ನಾಯಿಯ ಮೇಲೆ ಅತ್ಯಾಚಾರವೆಸಗಿದ ಕಾಮುಕ – ಸಿಸಿಟಿವಿಯಲ್ಲಿ ಸೆರೆ
Twitter
Facebook
LinkedIn
WhatsApp
Facebook
Twitter
LinkedIn
WhatsApp

ಪಾಟ್ನಾ: ಬೀದಿ ನಾಯಿಯ (Dog) ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ ಘಟನೆ ಬಿಹಾರದ (Bihar) ಪಾಟ್ನಾದಲ್ಲಿ (Patna) ನಡೆದಿದೆ.
ಪಾಟ್ನಾದ ಫುಲ್ವಾರಿ ಶರೀಫ್‍ನ ಫೈಸಲ್ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಈ ಭೀಕರ ಕೃತ್ಯದ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸಿಸಿಟಿವಿ ದೃಶ್ಯಾವಳಿಯಲ್ಲಿ ಅನಾಮಿಕನೊಬ್ಬ ಕಾಲೋನಿಯಲ್ಲಿ ನಾಯಿಯೊಂದಿಗೆ ಅಸಹಜ ಕೃತ್ಯವನ್ನು ಬಹಿರಂಗವಾಗಿ ಮಾಡುತ್ತಿರುವುದು ಕಂಡುಬಂದಿದೆ. ವೀಡಿಯೋ ವೈರಲ್ ಆಗುತ್ತಿದ್ದಂತೆ ಫುಲ್ವಾರಿ ಷರೀಫ್ ಪೊಲೀಸ್ ಠಾಣೆಯಲ್ಲಿ NGOವೊಂದು ದೂರು ನೀಡಿದೆ.
ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪಾಟ್ನಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಬಗ್ಗೆ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಮಾತನಾಡಿ, ಘಟನೆಗೆ ಸಂಬಂಧಿಸಿದಂತೆ ದಾಖಲೆಯೊಂದಿಗೆ ದೂರು ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ತನಿಖೆ ನಡೆಸುತ್ತದ್ದೇವೆ ಎಂದು ತಿಳಿಸಿದರು.