ಬುಧವಾರ, ಏಪ್ರಿಲ್ 24, 2024
ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!-ಶುಕ್ರವಾರ ಮತದಾನದಂದು ಮತಗಟ್ಟೆಯಲ್ಲಿ ಮೊಬೈಲ್ ಫೋನ್ ಕೊಂಡೊಯ್ಯಲು ನಿಷೇಧ..!-164.53 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!-ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!-ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ; ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ-ಬರ್ತ್ ಡೇ ಕೇಕ್ ತಿಂದು ಬಾಲಕಿ ಸಾವು ಪ್ರಕರಣ: ಅಸಲಿ ಕಾರಣ ಬಯಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾರಾವಿ ,ಉಜಿರೆ , ಸುಬ್ರಮಣ್ಯ ಸೇರಿ ದ.ಕ ದ 17 ಗ್ರಾಮ ಪಂಚಾಯತ್ ಸೀಲ್ ಡೌನ್.

Twitter
Facebook
LinkedIn
WhatsApp
ನಾರಾವಿ ,ಉಜಿರೆ , ಸುಬ್ರಮಣ್ಯ  ಸೇರಿ ದ.ಕ ದ 17 ಗ್ರಾಮ ಪಂಚಾಯತ್ ಸೀಲ್ ಡೌನ್.


ಮಂಗಳೂರು : ಕೊರೊನಾ ವೈರಸ್ ಸೋಂಕು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ದಕ್ಷಿನ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ವಾರ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲೀಗ ಕೊರೊನಾ ನಿಯಂತ್ರಣಕ್ಕೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಮುಂದಾಗಿದೆ. ಇದೀಗ ಜಿಲ್ಲೆಯ 17 ಗ್ರಾಪಂಗಳನ್ನು ಜೂ.14ರ ಬೆಳಗ್ಗೆ 9ರಿಂದ 21ರ ತನಕ ಬೆಳಗ್ಗೆ 9 ರವರೆಗೆ ಸೀಲ್‌ಡೌನ್‌ ಮಾಡಿ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.
ಮಂಗಳೂರು ತಾಲೂಕಿನ ಕೊಣಾಜೆ ಮತ್ತು ನೀರುಮಾರ್ಗ, ಬೆಳ್ತಂಗಡಿ ತಾಲೂಕಿನ ನಾರಾವಿ, ಕೊಯ್ಯೂರು, ಮಿತ್ತಬಾಗಿಲು, ಮಾಲಾಡಿ, ನೆರಿಯ, ಲಾಯಿಲ, ಉಜಿರೆ ಮತ್ತು ಚಾರ್ಮಾಡಿ, ಸುಳ್ಯ ತಾಲೂಕಿನ ಐವರ್ನಾಡು, ಅಮರ ಮುಡ್ನೂರು, ಕೊಲ್ಲಮೊಗರು, ಗುತ್ತಿಗಾರು, ಅರಂತೋಡು, ಕಡಬ ತಾಲೂಕಿನ ಸುಬ್ರಮಣ್ಯ ಹಾಗೂ ಸವಣೂರು ಸಹಿತ 17 ಗ್ರಾಪಂಗಳನ್ನು ಸೀಲ್ ಡೌನ್ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 50ಕ್ಕಿಂತ ಹೆಚ್ಚು ಸಕ್ರೀಯ ಕೊರೊನಾ ಪ್ರಕರಣಗಳು ಇರುವ ಗ್ರಾಮಗಳನ್ನು ಸೀಲ್ ಡೌನ್ ಮಾಡಿ ಆದೇಶ ಹೊರಡಿಸಲಾಗಿದೆ.
ಸೀಲ್ ಡೌನ್ ಆಗಿರುವ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಹೊರಗಿನ ಸಂಪರ್ಕವನ್ನು ಸಂಪೂರ್ಣವಾಗಿ ಕಡಿತ ಮಾಡಲಾಗಿದೆ. ಗ್ರಾಮದಿಂದ ಹೊರಗೆ ಹೋಗುವವರಿಗೆ ಹಾಗೂ ಒಳ ಬರುವವರಿಗೆ ಸಂಪೂರ್ಣವಾಗಿ ನಿರ್ಬಂಧ ಹೇರಲಾಗಿದೆ. ಆಸ್ಪತ್ರೆ, ಮೆಡಿಕಲ್, ಔಷಧಿ ಕೇಂದ್ರ, ಲ್ಯಾಬ್ ಹೊರತು ಪಡಿಸಿ ಉಳಿದೆಲ್ಲಾ ಸೇವೆಗಳ ಮೇಲೆ ನಿರ್ಬಂಧ ವಿಧಿಸಲಾಗಿದೆ. ಅಲ್ಲದೇ ಅಗತ್ಯ ವಸ್ತುಗಳಾದ ಹಾಲಿನ ಬೂತ್ ತೆರೆಯಲು ಅವಕಾಶ ಕಲ್ಪಿಸಲಾಗಿದ್ದು, ಪೆಟ್ರೋಲ್ ಬಂಕ್ ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಕೊರೋನ ಸೋಂಕು ತಗ್ಗಿಸಲು ಕೆಲವು ಕಠಿಣ ನಿರ್ಧಾರ ಕೈಗೊಳ್ಳುವುದು ಅಗತ್ಯವಾಗಿದ್ದು, ನಾಗರಿಕರು ಸಹಕರಿಸಬೇಕು ಎಂದು ದ.ಕ. ಜಿಪಂ ಸಿಇಒ ಡಾ.ಕುಮಾರ್‌ ಮಾಹಿತಿ ನೀಡಿದ್ದಾರೆ.
ಇನ್ನು ಗ್ರಾಮ ಪಂಚಾಯತ್ ಸೀಲ್ ಡೌನ್ ಕಾರ್ಯವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಪಡೆಯನ್ನು ಆರಂಭಿಸಲಾಗಿದೆ. ಪ್ರಮುಖವಾಗಿ ಈ ಕಾರ್ಯಪಡೆ ಗ್ರಾಮದ ಜನರ ಮೇಲೆ ಕಣ್ಗಾವಲು ಇಡಲಿದೆ. ಅಲ್ಲದೇ ಜನರ ಅವಶ್ಯಕತೆಯ ಆಧಾರದ ಮೇಲೆ ಅಗತ್ಯವಸ್ತುಗಳನ್ನು ಪೂರೈಕೆ ಮಾಡಲಿದೆ. ಅಲ್ಲದೇ ನಿಯಮಗಳನ್ನು ಪಾಲನೆ ಮಾಡುವ ನಿಟ್ಟಿನಲ್ಲಿ ತಹಶೀಲ್ದಾರ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ, ಪಂಚಾಯತ್ ಪಿಡಿಓ, ಪೊಲೀಸ್ ವೃತ್ತ ನಿರೀಕ್ಷಕರಿಗೆ ಜವಾಬ್ದಾರಿಯನ್ನು ವಹಿಸಲಾಗಿದೆ. ಸೀಲ್ ಡೌನ್ ನಿಯಮಗಳನ್ನು ಪಾಲನೆ ಮಾಡದವರ ವಿರುದ್ದ ಕ್ರಮಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು