ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾಳೆ SSLC ಪಲಿತಾಂಶ ಪ್ರಕಟ ; ಇಲ್ಲಿದೆ ಲಿಂಕ್

Twitter
Facebook
LinkedIn
WhatsApp
ನಾಳೆ SSLC ಪಲಿತಾಂಶ ಪ್ರಕಟ ; ಇಲ್ಲಿದೆ ಲಿಂಕ್
ಪತ್ರಿಕಾ ಪ್ರಕಟಣೆಯಲ್ಲೇನಿದೆ?

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕೃತವಾಗಿ ಫಲಿತಾಂಶದ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಮಾರ್ಚ್/ಏಪ್ರಿಲ್ 2024ರಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ-1 ನಡೆದಿದ್ದವು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ 09.05.2024 ರಂದು ಬೆಳಗ್ಗೆ 10.30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003 ಇಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ. 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ:09.05.2024ರ ಬೆಳಗ್ಗೆ 10.30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ತಿಳಿಸಲಾಗಿದೆ ಎಂದು ತಿಳಿಸಿದೆ.

ಫಲಿತಾಂಶ ನೋಡುವುದು, ಡೌನ್ಲೋಡ್ ಮಾಡುವುದು ಹೇಗೆ?
  • ಅಧಿಕೃತ ವೆಬ್ಸೈಟ್ kseab.karnataka.gov.in ಮತ್ತು karresults.nic.in ಗೆ ಭೇಟಿ ನೀಡಿ

  • ಮುಖಪುಟದಲ್ಲಿ SSLC Results 2024 ಲಿಂಕ್ ಅನ್ನು ಕ್ಲಿಕ್ ಮಾಡಿ

  • ಹೊಸ ಲಾಗಿನ್ ಪುಟವು ತೆರೆಯುತ್ತದೆ

  • ನಿಮ್ಮ ಅಪ್ಲಿಕೇಶನ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ

  • ಆಗ ಫಲಿತಾಂಶ ಕಾಣಿಸಿಕೊಳ್ಳುತ್ತದೆ, ಅಲ್ಲಿ ಡೌನ್ಲೋಡ್ ಮಾಡಿ

ಕಳೆದ ವರ್ಷ, ಕರ್ನಾಟಕ ಬೋರ್ಡ್ ಎಸ್ಎಸ್ಎಲ್ಸಿ ಫಲಿಶಾಂಶವನ್ನು ಮೇ 08 ರಂದು ಘೋಷಿಸಿತ್ತು. ಒಟ್ಟಾರೆ ಉತ್ತೀರ್ಣ ಪ್ರಮಾಣ ಶೇ 83.89 ರಷ್ಟು ದಾಖಲಾಗಿತ್ತು. ಎಸ್ಎಸ್ಎಲ್ಸಿ ಪರೀಕ್ಷೆಗೆ ರಾಜ್ಯಾದ್ಯಂತ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಅದರದಲ್ಲಿ 4,41,910 ಬಾಲಕರಾದರೆ, 4,28,058 ಬಾಲಕಿಯರು. ಒಟ್ಟು ವಿದ್ಯಾರ್ಥಿಗಳ ನೋಂದಣಿಯಲ್ಲಿ 8,10,368 ಸರ್ಕಾರಿ ಶಾಲಾ ವಿದ್ಯಾರ್ಥಿಗಳು, 18,225 ಖಾಸಗಿ ವಿದ್ಯಾರ್ಥಿಗಳು ಹಾಗೂ 41,375 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.

ಅನುತ್ತೀರ್ಣರಾದರೆ ಮುಂದೇನು?

ನಾಳೆ ಫಲಿತಾಂಶದಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಚಿಂತಿಸುವ ಅಗತ್ಯವಿಲ್ಲ. ಈ ಶೈಕ್ಷಣಿಕ ಸಾಲಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಓದುತ್ತಿರುವವರು ಹಾಗೂ ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆಯನ್ನು 3 ಬಾರಿ ಬರೆಯಬಹುದು. ಈ ಹಿಂದೆ ಅನುತ್ತೀರ್ಣರಾದವರು ಪೂರಕ ಪರೀಕ್ಷೆ ಬರೆಯಬೇಕಿತ್ತು. ಆದರೆ ಈ ಸಾಲಿನಿಂದ ಪಾಸಾಗಲಿ, ಫೇಲಾಗಲಿ 3 ಬಾರಿ ಪರೀಕ್ಷೆ ಬರೆಯುವ ಅವಕಾಶ ಇದೆ. ಪಾಸಾದರು ಸಹ ಅಂಕ ಹೆಚ್ಚಿಸಿಕೊಳ್ಳಲು ಮತ್ತೆ ಪರೀಕ್ಷೆ-2, ಪರೀಕ್ಷೆ-3 ಬರೆಯಬಹುದು. 3 ಪರೀಕ್ಷೆಗಳಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದ ಪರೀಕ್ಷೆಯನ್ನು ಆಯ್ಕೆ ಮಾಡುವ ಅವಕಾಶ ನೀಡಲಾಗಿದೆ. ಆದ್ದರಿಂದ ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದರೆ / ಕಡಿಮೆ ಅಂಕಗಳು ಬಂದರೆ ಪರೀಕ್ಷೆ-2 ತೆಗೆದುಕೊಳ್ಳಬಹುದು. ಪರೀಕ್ಷೆ-2 ಅನುತ್ತೀರ್ಣರಾದರೆ / ಕಡಿಮೆ ಅಂಕ ಬಂದರೆ ಪರೀಕ್ಷೆ-3 ತೆಗೆದುಕೊಳ್ಳಬಹುದು. ಇದರಲ್ಲಿ ಯಾವುದೇ ಪರೀಕ್ಷೆ ಪೂರಕ ಪರೀಕ್ಷೆ ಆಗಿರುವುದಿಲ್ಲ. ಅಂಕಪಟ್ಟಿಯಲ್ಲಿ ಫ್ರೆಶ್ ಸ್ಟೂಡೆಂಟ್‌ ಎಂದೇ ನಮೂದು ಆಗುತ್ತದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ