ಶುಕ್ರವಾರ, ಮೇ 3, 2024
ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾಯಿ ಕಡಿತಕ್ಕೊಳಗಾಗಿ ಸೂಕ್ತ ಚಿಕಿತ್ಸೆ ಸಿಗದೇ ಬಾಲಕ ಸಾವು

Twitter
Facebook
LinkedIn
WhatsApp
ನಾಯಿ ಕಡಿತಕ್ಕೊಳಗಾಗಿ ಸೂಕ್ತ ಚಿಕಿತ್ಸೆ ಸಿಗದೇ ಬಾಲಕ ಸಾವು

ಚಿಕ್ಕಬಳ್ಳಾಪುರ: ನಾಯಿ ಕಡಿತಕ್ಕೊಳಗಾಗಿದ್ದ 5 ವರ್ಷದ ಬಾಲಕನಿಗೆ ಸೂಕ್ತ ಇಂಜೆಕ್ಷನ್ ನೀಡಿಲ್ಲ, ಹೀಗಾಗಿ ಮಗುವಿಗೆ ಜ್ವರ ಬಂದು ಸಾವನ್ನಪ್ಪಿದೆ ಎಂದು ಬಾಲಕನ ಪೋಷಕರು ಸರ್ಕಾರಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಗೌರಿಬಿದನೂರಿನ ಹೊಸೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ನಡೆದಿದೆ.

ಗೌರಿಬಿದನೂರು ತಾಲೂಕು ಕೋಟಾಲದಿನ್ನೆ ಗ್ರಾಮದ ಫೈರೋಜ್ ಹಾಗೂ ಫಾಮೀದಾ ದಂಪತಿಯ 5 ವರ್ಷದ ಪುತ್ರ ಸಮೀರ್ ಮೃತ ಬಾಲಕ. ಅಂದಹಾಗೆ ಕಳೆದ ಆಕ್ಟೋಬರ್ 30 ರಂದು ನಾಯಿ ಕಡಿದಿತ್ತು. ಹೊಸೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ನಾಯಿ ಕಡಿತಕ್ಕೆ ಇಂಜೆಕ್ಷನ್ ಪಡೆದುಕೊಂಡಿದ್ದಾರೆ. ಆದರೆ ತದನಂತರ ನಾಯಿ ಕಡಿದ 5 ದಿನಗಳ ನಂತರ ಮಗುವಿಗೆ ತೀವ್ರತರ ಜ್ವರ ಬಂದಿದೆ. ಗೌರಿಬಿದನೂರು ನಗರದ ಖಾಸಗಿ ಆಸ್ಪತ್ರೆಗೆ ಬಾಲಕನನ್ನು ದಾಖಲಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಸಾವನ್ನಪ್ಪಿದ್ದಾನೆ.

ಇಂದಿರಾಗಾಂಧಿ ಆಸ್ಪತ್ರೆಯ ವೈದ್ಯರು, ನಾಯಿ ಕಡಿತಕ್ಕೆ ಸೂಕ್ತ ಇಂಜೆಕ್ಷನ್ ನೀಡಿಲ್ಲ. ಮಗುವಿನ ಮೆದುಳಿಗೆ ವಿಷ ಏರಿದೆ. ಆದ್ದರಿಂದ ಬಾಲಕ ಸಾವನ್ನಪ್ಪಿದ್ದಾನೆ ಎಂದು ಪೋಷಕರಿಗೆ ತಿಳಿಸಿದ್ದಾರೆ. ಇದರಿಂದ ನೊಂದ ಬಾಲಕನ ಪೋಷಕರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಗಮಿಸಿ, ತಮ್ಮ ಮಗುವಿಗೆ ನೀಡಿದ ಇಂಜೆಕ್ಷನ್‌ ಮಾಹಿತಿ ನೀಡುವಂತೆ ಕೇಳಿದ್ರೂ ಪುಸ್ತಕದಲ್ಲಿ ಬಾಲಕನಿಗೆ ನೀಡಿದ ಇಂಜೆಕ್ಷನ್ ಚಿಕಿತ್ಸೆ ಬಗ್ಗೆ ಮಾಹಿತಿಯನ್ನೇ ದಾಖಲಿಸಿಲ್ಲ.

ಇದರಿಂದ ಕೆರಳಿದ ಬಾಲಕನ ಪೋಷಕರು, ಸಂಬಂಧಿಕರು ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಪ್ರತಿಭಟನೆ ನಡೆಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಟಿಎಚ್‌ಓ ರತ್ನಮ್ಮ ಪೋಷಕರ ಮನವೊಲಿಸಿ, ಸಿಬ್ಬಂದಿ ವಿರುದ್ದ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್‌ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ತೀರ್ಥಕ್ಷೇತ್ರಗಳಲ್ಲೊಂದಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ

ಅಂಕಣ