ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಕೇಸು

Twitter
Facebook
LinkedIn
WhatsApp
clipboard 2021 11 21t042709460 1052955 1637449248 4

ಬೆಳಗಾವಿ (ಮಾ.31): ಅರಿಶಿಣ ಕುಂಕುಮ ಕಾರ್ಯಕ್ರಮಕ್ಕೆ ಅನುಮತಿ ಪಡೆದು, ಕಾರ್ಯಕ್ರಮದಲ್ಲಿ ಜನರಿಗೆ ಊಟದ ವ್ಯವಸ್ಥೆ ಮಾಡಿರುವುದು, ಪತಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರ ಹೆಸರಲ್ಲಿ ಹಾಡು ರಚಿಸಿ, ಅದರಲ್ಲಿ ಬಿಜೆಪಿ ಚಿಹ್ನೆ ಬಳಸಿರುವ ಹಿನ್ನೆಲೆಯಲ್ಲಿ ನಿಪ್ಪಾಣಿಯ ರಣರಾಗಿಣಿ ಮಹಿಳಾ ಮಂಡಳ ಅಧ್ಯಕ್ಷೆ, ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ನಿಪ್ಪಾಣಿ ಶಹರ ಪೊಲೀಸ್‌ ಠಾಣೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ. ಶಶಿಕಲಾ ಜೊಲ್ಲೆ ಅವರು ನಿಪ್ಪಾಣಿಯಲ್ಲಿ ಅರಿಶಿಣ ಕುಂಕುಮ ಕಾರ್ಯಕ್ರಮ ಆಯೋಜಿಸಲು ಅನುಮತಿ ಪಡೆದಿದ್ದರು. 

ಆದರೆ, ಕಾರ್ಯಕ್ರಮದಲ್ಲಿ ಪಾಲ್ಗೊಂಡ ಜನರಿಗೆ ಊಟದ ವ್ಯವಸ್ಥೆಯನ್ನೂ ಮಾಡಿದ್ದರು. ಜತೆಗೆ ಕಾರ್ಯಕ್ರಮದಲ್ಲಿ ಚಿಕ್ಕೋಡಿ ಸಂಸದ ಅಣ್ಣಸಾಹೇಬ ಜೊಲ್ಲೆ ಅವರ ಹಾಡು ಹಾಗೂ ಬಿಜೆಪಿ ಚಿಹ್ನೆಗಳನ್ನೂ ಪ್ರದರ್ಶಿಸಿದ್ದಾರೆ. ಈ ಕುರಿತು ನಿಪ್ಪಾಣಿ ಪುರಸಭೆ ಪೌರಾಯುಕ್ತ ಜಗದೀಶ ಬಾಬು ಹುಲಗೆಜ್ಜಿ ಅವರು ನಿಪ್ಪಾಣಿ ಶಹರ ಠಾಣೆಗೆ ದೂರು ಸಲ್ಲಿಸಿದ್ದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

ಶಶಿಕಲಾ ಜೊಲ್ಲೆ ನಿಪ್ಪಾಣಿಯ ಬಿಜೆಪಿ ಅಭ್ಯರ್ಥಿ: ಇಂದು ತಾವು ಮಾಡುವ ಸಂಕಲ್ಪ ಮೇ ಮೊದಲ ವಾರದಲ್ಲಿ ಸಿದ್ಧಿಯಾಗಬೇಕಾದರೇ ಶಶಿಕಲಾ ಜೊಲ್ಲೆ ಅವರನ್ನು ಮತ್ತೆ ಗೆಲ್ಲಿಸಿ, ಮತ್ತೊಮ್ಮೆ ಸಚಿವರಾಗಲು ಸಂಕಲ್ಪ ಮಾಡುವಂತೆ ವಿಧಾನ ಪರಿಷತ್‌ ಸದಸ್ಯ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕರೆ ನೀಡಿದರು. ನಿಪ್ಪಾಣಿ ನಗರದಲ್ಲಿ ಹಮ್ಮಿಕೊಂಡ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಸಾರ್ವಜನಿಕ ಸಮಾರಂಭ ಉದ್ದೇಶಿಸಿ ಮಾತನಾಡಿದ ಅವರು, ಶಶಿಕಲಾ ಜೊಲ್ಲೆ ಅವರೇ ನಿಪ್ಪಾಣಿಯ ಬಿಜೆಪಿ ಅಭ್ಯರ್ಥಿ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಬಾರಿ ಗೆಲುವು ಸಾಧಿಸುವ ಮೂಲಕ ಶಶಿಕಲಾ ಜೊಲ್ಲೆ ಅವರು ಹ್ಯಾಟ್ರಿಕ್‌ ಹೀರೋಯಿನ್‌ ಆಗುವುದರಲ್ಲಿ ಎರಡು ಮಾತಿಲ್ಲ ಎಂದು ಭವಿಷ್ಯ ನುಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮಾತನಾಡಿ, ಕಾಂಗ್ರೆಸ್‌ ಪಕ್ಷ ಮಾಡುತ್ತಿರುವ ಟೀಕೆಗಳಿಗೆ ಯಾವುದೇ ಅರ್ಥವಿಲ್ಲ. ಸುಳ್ಳು ಆರೋಪಕ್ಕೆ ಜನರು ಕಿಮ್ಮತ್ತು ಕೊಡುವುದಿಲ್ಲ. ಸುಖಾ ಸುಮ್ಮನೆ ತಳ ಬುಡವಿಲ್ಲದೇ ಟೀಕೆ, ಆರೋಪಗಳನ್ನು ಮಾಡುವುದನ್ನು ಕಾಂಗ್ರೆಸ್‌ ಬಿಡಬೇಕು ಎಂದು ಸಲಹೆ ನೀಡಿದರು. ಕಳೆದ 9 ವರ್ಷಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿರುವ ಕಾರ್ಯಗಳಿಗೆ ಇಡೀ ಜಗತ್ತೇ ಮೆಚ್ಚುಗೆ ಸೂಚಿಸಿದೆ. ಆದರೇ, ಕಾಂಗ್ರೆಸ್‌ ಮಾತ್ರ ಹುರುಳಿಲ್ಲದ ಆರೋಪ ಮಾಡುತ್ತಿದೆ. ಮೋದಿ ನೇತೃತ್ವದಲ್ಲಿ ದೇಶ, ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಅಭಿವೃದ್ಧಿ ಕಂಡಿದ್ದು, ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ 5,700 ಕೋಟಿ ಮೊತ್ತದ ಉತ್ತರ ಕರ್ನಾಟಕದ 13 ಏತ ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ನಿಪ್ಪಾಣಿಯಲ್ಲಿ ಮತ್ತೇ ಶಶಿಕಲಾ ಜೊಲ್ಲೆ ವಿಜಯಿಯಾಗಿ, ಮತ್ತೆ ಸಚಿವರಾಗುತ್ತಾರೆ ಎಂದು ಭರವಸೆ ನೀಡಿದರು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಾತನಾಡಿ, ಕನ್ನಡ ಮತ್ತು ಮರಾಠಿ ಭಾಷೆಗಳು ಬೇರೆ ಬೇರೆಯಾಗಿರಬಹುದು. ಆದರೆ, ಸಂಸ್ಕೃತಿ ಮಾತ್ರ ಒಂದೇಯಾಗಿದೆ. ಅಂದು ಬ್ರಿಟೀಷರು ಒಡೆದು ಆಳುವ ನೀತಿ ಅನುಸರಿಸುತ್ತಿದ್ದರೇ ಇಂದು ಕಾಂಗ್ರೆಸ್‌ ಒಡೆದು ಆಳುವ ನೀತಿ ಅನುಸರಿಸುತ್ತಿದೆ. ಕಾಂಗ್ರೆಸ್‌ ನೀಡುತ್ತಿರುವ ಗ್ಯಾರಂಟಿಗಳನ್ನು ನಂಬಬೇಡಿ. ಈ ಭಾರಿ ರಾಜ್ಯದಲ್ಲಿ ಕಾಂಗ್ರೆಸ್‌ ಸೋಲು ಗ್ಯಾರಂಟಿ. ಇವಿಎಮ್ ವಿರುದ್ಧ ದೂರನ್ನು ಕಾಂಗ್ರೆಸ್‌ ಈಗಲೇ ತಯಾರಿಸಿ ಇಟ್ಟುಕೊಳ್ಳಲಿ ಎಂದು ವ್ಯಂಗ್ಯವಾಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist