಎಂಬ ವ್ಯಕ್ತಿಗೆ ಚಿಕಿತ್ಸೆಯನ್ನ ನೀಡಿ ಗುಣಮುಖರಾಗಿಸಿದ ಕೀರ್ತಿ ಲೋಕೇಶ್‌ ಅವರಿಗೆ ಸಲ್ಲುತ್ತದೆ. ಅಷ್ಟೇ ಅಲ್ಲದೇ ಕ್ಯಾನ್ಸರ್, ಬ್ಲಾಕ್ ಫಂಗಸ, ಕೊರೋನಾ ಸೇರಿದಂತೆ ವಿವಿಧ ಖಾಯಿಲೆಗಳಿಗೆ ವನಸ್ಪತಿ ಔಷಧ ನೀಡಿ ಯಶಸ್ವಿಯಾಗಿದ್ದಾರೆ.
ಸದ್ಯ ಮುಖ್ಯಮಂತ್ರಿಗಳು ಮಂಡಿ ನೋವಿನಿಂದ ಗುಣಮುಖರಾಗುತ್ತಿದ್ದು, ಅವರಿಗೆ ದಿನಕ್ಕೆ ಎರಡು ಬಾರಿ ಔಷಧದ ಜೊತೆಗೆ ಮೇಕೆ ಹಾಲು ಕುಡಿಯುವಂತೆ ಬೊಮ್ಮಯಿಯವರಿಗೆ ನಾಟಿ ವೈದ್ಯ ಸಲಹೆ ನೀಡಿದ್ದಾರೆ. ಮೇಕೆ ಹಾಲಿನಲ್ಲಿ ವಿಟಮಿನ್ ಡಿ ಕೂಡಾ ಇರುವುದರಿಂದ ಅದು ಮೂಳೆಗಳು ಕ್ಯಾಲ್ಶಿಯಂ ಸೆಳೆದುಕೊಳ್ಳಲು ಸಹಾಯ ಮಾಡುತ್ತದೆ. ಆರ್ತ್ರೈಟಿಸ್ ಹೊಂದಿರುವ ರೋಗಿಗಳಲ್ಲಿ ಆಸ್ಟಿಯೋಪೋರೋಸಿಸ್ ತಡೆಯುವಲ್ಲಿ ಮೇಕೆ ಹಾಲು ಸಶಕ್ತವಾಗಿದೆ ಎನ್ನಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

Adhvithi Shetty ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!

ರೂಪೇಶ್ ಶೆಟ್ಟಿಯ ‘ಜೈ’ ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!

ರೂಪೇಶ್ ಶೆಟ್ಟಿಯ ‘ಜೈ’ ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ! Twitter Facebook LinkedIn WhatsApp ಮಂಗಳೂರು: ರಾಕ್ ಸ್ಟಾರ್ (Rock Star)  ರೂಪೇಶ್ ಶೆಟ್ಟಿ (Rupesh Shetty) ಅಭಿನಯ ಮತ್ತು ನಿರ್ದೇಶನದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು