ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿರುವ ಎನ್ಡಿಎ ಅಭ್ಯರ್ಥಿ ಎಚ್ಡಿ ಕುಮಾರಸ್ವಾಮಿ ಅವರಿಗೆ ಸಂಸದೆ ಸುಮಲತಾ ಅಂಬರೀಶ್ ಅವರು ಶನಿವಾರ ಬೆಂಬಲ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷಕ್ಕಾಗಿ ತ್ಯಾಗ ಮಾಡಿದ್ದೇನೆ. ವಾರದ ಹಿಂದೆಯಷ್ಟೇ ಬಿಜೆಪಿಗೆ ಸೇರ್ಪಡೆಗೊಂಡಿದ್ದೇನೆ. ಪಕ್ಷ ಸೂಚಿದರೆ, ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆ. ಕುಮಾರಸ್ವಾಮಿಯವರಿಗೆ ಸಂಪೂರ್ಣ ಸಹಕಾರವಿದೆ ಎಂದು ಹೇಳಿದರು