ಗುರುವಾರ, ಮೇ 9, 2024
ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಿಶ್ಚಿತಾರ್ಥ ಮಾಡಿಕೊಂಡ ಯುವಕನಿಗೆ ಚಾಕು ಇರಿದ ಅಪ್ರಾಪ್ತ ಬಾಲಕಿ

Twitter
Facebook
LinkedIn
WhatsApp
gangrape 2 1649494371 2

ಹಾವೇರಿ: ಪ್ರೀತಿಸಿದ ಹುಡುಗನಿಗಾಗಿ ನಿಶ್ಚಿತಾರ್ಥ ಮಾಡಿಕೊಂಡ ಯುವಕನ ಕುತ್ತಿಗೆಗೆ ಅಪ್ರಾಪ್ತ ಬಾಲಕಿಯೊಬ್ಬಳು ಚಾಕು ಇರಿದ ಘಟನೆ ಜಿಲ್ಲೆಯ ರಾಣೇಬೆನ್ನೂರು ಪಟ್ಟಣದ ಹೊರವಲಯದ ಓಂ ಪಬ್ಲಿಕ್ ಸ್ಕೂಲ್ ಬಳಿ ನಡೆದಿದೆ. ಹೌದು ಅಪ್ರಾಪ್ತ ಬಾಲಕಿ ಭಾವಿ ಪತಿಗೆ ಪಾರ್ಕ್​ಗೆ ಕರೆದಿದ್ದಾಳೆ. ನಿನಗೆ ಒಂದು ಗಿಪ್ಟ್ ಕೊಡಬೇಕು ರೀಲ್ಸ್ ಮಾಡೋಣ ನಿನ್ನ ಕೈ ಕಟ್ಟಿ ಪೋಟೊ ತೆಗೆಯುತ್ತೇನೆ ಎಂದಿದ್ದು, ಯುವಕ ಕೂಡ ಪ್ರೀತಿಯಿಂದ ಹೇಳುತ್ತಿದ್ದಾಳೆ ಎಂದು ಒಪ್ಪಿದ್ದಾನೆ. ಇದಕ್ಕೆ ಒಪ್ಪಿಕೊಂಡು ಶಿಲುಬೆ ಥರ ಕೈ ಕಟ್ಟಿಸಿಕೊಂಡಿದ್ದ ನಿಶ್ಚಿತಾರ್ಥದವಾದ ಯುವಕನಿಗೆ ‘ ನೋಡು ನನ್ನ ಗಿಪ್ಟ್ ಎಂದು ದೇವೆಂದ್ರಗೌಡ ಎಂಬ ಯುವಕನ ಕುತ್ತಿಗೆಗೆ 17 ವರ್ಷದ ಅಪ್ರಾಪ್ತ ಬಾಲಕಿ ಚೂರಿ ಹಾಕಿದ್ದಾಳೆ.

ಗಂಭೀರವಾಗಿ ಗಾಯಗೊಂಡಿರುವ ಯುವಕನನ್ನ ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ದೇವೆಂದ್ರಗೌಡ ಎಂಬ ಯುವಕ ಹರಪನಹಳ್ಳಿ ತಾಲೂಕಿನಲ್ಲಿ ಸೇಲ್ಸ್​ ಮನ್ ಆಗಿ ಕೆಲಸ ಮಾಡುತ್ತಿದ್ದ, ಮಾರ್ಚ್ 3 ರಂದು ಅಪ್ರಾಪ್ತ ಬಾಲಕಿ ಜೊತೆ ಎಂಗೇಜ್ಮೇಂಟ್​ ಆಗಿದ್ದನು.

 ಆದರೀಗ ಲವ್ ಮಾಡಿದ್ದ ಹುಡುಗನಿಗಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದವನನ್ನೆ ಕೊಲ್ಲಲು ಯತ್ನಿಸಿದ ಈ ಖತರ್ನಾಕ್ ಬಾಲಕಿಯ ಕೃತ್ಯಕ್ಕೆ ಪೋಲಿಸರೇ ಬೆಚ್ಚಿಬಿದ್ದಿದ್ದಾರೆ. ಯುವಕನ ಪೋಷಕರಿಂದ ಅಪ್ರಾಪ್ತ ಬಾಲಕಿಯ ಮೇಲೆ ದೂರು ಕೊಡಲಾಗಿದ್ದು, ಪ್ರಕರಣ ಗಂಭೀರ ಸ್ವರೂಪ ಪಡೆದ ಹಿನ್ನಲೆ ಆರೋಪಿ ಯುವತಿಯನ್ನ ಅರೆಸ್ಟ್ ಮಾಡಲಾಗಿದೆ. ಈ ಕುರಿತು ಹಲಗೇರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ