ಸೋಮವಾರ, ಏಪ್ರಿಲ್ 29, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಹಿಂದೂಯೇತರರಿಗೆ ವ್ಯಾಪಾರಕ್ಕೆ ನಿರ್ಬಂಧ-ಕದ್ರಿ ದೇವಳದಲ್ಲಿ ಅಳವಡಿಸಿದ್ದ ಬ್ಯಾನರ್ ತೆರವು

Twitter
Facebook
LinkedIn
WhatsApp
DB 01012023 kadri

ಮಂಗಳೂರು, ಜ 20 : ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ ಎಂಬುದಾಗಿ ವಿಶ್ವ ಹಿಂದು ಪರಿಷತ್-ಬಜರಂಗದಳದಿಂದ ಅಳವಡಿಸಲಾಗಿದ್ದ ಬ್ಯಾನರ್‌ನ್ನು ಪೊಲೀಸರು ಗುರುವಾರ ತೆರವುಗೊಳಿಸಿದ್ದಾರೆ.

ಜನವರಿ 15ರಿಂದ 21ರವರೆಗೆ ಕದ್ರಿ ಜಾತ್ರೆ ನಡೆಯಲಿದೆ. ಆದರೆ ಈ ಜಾತ್ರೆಯಲ್ಲಿ ಸನಾತನ ಧರ್ಮದ ಹಾಗೂ ಆಚರಣೆಯಲ್ಲಿ ನಂಬಿಕೆ ಹಾಗೂ ವಿಶ್ವಾಸ ಉಳ್ಳ ಹಿಂದೂ ವ್ಯಾಪಾರಿಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶವಿದೆ ಎಂದು ಗುರುವಾರ ಕ್ಷೇತ್ರದ ಬಳಿ ಬ್ಯಾನರ್‍ ಹಾಕಲಾಗಿದೆ.

ಇನ್ನು ಕುಕ್ಕರ್ ಬಾಂಬ್ ಸ್ಪೋಟದ ಆರೋಪಿ ಮೊದಲು ಗುರಿ ಮಾಡಿದ್ದೇ ಕದ್ರಿ ಮಂಜುನಾಥ ದೇವಸ್ಥಾನವನ್ನು. ಅಂತಹ ಮನಸ್ಥಿತಿ ಇರುವವರಿಗೆ ಹಾಗೂ ವಿಗ್ರಹಾರಾಧನೆಯನ್ನು ಹರಾಮ್ ಎಂದು ನಂಬಿರುವವರಿಗೆ ಈ ಜಾತ್ರೆಯಲ್ಲಿ ವ್ಯಾಪಾರಕ್ಕೆ ಅವಕಾಶವಿಲ್ಲ ಎಂದೂ ಬ್ಯಾನರ್‌ನಲ್ಲಿ ಬರೆಯಲಾಗಿತ್ತು.

ಕದ್ರಿ ದೇವಸ್ಥಾನ ಧಾರ್ಮಿಕ ದತ್ತಿ ಇಲಾಖೆಗೆ ಸೇರಿರುವುದರಿಂದ ಬ್ಯಾನರ್‌ ಅಳವಡಿಕೆಗೆ ಆಡಳಿತ ಮಂಡಳಿಯ ಅನುಮತಿ ಇರಲಿಲ್ಲ. ಹೀಗಾಗಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಸಲುವಾಗಿ ಬ್ಯಾನರ್‌ನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಇನ್ನು ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ