ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾಪತ್ತೆಯಾಗಿದ್ದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ!!

Twitter
Facebook
LinkedIn
WhatsApp
WhatsApp Image 2023 07 08 at 9.11.16 AM

ಚಿಕ್ಕೋಡಿ (ಬೆಳಗಾವಿ): ಹೀರೆಕುಡಿ (Hirekudi) ಗ್ರಾಮದಿಂದ ನಾಪತ್ತೆಯಾಗಿದ್ದ ಜೈನಮುನಿಯನ್ನು (Jain Muni)  ಬರ್ಬರವಾಗಿ ಹತ್ಯೆಗೈದಿದ್ದು, ಭಕ್ತರ ದೂರಿನ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನೆಲೆ ತನಿಖೆ ಕೈಗೊಂಡ ಪೊಲೀಸರು ಅನುಮಾನದ ಮೇಲೆ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದಾರೆ.

ಜಿಲ್ಲೆಯ ಹೀರೆಕುಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನ ಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಬರ್ಬರವಾಗಿ ಹತ್ಯೆಯಾಗಿದ್ದಾರೆ. ಕಳೆದ 15 ವರ್ಷಗಳಿಂದ ನಂದಿ ಪರ್ವತ ಆಶ್ರಮದಲ್ಲಿ ವಾಸವಿದ್ದ ಇವರು ಜುಲೈ 6ರಿಂದ ಆಶ್ರಮದಿಂದ ನಾಪತ್ತೆಯಾಗಿದ್ದರು. ಈ ಕುರಿತು ಜುಲೈ 6ರಂದು ಭಕ್ತರು ಆಶ್ರಮದ ಸುತ್ತಮುತ್ತ ಶೋಧ ನಡೆಸಿದ್ದರು

ಎಲ್ಲಿಯೂ ಪತ್ತೆಯಾಗದ ಹಿನ್ನೆಲೆ ಶುಕ್ರವಾರ ಚಿಕ್ಕೋಡಿ (Chikkodi) ಪೊಲೀಸ್ ಠಾಣೆಗೆ ಜೈನಮುನಿ ನಾಪತ್ತೆಯಾದ ಬಗ್ಗೆ ದೂರು ನೀಡಲಾಗಿತ್ತು. ಆಚಾರ್ಯ ಕಾಮಕುಮಾರನಂದಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಭೀಮಪ್ಪ ಉಗಾರೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದರು. ತನಿಖೆ ಸಂದರ್ಭ ಅನುಮಾನದ ಮೇಲೆ ಇಬ್ಬರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ವೇಳೆ ಜೈನಮುನಿ ಹತ್ಯೆಯ ರಹಸ್ಯ ಬಯಲಾಗಿದೆ.ರೋಪಿಗಳು ಹತ್ಯೆ ಮಾಡಿರುವ ಬಗ್ಗೆ ಪೊಲೀಸರ ಬಳಿ ಬಾಯ್ಬಿಟ್ಟಿದ್ದು, ಕೊಲೆ ಮಾಡಿದ ಬಳಿಕ ಶವವನ್ನು ಎಲ್ಲಿ ಬಿಸಾಕಿದ್ದಾರೆ ಎನ್ನುವ ಬಗ್ಗೆ ಸರಿಯಾದ ಮಾಹಿತಿ ನೀಡದೆ ಪೊಲೀಸರನ್ನು ಸತಾಯಿಸಿದ್ದಾರೆ. ಒಂದು ಬಾರಿ ಕೊಲೆ ಮಾಡಿ ಮೃತದೇಹವನ್ನು ಕತ್ತರಿಸಿ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಖಟಕಬಾವಿ ಗ್ರಾಮದ ಗದ್ದೆಯ ತೆರೆದ ಕೊಳವೆ ಬಾವಿಯಲ್ಲಿ ಎಸೆದಿದ್ದೇವೆ ಎಂದ ಆರೋಪಿಗಳು ಮತ್ತೊಂದು ಬಾರಿ ಮೃತದೇಹವನ್ನು ಬಟ್ಟೆಯಲ್ಲಿ ಸುತ್ತಿ ನದಿಗೆ ಎಸೆದಿದ್ದೇವೆ ಎಂದಿದ್ದಾರೆ.

ಪಷ್ಟ ಮಾಹಿತಿ ದೊರೆಯದ ಹಿನ್ನೆಲೆ ನಂದಿ ಮಹಾರಾಜರ ಮೃತದೇಹಕ್ಕಾಗಿ ಪೊಲೀಸರು ರಾತ್ರಿಯಿಡೀ ಶೋಧ ನಡೆಸಿದ್ದಾರೆ. ಖಟಕಬಾವಿ ಗ್ರಾಮ ಸೇರಿದಂತೆ ಹಲವೆಡೆ ಶೋಧ ನಡೆಸಿದ ಪೊಲೀಸರು ಮೃತದೇಹ ಸಿಗದ ಕಾರಣ ಶನಿವಾರ ಬೆಳಗ್ಗೆ 6:30ರಿಂದ ಶೋಧ ಕಾರ್ಯ ನಡೆಸಲು ಮುಂದಾಗಿದ್ದಾರೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ