ನಿಧಿಗಾಗಿ ಅಮಾವಾಸ್ಯೆಯಂದು ಬಾಣಂತಿ ಹತ್ಯೆ
Twitter
Facebook
LinkedIn
WhatsApp
ಕೊಪ್ಪಳ, ಮಾ 21 : ಸುಟ್ಟು ಕೊಲೆ ಮಾಡಿದ ಸ್ಥಿತಿಯಲ್ಲಿ ಬಾಣಂತಿಯ ಮೃತದೇಹ ಸಿಕ್ಕಿದ್ದು, ನಿಧಿ ಆಸೆಗಾಗಿ ದುಷ್ಟರು ಈ ಕೃತ್ಯ ಎಸಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.
ಮೃತರನ್ನು ನೇತ್ರಾವತಿ ಕುರಿ (26) ಎಂದು ಗುರುತಿಸಲಾಗಿದೆ. ಕೊಪ್ಪಳ ಜಿಲ್ಲೆಯ ಗಬ್ಬೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನೇತ್ರಾವತಿ ಅವರ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.
ನೇತ್ರಾವತಿ ಒಂದೂವರೆ ತಿಂಗಳ ಬಾಣಂತಿಯಾಗಿದ್ದು, ಸೋಮವಾರ ತಡರಾತ್ರಿ ಕೊಲೆ ಮಾಡಲಾಗಿದೆ. ಅಮಾವಾಸ್ಯೆ ಹಿನ್ನಲೆಯಲ್ಲಿ ನಿಧಿಗಾಗಿ ಆಕೆಯನ್ನು ಸುಟ್ಟು ಕೊಲೆ ಮಾಡಲಾಗಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಮನೆಯಿಂದ ಅಣತಿ ದೂರದಲ್ಲಿ ಸಂಪೂರ್ಣ ಸುಟ್ಟು ಕರಕಲಾಗಿರುವ ಸ್ಥಿತಿಯಲ್ಲಿ ಈಕೆಯ ಶವ ಪತ್ತೆಯಾಗಿದೆ.
ಘಟನಾ ಸ್ಥಳಕ್ಕೆ ಕೊಪ್ಪಳ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.