ಶುಕ್ರವಾರ, ಮಾರ್ಚ್ 29, 2024
ಶಿವಸೇನೆ ಗೆ ಸೇರ್ಪಡೆಯಾದ ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?-ನಟಿ ಊರ್ಮಿಳಾ ಸಾಫ್ಟ್‌ ಪೋರ್ನ್‌ ಸ್ಟಾರ್ ಎಂಬ ಹೇಳಿಕೆ ಸಮರ್ಥಿಸಿಕೊಂಡ ಕಂಗನಾ ರಣಾವತ್..!-ಜಗತ್ತಿನ ಅತಿದೊಡ್ಡ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅನಾ ಜುಲಿಯಾ ಹಾವು ಸಾವು.!-ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!-ಸುಮಲತಾ ಅವರು ನನಗೆ ಶತ್ರುವಲ್ಲ; ಸಮಯ ಬಂದಾಗ ಮಾತನಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ-ಕೇರಳ: 10 ಕೋಟಿ ಲಾಟರಿ ಗೆದ್ದ ಆಟೋ ಚಾಲಕ ರಾತ್ರೋ ರಾತ್ರಿ ಕೋಟ್ಯಾಧಿಪತಿ..!-ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಿಂತಿದ್ದ ಬಸ್‌ಗೆ ಬೈಕ್‌ ಡಿಕ್ಕಿ, ಸವಾರ ದುರ್ಮರಣ

Twitter
Facebook
LinkedIn
WhatsApp
ನಿಂತಿದ್ದ ಬಸ್‌ಗೆ ಬೈಕ್‌ ಡಿಕ್ಕಿ, ಸವಾರ ದುರ್ಮರಣ

ಬೆಂಗಳೂರು(ಜ.14): ವೇಗವಾಗಿ ದ್ವಿಚಕ್ರ ವಾಹನ ಚಾಲನೆ ಮಾಡುವಾಗ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಖಾಸಗಿ ಶಾಲಾ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ದುರ್ಘಟನೆ ಯಲಹಂಕ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೈಸೂರು ಮೂಲದ ತೇಜಸ್ವಿ(21) ಮೃತ ಸವಾರ. ದ್ವಿಚಕ್ರ ವಾಹನದಲ್ಲಿ ಗುರುವಾರ ರಾತ್ರಿ 11.50ರ ಸುಮಾರಿಗೆ ರಾಯಲ್‌ ಆರ್ಕಿಡ್‌ ರೆಸಾರ್ಟ್‌ ಕಡೆಯಿಂದ ಯಲಹಂಕ ಉಪನಗರದ ಕಡೆಗೆ ಬರುವಾಗ ಮಾರ್ಗ ಮಧ್ಯೆ ಅಲ್ಲಾಳಸಂದ್ರ ಕೆರೆ ಸಮೀಪದ ಕೋಡಿ ಕರಿಮಾರಿಯಮ್ಮ ದೇವಸ್ಥಾನ ಬಳಿ ಅಪಘಾತವಾಗಿದೆ.

ಮೈಸೂರು ಮೂಲದ ತೇಜಸ್ವಿ ಯಲಹಂಕ ಉಪನಗರದಲ್ಲಿರುವ ದೊಡ್ಡಮ್ಮನ ಮನೆಯಲ್ಲಿ ಉಳಿದುಕೊಂಡು ನಗರದ ಸಿಂಧಿ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಬಿಎ ವ್ಯಾಸಂಗ ಮಾಡುತ್ತಿದ್ದ. ಗುರುವಾರ ಬೆಳಗ್ಗೆ ಕಾಲೇಜಿಗೆ ಹೋಗಿ ರಾತ್ರಿ ಮನೆಗೆ ವಾಪಾಸಾಗುವಾಗ ರಸ್ತೆ ಬದಿ ನಿಂತಿದ್ದ ಖಾಸಗಿ ಶಾಲಾ ವಾಹನಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸಹಿತ ತೇಜಸ್ವಿ ರಸ್ತೆಗೆ ಬಿದ್ದಿದ್ದಾನೆ. ಹೆಲ್ಮೆಟ್‌ ಧರಿಸಿರಲಿಲ್ಲ. ಹಾಗಾಗಿ ತಲೆಗೆ ಗಂಭೀರ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿದೆ.

ಕೂಡಲೇ ಸ್ಥಳೀಯರು ಗಾಯಾಳುವನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಪರೀಕ್ಷೆ ಮಾಡಿದ ವೈದ್ಯರು, ತಲೆಗೆ ಏಟು ಬಿದ್ದು ತೀವ್ರ ರಕ್ತಸ್ರಾವವಾಗಿ ಮಾರ್ಗ ಮಧ್ಯೆಯೇ ತೇಜಸ್ವಿ ಮೃತಪಟ್ಟಿರುವುದಾಗಿ ಘೋಷಿಸಿದರು. ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ರಸ್ತೆ ಬದಿ ಶಾಲಾ ವಾಹನ ನಿಲ್ಲಿಸಿದ್ದೇ ಅಪಘಾತಕ್ಕೆ ಕಾರಣ ಎಂದು ಮೃತನ ತಂದೆ ದೂರು ನೀಡಿದ್ದಾರೆ. ಈ ಸಂಬಂಧ ಯಲಹಂಕ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ