ಈ ಸಂಘ ‘ನಿತ್ಯ ದುಡಿ ಸತ್ಯ ನುಡಿ ಸ್ವಲ್ಪ ಕುಡಿ ಮನೆಗೆ ನಡೆ’ ಎಂಬ ಧ್ಯೇಯ ವಾಕ್ಯದೊಂದಿದೆ ಆರಂಭವಾಗಿದೆ. ಇನ್ನೊಂದು ವಿಶೇಷ ಏನಪ್ಪಾ ಅಂದ್ರೆ, ಸಂಘದ ಉದ್ಘಾಟನೆಗೆ (Inauguration) ಅಬಕಾರಿ ಸಚಿವ ಗೋಪಾಲಯ್ಯ ಅವರನ್ನು ಆಹ್ವಾನಿಸಲು ಸಂಘದ ಪದಾಧಿಕಾರಿಗಳು ಸಜ್ಜಾಗಿದ್ದಾರೆ.
ಸರ್ಕಾರ ರಾಜ್ಯದಲ್ಲಿ ಮದ್ಯವನ್ನು ಸಂಪೂರ್ಣ ನಿಷೇಧ ಮಾಡಬೇಕು. ಇಲ್ಲವಾದರೆ ನಮ್ಮ ಬೇಡಿಕೆಗಳನ್ನು ಸಂಪೂರ್ಣವಾಗಿ ಈಡೇರಿಸಬೇಕು. ಇಲ್ಲದಿದ್ದರೆ ನಮ್ಮ ಸಂಘದ ವತಿಯಿಂದ ಉಗ್ರವಾದ ಹೋರಾಟ ಹಮ್ಮಿಕೊಳ್ಳುತೇವೆ ಎಂದು ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ತಿಳಿಸಿದ್ದಾರೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?