ಶನಿವಾರ, ಏಪ್ರಿಲ್ 20, 2024
ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

`ನಾಟು ನಾಟು’ ಹಾಡಿಗೆ ಸ್ಟೆಪ್ ಹಾಕಿದ ಕಿಂಗ್ ಕೊಹ್ಲಿ – ವಿರಾಟ್ ಡಾನ್ಸ್‌ಗೆ ಅಭಿಮಾನಿಗಳು ಫಿದಾ

Twitter
Facebook
LinkedIn
WhatsApp
1 11

ಮುಂಬೈ: ಟೀಂ ಇಂಡಿಯಾ  (Team India) ಕ್ರಿಕೆಟಿಗ ವಿರಾಟ್ ಕೊಹ್ಲಿ (Virat Kohli) ಒಂದಿಲ್ಲೊಂದು ವಿಷಯಗಳಿಗೆ ಸದಾ ಸುದ್ದಿಯಲ್ಲಿರುತ್ತಾರೆ. ಆಗಾಗ್ಗೆ ಮೈದಾನದಲ್ಲಿ ನೃತ್ಯದ ಝಲಕ್ ನೀಡುತ್ತಾ ತಮ್ಮ ಅಭಿಮಾನಿಗಳನ್ನ ರಂಜಿಸುತ್ತಿರುತ್ತಾರೆ. ಹಾಗೆಯೇ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ (Australia) ವಿರುದ್ಧ ನಡೆಯುತ್ತಿರುವ ಏಕದಿನ ಕ್ರಿಕೆಟ್ ಪಂದ್ಯದ ವೇಳೆ ಆರ್‌ಆರ್‌ಆರ್ (RRR) ಚಿತ್ರದ ನಾಟು ನಾಟು ಹಾಡಿಗೆ ಸ್ಟೆಪ್ ಹಾಕುವ ಮೂಲಕ ಅಭಿಮಾನಿಗಳನ್ನ ರಂಜಿಸಿದ್ದಾರೆ.

ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಆಸ್ಟ್ರೇಲಿಯಾ ತನ್ನ ಬ್ಯಾಟಿಂಗ್ ಆರಂಭಿಸುವುದಕ್ಕೂ ಮುನ್ನ ಫೀಲ್ಡಿಂಗ್ ಸೆಟ್ ಮಾಡುತ್ತಿದ್ದ ವೇಳೆ ನಾಟು ನಾಟು ಹಾಡಿಗೆ ಕೊಹ್ಲಿ ಸ್ಟೆಪ್ ಹಾಕಿದ್ದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದರ ವೀಡಿಯೋ ತುಣುಕು ಜಾಲತಾಣದಲ್ಲಿ (Social Media) ಭಾರೀ ಸದ್ದು ಮಾಡುತ್ತಿದೆ. ಕೊಹ್ಲಿ ಡಾನ್ಸ್ (Kohli Dance) ಅಭಿಮಾನಿಗಳು ಫಿದಾ ಆಗಿದ್ದಾರೆ. 

ಈಗಾಗಲೇ 2-1 ಅಂತರದಲ್ಲಿ ಟೆಸ್ಟ್ ಸರಣಿ ಗೆದ್ದುಕೊಂಡಿರುವ ಟೀಂ ಇಂಡಿಯಾ, ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಆರಂಭಿಸಿದೆ. ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾ ನಾಯಕತ್ವ ವಹಿಸಿದ್ದು, ಶುಭಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆ.ಎಲ್ ರಾಹುಲ್, ಜಡೇಜಾ, ಶಾರ್ದೂಲ್ ಠಾಕೂರ್, ಕುಲ್‌ದೀಪ್ ಯಾದವ್, ಮೊಹಮ್ಮದ್ ಸಿರಾಜ್ ಹಾಗೂ ಮೊಹಮ್ಮದ್ ಶಮಿ ತಂಡದಲ್ಲಿದ್ದಾರೆ. 

`ನಾಟು ನಾಟು’ ಹಾಡು ಆಸ್ಕರ್ (Oscar) ಪ್ರಶಸ್ತಿ ಪಡೆಯುವ ಮೂಲಕ ಜಗತ್ತಿನಾದ್ಯಂತ ಸುದ್ದಿ ಮಾಡಿದೆ. ಸೋಷಿಯಲ್ ಮೀಡಿಯಾದಲ್ಲೂ ಸಖತ್ ಟ್ರೆಂಡ್ ಸೃಷ್ಟಿಸಿದೆ. ರಾಜಮೌಳಿ (Rajamouli) ನಿರ್ದೇಶನದಲ್ಲಿ ಮೂಡಿ ಬಂದಿರುವ ಆರ್‌ಆರ್‌ಆರ್ ಸಿನಿಮಾದ ಗೀತೆ ಇದಾಗಿದ್ದು, ಎಂ.ಎಂ ಕೀರವಾಣಿ ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದಿದೆ. ಜ್ಯೂನಿಯರ್ ಎನ್.ಟಿ.ಆರ್ ಹಾಗೂ ರಾಮ್ ಚರಣ್ ಈ ಹಾಡಿಗೆ ಸಖತ್ ಸ್ಟೆಪ್ ಹಾಕಿದ್ದು, ಆಸ್ಕರ್ ಪ್ರಶಸ್ತಿ ಪಡೆದ ನಂತರವೂ 50 ಲಕ್ಷಕ್ಕೂ ಅಧಿಕ ಮಂದಿ ವೀಡಿಯೋ ಸಾಂಗ್ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ